Facebook Twitter Instagram
    Thursday, July 23
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕರಾವಳಿ ಸುದ್ದಿ»ಮಂಗಳೂರು: ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಕೊಲೆಗೆ ಯತ್ನಿಸಿದ ಪ್ರಕರಣ; ಐವರ ವಿರುದ್ಧ ಪ್ರಕರಣ ದಾಖಲು
    ಕರಾವಳಿ ಸುದ್ದಿ

    ಮಂಗಳೂರು: ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ, ಕೊಲೆಗೆ ಯತ್ನಿಸಿದ ಪ್ರಕರಣ; ಐವರ ವಿರುದ್ಧ ಪ್ರಕರಣ ದಾಖಲು

    January 21, 2023
    Share

    ಮಂಗಳೂರು: ಗಸ್ತು ನಿರತ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಹಾಕಿದ ಆರೋಪದಡಿ ಐವರ ವಿರುದ್ಧ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಮಂಗಳೂರು ಗ್ರಾಮಾಂತರ ಠಾಣೆಯ ಮಲ್ಲಿಕಾರ್ಜುನ ಅಂಗಡಿ ಎಂಬವರು ಪೊಲೀಸ್ ಕಾನ್‌ಸ್ಟೇಬಲ್ ಪ್ರದೀಪ್ ನಾಗನ ಗೌಡರೊಂದಿಗೆ ಜ.20ರ ಮುಂಜಾವ 2ಕ್ಕೆ ಅರ್ಕುಳ ಜಂಕ್ಷನ್‌ನಿಂದ ತುಪ್ಪೆಕಲ್ಲು ಕಡೆಗೆ ಹೋಗುತ್ತಿದ್ದರು. ಈ ವೇಳೆ ರೈಲ್ವೆ ಹಳಿಯ ಪಕ್ಕದಲ್ಲಿರುವ ಕಾಂಕ್ರಿಟ್ ರಸ್ತೆಯ ಬಳಿಯ ಖಾಲಿ ಸ್ಥಳದಲ್ಲಿ ಬಿಳಿ ಬಣ್ಣದ ಆಲ್ಟೋ ಕಾರೊಂದರ ಬಳಿ ಇಬ್ಬರು ಮತ್ತು ಕಾರಿನೊಳಗೆ ಮೂವರಿದ್ದರು ಎನ್ನಲಾಗಿದೆ.

    ಗಸ್ತುನಲ್ಲಿದ್ದ ಮಲ್ಲಿಕಾರ್ಜುನ ಅಂಗಡಿಯವರು ‘ನೀವು ಇಲ್ಲಿ ಏನು ಮಾಡುತ್ತಿದ್ದೀರಿ? ಎಂದು ಕೇಳಿ ಅವರ ಕಡೆಗೆ ಟಾರ್ಚ್ ಹಾಯಿಸಿದ್ದಾರೆ. ಆಗ ಕಾರಿನ ಹೊರಗಡೆ ನಿಂತಿದ್ದ ಇಬ್ಬರು ಪೊಲೀಸರತ್ತ ಕಲ್ಲುಗಳನ್ನು ಎತ್ತಿ ಎಸೆದಿದ್ದಾರೆ ಎನ್ನಲಾಗಿದೆ. ಅವರು ಎಸೆದ ಕಲ್ಲುಗಳು ಇಬ್ಬರು ಪೊಲೀಸರ ಕೈಗೆ ತಾಗಿ ತರಚಿದ ಗಾಯಗಳಾಗಿವೆ. ಕಾರಿನ ಹೊರಗಡೆ ಇದ್ದ ಇಬ್ಬರು ಕಾರಿಗೆ ಹತ್ತಿದೊಡನೆ ಅದರ ಚಾಲಕ ಕಾರನ್ನು ಸ್ಟಾರ್ಟ್ ಮಾಡಿ ಕೊಲೆ ಮಾಡುವ ಉದ್ದೇಶದಿಂದ ಅತೀ ವೇಗವಾಗಿ ಇವರ ಮೇಲೆ ಹತ್ತಿಸಲು ಯತ್ನಿಸಿದ್ದಾನೆ ಎನ್ನಲಾಗಿದೆ. ಇಬ್ಬರೂ ರಸ್ತೆಯ ಪಕ್ಕಕ್ಕೆ ಹಾರಿ ಬಚಾವಾಗಿದ್ದಾರೆ ಎನ್ನಲಾಗಿದೆ. ಆರೋಪಿಗಳು ಕರ್ತವ್ಯಕ್ಕೆ ಅಡ್ಡಿಪಡಿಸಿ ಕಲ್ಲು ಎಸೆದು, ಕಾರು ಹಾಯಿಸಿ, ಕೊಲೆಗೆ ಯತ್ನಿಸಿರುವುದಾಗಿ ನೀಡಿದ ದೂರಿನಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Post Views: 229

    Related Posts

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026

    ಮಂಗಳೂರು: ಮನೆ ದುರಸ್ತಿ ಕಾಮಗಾರಿಗೆ ಬಂದ ಕಾರ್ಮಿಕನಿಂದ ₹6.37 ಲಕ್ಷ ಮೌಲ್ಯದ ಚಿನ್ನಾಭರಣ ಕಳವು..!! ಆರೋಪಿಯ ಬಂಧನ

    July 22, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

     ಶಾಸಕ ಬಿಪಿ ಹರೀಶ್ ಗೆ ಮೊಟ್ಟೆ ಎಸೆತ : ಕಮಿಷನರ್ ಗೆ ಬಿಜೆಪಿ ನಾಯಕರಿಂದ ದೂರು ಸಲ್ಲಿಕೆ

    July 22, 2026

    ಫರಂಗಿಪೇಟೆ ಬ್ಯಾಂಕ್‌ ಕಳ್ಳತನ ಯತ್ನ ಪ್ರಕರಣ: ಆರೋಪಿಗಳ ಪತ್ತೆಗೆ ಪ್ರತ್ಯೇಕ ವಿಶೇಷ ತಂಡ

    July 22, 2026

    ಬೆಳ್ತಂಗಡಿ: ಖೋಟಾ ನೋಟು ದಂಧೆ ಪ್ರಕರಣ : ನಾಲ್ವರಿಗೆ ಮತ್ತೆ ಪೊಲೀಸ್ ಕಸ್ಟಡಿ : ಮೂವರಿಗೆ ನ್ಯಾಯಾಂಗ ಬಂಧನ

    July 22, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.