Facebook Twitter Instagram
    Wednesday, June 17
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್
    ಇತ್ತೀಚಿನ ಸುದ್ದಿ

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026
    Share

    ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ವಿವಾದಿತ ಶವ ಹೂತಿಟ್ಟ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ ಅಧಿಕಾರಿಗಳು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾರ್ಮಾಡಿ ಘಾಟಿಯಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.ಅಪಘಾತದಲ್ಲಿ ಎಸ್‌ಐಟಿ ಎಸ್‌ಪಿ ಸಿ.ಎ. ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಪೊಲೀಸ್ ಸಿಬ್ಬಂದಿ (ಪಿಸಿ) ಮಂಜುನಾಥ್ ಹಾಗೂ ಕಾರಿನ ಚಾಲಕ ಸೇರಿದಂತೆ ಒಟ್ಟು ನಾಲ್ವರು ಗಾಯಗೊಂಡಿದ್ದಾರೆ.ಧರ್ಮಸ್ಥಳದ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಬೆಳ್ತಂಗಡಿಯ ಎಸ್‌ಐಟಿ ಕಚೇರಿಯಿಂದ ಅಧಿಕಾರಿಗಳ ತಂಡವು ಚಿಕ್ಕಮಗಳೂರಿಗೆ ಹೊರಟಿತ್ತು. ಚಿಕ್ಕಮಗಳೂರು ಜಿಲ್ಲಾ ಎಸ್‌ಪಿ ಹಾಗೂ ಎಸ್‌ಐಟಿ ತನಿಖಾಧಿಕಾರಿಯಾಗಿರುವ ಜಿತೇಂದ್ರ ಕುಮಾರ್ ದಯಾಮ ಅವರನ್ನು ಭೇಟಿ ಮಾಡಿ, ತನಿಖೆಯ ಪ್ರಗತಿ ಕುರಿತು ಚರ್ಚಿಸಲು ಅಧಿಕಾರಿಗಳು ತೆರಳುತ್ತಿದ್ದರು ಎನ್ನಲಾಗಿದೆ.ಈ ವೇಳೆ ಚಾರ್ಮಾಡಿ ಘಾಟ್ ರಸ್ತೆಯ ತಿರುವೊಂದರಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಇನೋವಾ ಕಾರು ರಸ್ತೆಯಲ್ಲೇ ಪಲ್ಟಿಯಾಗಿದೆ. ಅಪಘಾತದ ತೀವ್ರತೆಗೆ ಕಾರು ತಲೆಕೆಳಗಾಗಿದ್ದು, ಒಳಗಿದ್ದ ಅಧಿಕಾರಿಗಳಿಗೆ ಗಾಯಗಳಾಗಿವೆ. ಘಟನೆ ನಡೆದ ತಕ್ಷಣ ಸ್ಥಳೀಯರು ಹಾಗೂ ಇತರ ವಾಹನ ಸವಾರರು ತಕ್ಷಣವೇ ಧಾವಿಸಿ ಬಂದು, ಕಾರಿನಲ್ಲಿದ್ದ ಗಾಯಾಳುಗಳನ್ನು ಹೊರಗೆ ತೆಗೆಯಲು ನೆರವಾಗಿದ್ದಾರೆ.ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಾಟಿ ರಸ್ತೆಯಲ್ಲಿ ಸಂಚಾರ ಸುಗಮಗೊಳಿಸಿದ್ದಾರೆ.

    Post Views: 1

    karnataka PoliceInvestigation

    Related Posts

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026

    ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್

    June 16, 2026

    ಕೋಟಿ ಕೋಟಿ ಡ್ರಗ್ಸ್ ಸಾಗಾಟ ಪತ್ತೆ: ಪೊಲೀಸರ ಭರ್ಜರಿ ಕಾರ್ಯಾಚರಣೆ

    June 16, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಫಲ್ಗುಣಿ ನದಿಗೆ ಕನ್ನ: ಅಕ್ರಮವಾಗಿ ಸಂಗ್ರಹಿಸಿದ್ದ 127 ಲೋಡ್ ಮರಳು ಸೀಜ್

    June 17, 2026

    ಕೋಟಿ ಕಾರಿನ ಮಾಲೀಕನಿಗೆ 130 ರೂ. ದೊಡ್ಡದಾಯಿತೇ? ಟೋಲ್ ಪ್ಲಾಜಾದಲ್ಲಿ ರೋಲ್ಸ್ ರಾಯ್ಸ್ ಎಸ್ಕೇಪ್

    June 17, 2026

    ಐಎಎಫ್ ಅಧಿಕಾರಿಯ ಪತ್ನಿಗೆ ಕಿರುಕುಳ ಆರೋಪ: ವೈರಲ್ ವಿಡಿಯೋ ಬೆನ್ನಲ್ಲೇ ಇಬ್ಬರ ಅರೆಸ್ಟ್

    June 16, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.