Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ..! ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ
    ಇತ್ತೀಚಿನ ಸುದ್ದಿ

    ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ದಂಡ..! ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ

    June 20, 2025
    Share

    ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ ಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ ಸಾರ್ವಜನಿಕರಿಗೆ ಕೆಲವು ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ.

    ಮದ್ಯಪಾನ ಮಾಡಿ ವಾಹನ ಚಲಾಯಿಸಿದರೆ ರಸ್ತೆ ಅಪಘಾತ ಉಂಟಾಗಿ ಚಾಲಕ, ಪ್ರಯಾಣಿಕರು ಸಾವು ನೋವುಗಳನ್ನು ಅನುಭವಿಸುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಇದರ ಪರಿಣಾಮ ಕುಟುಂಬ ಮತ್ತು ಅವಲಂಭಿತರ ಮೇಲೆ ಪ್ರಭಾವ ಬಿದ್ದು ದು:ಖ ಅನುಭವಿಸುತ್ತಾರೆ.

    ಮದ್ಯ ಸೇವನೆ ಮಾಡಿ ವಾಹನ ಚಲಾಯಿಸಿದಲ್ಲಿ ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 185ರ ಅನ್ವಯ ಪ್ರಕರಣ ದಾಖಲಿಸಿ 10,000ರೂ. ವರೆಗೆ ದಂಡ ಪಾವತಿಸಬೇಕಾಗುತ್ತದೆ. ಅತೀವೇಗದಿಂದ ವಾಹನ ಚಲಾಯಿಸಿದರೆ ಭಾರತೀಯ ಮೋಟಾರು ವಾಹನ ಕಾಯ್ದೆ ಕಲಂ 183ರ ಅನ್ವಯ ಪ್ರಕರಣ ದಾಖಲಿಸಿ 2/3/ಎಲ್‌ಎಂವಿ ವಾಹನಗಳಿಗೆ 1,000 ರೂ., ಎಚ್‌ಎಂವಿ /ಎಚ್‌ಜಿವಿ/ಇತರ ವಾಹನಗಳಿಗೆ 2,000 ರೂ.ವರೆಗೆ ದಂಡ ಪಾವತಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

    Post Views: 194

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.