Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ» ಕರ್ತವ್ಯಲೋಪ – ಬ್ರಹ್ಮಾವರ ಠಾಣೆಯ ಪೊಲೀಸ್ ಪೇದೆ ಸಂತೋಷ್ ಅಮಾನತು
    ಇತ್ತೀಚಿನ ಸುದ್ದಿ

     ಕರ್ತವ್ಯಲೋಪ – ಬ್ರಹ್ಮಾವರ ಠಾಣೆಯ ಪೊಲೀಸ್ ಪೇದೆ ಸಂತೋಷ್ ಅಮಾನತು

    February 6, 2025
    Share

    ಕೋಟ:ಕಲ್ಲು ಕೋರೆಯೊಂದರಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಒಡೆದ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯಲೋಪ ಹಿನ್ನೆಲೆಯಲ್ಲಿ ಬ್ರಹ್ಮಾವರ ಪೊಲೀಸ್‌ ಠಾಣೆ ಸಿಬಂದಿ ವಿರುದ್ಧ ಎಸ್‌ಪಿ ಕ್ರಮ ಕೈಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೇದೆ ಸಂತೋಷ್ ಅವರನ್ನು ಅಮಾನತುಗೊಳಿಸಲಾಗಿದ್ದು, ಪಿ.ಎಸ್.ಐ. ಅಶೋಕ್‌ ಅವರನ್ನು ಒಒಡಿ ಮೇಲೆ ಪಡುಬಿದ್ರಿ ಠಾಣೆಗೆ ವರ್ಗಾಯಿಸಲಾಗಿದೆ.ಗರಿಕೆಮಠದ ಕಲ್ಲುಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕ ಬಳಸಿ ಬಂಡೆ ಒಡೆಯುತ್ತಿದ್ದಾಗ ಸಂಭವಿಸಿದ ಸ್ಫೋಟದಲ್ಲಿ ಕಾರ್ಮಿಕ ಸೆಂಥಿಲ್ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ. ಬ್ರಹ್ಮಾವರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಿದಾಗ ಪ್ರಕರಣಕ್ಕೆ ಸಂಬಂಧಿಸಿಮಹಮ್ಮದ್ ಬಶೀರ್ ಅವರು ಒಂದು ಎಕ್ರೆ ವಿಸ್ತೀರ್ಣದ ತಮ್ಮ ಕಲ್ಲುಕೋರೆಯಲ್ಲಿ ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿದ್ದು ತಿಳಿದುಬಂದಿತ್ತು. ಬಳಿಕ ಗರಿಕೆಮಠ ನಿವಾಸಿ, ಕಲ್ಲುಕೋರೆ ಕಾರ್ಮಿಕ ರಾಜು ಎಂಬಾತನನ್ನು ಸ್ಫೋಟಕ್ಕೆ ಮದ್ದುಗಳನ್ನು ಬಳಸಲು ಸಹಕಾರ ನೀಡಿದ ಆರೋಪದ ಮೇಲೆ ಬಂಧಿಸಲಾಗಿತ್ತು. ಮುಖ್ಯ ಆರೋಪಿ ಬಶೀರ್‌ನನ್ನು ಬಂಧಿಸಲು ತೆರಳಿದ ಸಂದರ್ಭದಲ್ಲಿ ಆತ ಪೊಲೀಸರ ಎದುರೇ ಮನೆಯಿಂದ ನಾಪತ್ತೆಯಾಗಿದ್ದ ಎನ್ನಲಾಗಿದೆ. ಪ್ರಕರಣದ ವಿಚಾರಣೆ ಹಾಗೂ ಆರೋಪಿಗಳ ಬಂಧಿಸುವಲ್ಲಿ ಕರ್ತವ್ಯಲೋಪವಾಗಿದೆ ಎನ್ನುವ ನಿಟ್ಟಿನಲ್ಲಿ ಸಿಬಂದಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ.

    Post Views: 151

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.