Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು
    ಇತ್ತೀಚಿನ ಸುದ್ದಿ

    ಪೊಲೀಸರ ಮೇಲೆ ದಾಳಿ ನಡೆಸಿ ಪರಾರಿಯಾಗಲು ಯತ್ನ; ಕೊಲೆ ಆರೋಪಿಯ ಕಾಲಿಗೆ ಗುಂಡೇಟು

    November 9, 2025
    Share

    ಬೆಂಗಳೂರು: ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಪೊಲೀಸರ ಮೇಲೆ ದಾಳಿ ನಡೆಸಿ ಎಸ್ಕೇಪ್​ ಆಗಲು ಯತ್ನಿಸಿದ ಆರೋಪಿ ಮೇಲೆ ಫೈರಿಂಗ್​ ನಡೆಸಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ.

    ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಸ್ಮಶಾನದ ಬಳಿ ನಿನ್ನೆ (ನ.8) ರಾತ್ರಿ 10.30ರ ಸುಮಾರಿಗೆ ಘಟನೆ ನಡೆದಿದ್ದು, ಕಿಡ್ನಾಪ್​ & ಇಬ್ಬರ ಕೊಲೆ ಪ್ರಕರಣದ ಆರೋಪಿಯಾಗಿರುವ ಆಂಧ್ರ ಮೂಲದ ರವಿ ಪ್ರಸಾದ್ ರೆಡ್ಡಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ.

    ಉದ್ಯಮಿ ಬಾಲಪ್ಪ ರೆಡ್ಡಿ, ಮಾದೇಶ್ ಎಂಬುವರ ಕೊಲೆ ಪ್ರಕರಣದ ಸಂಬಂಧ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನ ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದರು. ಕೇಸ್​ ಸಂಬಂಧ ಸ್ಥಳ ಮಹಜರಿಗೆ ಪೊಲೀಸರು ಕರೆದೊಯ್ದಿದ್ದ ವೇಳೆ ಆರೋಪಿ, ಹೆಡ್​​ ಕಾನ್ಸ್​ಸ್ಟೇಬಲ್​​ ಅಶೋಕ್ ಮೇಲೆ ಏಕಾಏಕಿ ದಾಳಿ ನಡೆಸಿದ್ದಾನೆ. ಈ ವೇಳೆ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ವಾರ್ನಿಂಗ್​​ ನೀಡಿದರೂ ದಾಳಿ ನಿಲ್ಲಿಸದಿದ್ದಾಗ ಆರೋಪಿ ಮೇಲೆ ಹೆಬ್ಬಗೋಡಿ ಇನ್ಸ್​​ಪೆಕ್ಟರ್​​ ಸೋಮಶೇಖರ್ ಫೈರಿಂಗ್ ಮಾಡಿದ್ದಾರೆ. ರವಿ ಪ್ರಸಾದ್ ರೆಡ್ಡಿ ಕಾಲಿಗೆ ಎರಡು ಸುತ್ತು ಗುಂಡು ಹೊಡೆದು ಬಂಧಿಸಿದ್ದಾರೆ. ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ DCP ನಾರಾಯಣ್ ಭೇಟಿ ನೀಡಿದ್ದು, ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ನ.6ರಂದು ಹೆಬ್ಬಗೋಡಿ ಉದ್ಯಮಿ ಬಾಲಪ್ಪ ರೆಡ್ಡಿ ಅಪಹರಣ ಮಾಡಿದ್ದ ರವಿ ಪ್ರಸಾದ್ ರೆಡ್ಡಿ, ಹಣ ನೀಡದಿದ್ದಾಗ ಕುತ್ತಿಗೆ ಸೀಳಿ ಅವರನ್ನು ಕೊಂದಿದ್ದ. ಅದಕ್ಕೂ ಮೊದಲು ಮಾದೇಶ್​ ಎಂಬುವರನ್ನೂ ಈತ ಕೊಂದಿದ್ದ. ನ.4ರಂದು ಕಿತ್ತಗಾನಹಳ್ಳಿಯ ಮನೆಯಲ್ಲಿ ಮಾದೇಶ್​​ ಕೊಲೆ ನಡೆದಿತ್ತು. ಈ ಎರಡೂ ಕೊಲೆ ಕೇಸ್​ ಸಂಬಂಧ ಟೆಕ್ನಿಕಲ್ ಎವಿಡೆನ್ಸ್ ಆಧರಿಸಿ ಆರೋಪಿ ರವಿ ಪ್ರಸಾದ್ ರೆಡ್ಡಿಯನ್ನ ಬಂಧಿಸಿದ್ದ ಪೊಲೀಸರು, ಸ್ಥಳ ಮಹಜರಿಗೆ ಕರೆದೊಯ್ದಿದ್ದ ವೇಳೆ ಆರೋಪಿ ತನ್ನ ಖತರ್ನಾಕ್​​ ಐಡಿಯಾ​ ತೋರಿದ್ದಾನೆ. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ರವಿ ಪ್ರಸಾದ್ ರೆಡ್ಡಿ ಯತ್ನಿಸಿದ ಹಿನ್ನಲೆ ಫೈರಿಂಗ್​ ನಡೆಸಲಾಗಿದೆ.

    Post Views: 137

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.