ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಸದ್ಯ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉಡುಪಿ: ನಟೋರಿಯಸ್ ಗರುಡ ಗ್ಯಾಂಗ್ ಸದಸ್ಯ ಇಸಾಕ್ ಮೇಲೆ ಪೊಲೀಸರು ಫೈರಿಂಗ್ ನಡೆಸಿ ಬಂಧಿಸಿದ ಘಟನೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ಸಂಜೆ ನಡೆದಿದೆ. ಸದ್ಯ ಗಾಯಗೊಂಡ ಇಸಾಕ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರಿಗೆ ಚೆಳ್ಳೆಹಣ್ಣು ತಿನ್ನಿಸಿ ಎಸ್ಕೇಪ್ ಆಗಲು ಯತ್ನಿಸಿದ ಇಸಾಕ್ ಮೇಲೆ ಮಣಿಪಾಲ ಪೊಲೀಸ್ ದೇವರಾಜ್ ಮತ್ತು ತಂಡ ಶೂಟ್ ಔಟ್ ಮಾಡಿದೆ. ಶೂಟ್ ಔಟ್ ಮಾಡಿದ ಬಳಿಕ ಪೊಲೀಸರು ಇಸಾಕ್ ನನ್ನ ಬಂಧಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮಾ. 4 ರಂದು ಬಂಧಿಸಲು ಬಂದ ಪೊಲೀಸರಿಗೆ ಇಸಾಕ್ ಚೆಳ್ಳೆಹಣ್ಣು ತಿನ್ನಿಸಿ ಪರಾರಿಯಾಗಿದ್ದ. ಈತ ನಟೋರಿಯಸ್ ಗರುಡ ಗ್ಯಾಂಗ್ ನ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿದ್ದು, ದರೋಡೆ ಪ್ರಕರಣವೊಂದಕ್ಕೆ ಸಂಬಂಧಿಸಿ ಇಸಾಕ್ ಗಾಗಿ ನೆಲಮಂಗಲ ಪೊಲೀಸರು ಶೋಧ ನಡೆಸುತ್ತಿದ್ದರು.
ಇಸಾಕ್ ನನ್ನು ಬಂಧಿಸಲು ಪೊಲೀಸರು ಮಣಿಪಾಲದಲ್ಲಿ ಕಾರ್ಯಾಚರಣೆ ನಡೆಸಿದ್ದರು. ಈ ವೇಳೆ ಇಸಾಕ್ ತನ್ನ ಜೀಪ್ ನಲ್ಲಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ. ಆತ ಮಣಿಪಾಲದ ಮಣ್ಣಪಳ್ಳದ ನಿರ್ಜನ ಪ್ರದೇಶದಲ್ಲಿ ಜೀಪ್ ನಿಲ್ಲಿಸಿ ಎಸ್ಕೇಪ್ ಆಗಿದ್ದ.
ಆದರೆ ಇದೀಗ 8 ದಿನಗಳ ಬಳಿಕ ಪೊಲೀಸರು ಇಸಾಕ್ ನನ್ನ ಪತ್ತೆ ಮಾಡಿದ್ದಾರೆ. ಈತನನ್ನು ಪೊಲೀಸರು ಬಂಧಿಸಲು ಪ್ರಯತ್ನಿಸಿದಾಗ ಪರಾರಿಯಾಗಲು ಯತ್ನಿಸಿದ್ದಾನೆ. ಈ ವೇಳೆ ಪಲೀಸರು ಇಸಾಕ್ ಕಾಲಿಗೆ ಶೂಟ್ ಮಾಡಿ ಆರೋಪಿಯನ್ನ ಬಂಧಿಸಿದ್ದಾರೆ.