Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಕ್ರೈಂ ಸ್ಟೋರಿ»ಪೊಲೀಸ್ ಇಲಾಖೆಗೆ ಶಾಕ್: ಸಿಐಡಿ ಇನ್‌ಸ್ಪೆಕ್ಟರ್ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಬಯಲು
    ಕ್ರೈಂ ಸ್ಟೋರಿ

    ಪೊಲೀಸ್ ಇಲಾಖೆಗೆ ಶಾಕ್: ಸಿಐಡಿ ಇನ್‌ಸ್ಪೆಕ್ಟರ್ ವಿರುದ್ಧ ಮತ್ತಷ್ಟು ಗಂಭೀರ ಆರೋಪಗಳು ಬಯಲು

    June 21, 2026
    Share

    ಬೆಂಗಳೂರು: ಕೇರಳ ಮೂಲದ ಉದ್ಯಮಿಯನ್ನು ಬೆದರಿಸಿ ಬರೋಬ್ಬರಿ 20 ಲಕ್ಷ ರೂ ದರೋಡೆ ಮಾಡಿದ ಸಿಐಡಿ ಪೊಲೀಸ್ ಇನ್‌ಸ್ಪೆಕ್ಟರ್ ಮಹೇಶ್ ಕನಕಗಿರಿಯನ್ನು ಸದ್ಯ ಪೊಲೀಸರು ಅರೆಸ್ಟ್​ ಮಾಡಿದ್ದಾರೆ. ಆರೋಪಿ ಮಹೇಶ್ ಕನಕಗಿರಿಯ ಕರ್ಮಕಾಂಡ ಬಗೆದಷ್ಟು ಬಯಲಾಗುತ್ತಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್​ ಜಾಗ ಒತ್ತುವರಿ ಮಾಡಲು ಭೂಗಳ್ಳರಿಗೆ ಸಾಥ್​​ ನೀಡಿದ್ದಾರೆ. ಅಷ್ಟೇ ಅಲ್ಲದೆ ವಿಧಾನ ಪರಿಷತ್ ಸುಳ್ಳು ಮಾಹಿತಿ ನೀಡಿದ್ದರು.ಮುಖ್ಯಾಂಶಗಳುಇಂಡಿಯನ್ ಆಯಿಲ್ ಜಾಗ ಒತ್ತುವರಿಯಲ್ಲಿ ಇನ್ಸ್‌ಪೆಕ್ಟರ್ ಕನಕಗಿರಿ ಕೈವಾಡವಿಧಾನ ಪರಿಷತ್‌ನಲ್ಲಿ ಸುಳ್ಳು ಮಾಹಿತಿ ನೀಡಿದ್ದ ಆರೋಪಿಭೂಗಳ್ಳರಿಗೆ ಸಾಥ್​ ನೀಡಿದ ಮಹೇಶ್ ಕನಕಗಿರಿಭೂಗಳ್ಳರಿಗೆ ಸಾಥ್ಮಾಜಿ‌ ಕಾರ್ಪೊರೇಟರ್ ಮೋಹನ್ ರಾಜ್ ಮತ್ತಿತರಿಗೆ ಮಹೇಶ್ ಕನಕಗಿರಿ ಸಾಥ್​ ನೀಡಿದ್ದರು. ಇಂಡಿಯನ್ ಆಯಿಲ್ ಕಾರ್ಪೊರೇಷನ್​​ 1 ಕೋಟಿ 53 ಲಕ್ಷ ರೂ ಹಣ ನೀಡಿ ಪೆಟ್ರೋಲ್ ಬಂಕ್ ನಿರ್ಮಾಣಕ್ಕೆ ಬಿಡಿಎಯಿಂದ ಸಿಎ ನಿವೇಶನ ಖರೀದಿಸಿದ್ದರು. ಆದರೆ ರಿಸರ್ವ್ ಪೊಲೀಸ್ ಭದ್ರತೆಯಲ್ಲಿ ಜಾಗಕ್ಕೆ ಭೇಟಿ ನೀಡಿದ್ದ ಮಹೇಶ್ ಕನಕಗಿರಿ ಪೆಟ್ರೋಲ್ ಪಂಪ್ ಅಳವಡಿಸಿದ್ದರೂ ಡ್ಯಾಮೇಜ್ ಮಾಡಿ ಬೆದರಿಕೆ ಹಾಕಿದ್ದರು.ಇನ್ನು ಮಹೇಶ್ ಕನಕಗಿರಿ ಡಿಸೆಂಬರ್ 2023ರಲ್ಲಿ ವಿಧಾನ ಪರಿಷತ್ ಅಧಿವೇಶನದಲ್ಲಿ ಸುಳ್ಳು ಮಾಹಿತಿ ನೀಡಿದ್ದರು. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಜಾಗ ಸಂಬಂಧ ಹೈಕೋರ್ಟ್​ ಕೇಸ್​ ಇದೆ ಎಂದು ತಪ್ಪು ಮಾಹಿತಿ ನೀಡಿದ್ದರು. ಆ ಮೂಲಕ ಗೃಹ ಸಚಿವರಿಂದ ಅಧಿವೇಶದಲ್ಲಿ ತಪ್ಪು ಮಾಹಿತಿ ರವಾನೆ ಆಗಿತ್ತು.ಪ್ರಕರಣ ಹಿನ್ನೆಲೆಬೆಂಗಳೂರಿನ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಡೀ ಪೊಲೀಸ್ ಇಲಾಖೆ ತಲೆ ತಗ್ಗಿಸುವಂತಹ ಘಟನೆ ನಡೆದಿದೆ. ಕೇರಳಂ ಮೂಲದ ಉದ್ಯಮಿಯೊಬ್ಬರು ಸಾಕಷ್ಟು ಹಣದೊಂದಿಗೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಖಾಸಗಿ ಹೋಟೆಲ್‌ಗೆ ಬಂದಿದ್ದರು. ಇದಕ್ಕೆ ಹೊಂಚು ಹಾಕಿ ಕೂತು ಅಲ್ಲಿಗೆ ಎಂಟ್ರಿ ಕೊಟ್ಟಿದ್ದು ಬೇರೆ ಯಾರು ಅಲ್ಲ, ಖುದ್ದು ಸಿಐಡಿ ಇನ್‌ಸ್ಪೆಕ್ಟರ್ ಮಹೇಶ್ ಕನಕಗಿರಿ ಮತ್ತವರ ಗ್ಯಾಂಗ್.ಇನ್ಸ್ಪೆಕ್ಟರ್ ಸೂಚನೆಯಂತೆ ಕುಪೇಂದ್ರ ಮತ್ತು ಕುಮಾರ್ ಹೋಟೆಲ್ ರೂಮ್‌ಗೆ ನುಗ್ಗಿದ್ದಾರೆ. ನಾವು ಪೊಲೀಸರು, ನೀವು ಮನಿ ಟ್ರೇಡಿಂಗ್ ಕಳ್ಳದಂಧೆ ಮಾಡುತ್ತಿದ್ದೀರಾ ಎಂದು ಹೆದರಿಸಿ, ಐಡಿ ಕಾರ್ಡ್ ತೋರಿಸಿ ಅರೆಸ್ಟ್ ಮಾಡುವುದಾಗಿ ಹೇಳಿದ್ದಾರೆ. ಉದ್ಯಮಿ ಹಣ ಕೊಡಲು ನಿರಾಕರಿಸಿದಾಗ, ಮೇಲೆ ಹಲ್ಲೆ ನಡೆಸಿ 20 ಲಕ್ಷ ರೂ ದರೋಡೆ ಮಾಡಿ ಪರಾರಿಯಾಗಿದ್ದರು.

    Post Views: 121

    karnataka PoliceInvestigation

    Related Posts

    CID ಪೊಲೀಸರಿಂದ IAS ಅಧಿಕಾರಿ ಗ್ಯಾನೇಂದ್ರ ಕುಮಾರ್ ಅರೆಸ್ಟ್

    August 30, 2026

    ರಾಜ್ಯದಲ್ಲಿ ‘ಪೊಲೀಸ್ ರಾಜ್ ವ್ಯವಸ್ಥೆ’ ಕೊನೆಗೊಳ್ಳಬೇಕು, ಇಲ್ಲವಾದರೆ ನ್ಯಾಯಾಲಯವೇ ಕಠಿಣ ಕ್ರಮ: ಹೈಕೋರ್ಟ್ ಎಚ್ಚರಿಕೆ

    August 28, 2026

    ಉಡುಪಿ: ಹೆತ್ತವರನ್ನೇ ಸುತ್ತಿಗೆಯಿಂದ ಹೊಡೆದು ಕೊಂದ ಪಾಪಿ ಮಗ

    August 24, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.