Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಡ್ರಗ್ಸ್ ದಂಧೆಗೆ, ಪಬ್‌ಗೆ ನೆರವು ನೀಡಿದ ಆರೋಪ ಹಿನ್ನೆಲೆ : ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್
    ಇತ್ತೀಚಿನ ಸುದ್ದಿ

    ಡ್ರಗ್ಸ್ ದಂಧೆಗೆ, ಪಬ್‌ಗೆ ನೆರವು ನೀಡಿದ ಆರೋಪ ಹಿನ್ನೆಲೆ : ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

    September 23, 2025
    Share

    ಬೆಂಗಳೂರು : ಕರ್ತವ್ಯದ ಲೋಪದ ಆರೋಪದ ಮೇರೆಗೆ ನಗರದ ಮತ್ತಿಬ್ಬರು ಪೊಲೀಸ್ ಅಧಿಕಾರಿಗಳು ಅಮಾನತುಗೊಂಡಿದ್ದಾರೆ. ಡಿಸಿಪಿ ಅವರ ಆದೇಶ ಆಧರಿಸಿ ಆಯುಕ್ತ ಸೀಮಂತ್‌ ಕುಮಾರ್‌ಸಿಂಗ್ ಶಿಸ್ತು ಕ್ರಮ ಜರುಗಿಸಿದ್ದಾರೆ ಎಂದು ತಿಳಿದು ಬಂದಿದೆ.

    ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಭಂಜತ್ರಿ ಹಾಗೂ ಕೋರಮಂಗಲ ಠಾಣೆಯ ಪಿಐ ಎಸ್.ಎಲ್.ಆರ್.ರೆಡ್ಡಿ ಅಮಾನತುಗೊಂಡಿವರು. ಕೆಲ ದಿನಗಳ ಹಿಂದಷ್ಟೇ ಡ್ರಗ್ಸ್ ಪೆಡ್ಲರ್‌ಗಳ ಜೊತೆ ಸ್ನೇಹ ಹೊಂದಿದ್ದ ಆರೋಪದ ಮೇರೆಗೆ 11 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿತ್ತು. ಕಾನೂನು ಸುವ್ಯವಸ್ಥೆ ಅಸಮರ್ಪಕ ನಿರ್ವಹಣೆ ಹಾಗೂ ಅಪರಾಧ ಪ್ರಕರಣಗಳ ಪತ್ತೆದಾರಿಕೆಯಲ್ಲಿ ದೋಷ ಮಾಡಿದ್ದರು ಎಂದು ಹಲಸೂರು ಗೇಟ್ ಠಾಣೆ ಪಿಐ ಹನುಮಂತ ಮೇಲೆ ಆರೋಪ ಬಂದಿತ್ತು.

    ಹಾಗೆ ತಮ್ಮ ಠಾಣಾ ಸರಹದ್ದಿನಲ್ಲಿ ಪಬ್‌ಗಳು ಅವಧಿ ಮೀರಿ ವಹಿವಾಟು ನಡೆಸಿದ ಹಾಗೂ ನಿಯಮ ಉಲ್ಲಂಘಿಸಿ ಧ್ವನಿವರ್ಧಕ ಬಳಕೆ ಮಾಡಿದರು ನಿಯಂತ್ರಿಸದೆ ನಿರ್ಲಕ್ಷ್ಯ ತೋರಿದರು ಎಂಬ ಆಪಾದನೆಗೆ ಕೋರಮಂಗಲ ಠಾಣೆ ಪಿಐ ರೆಡ್ಡಿ ತುತ್ತಾಗಿದ್ದರು ಎನ್ನಲಾಗಿದೆ. ಈ ಸಂಬಂಧ ಆಯುಕ್ತರಿಗೆ ಭಜಂತ್ರಿ ವಿರುದ್ಧ ಕೇಂದ್ರ ವಿಭಾಗದ ಡಿಸಿಪಿ ಮತ್ತು ರೆಡ್ಡಿ ವಿರುದ್ಧ ಆಗ್ನೆಯ ವಿಭಾಗದ ಡಿಸಿಪಿ ಪ್ರತ್ಯೇಕವಾಗಿ ವರದಿ ಸಲ್ಲಿಸಿದ್ದರು. ಈ ವರದಿ ಪರಿಗಣಿಸಿದ ಸಿಂಗ್ ಅವರು, ಆರೋಪಿತರನ್ನು ಅಮಾನುತುಗೊಳಿಸಿ ಇಲಾಖಾ ವಿಚಾರಣೆಗೆ ಆದೇಶಿಸಿದ್ದಾರೆ.

    Post Views: 118

    Related Posts

    DrDevansAcademy.org ನಿಂದ ವೈದ್ಯಕೀಯ ಶಿಕ್ಷಣಕ್ಕೆ ಕ್ರಾಂತಿಕಾರಿ ಕ್ಲೌಡ್ ಆಧಾರಿತ ಸಂವಾದಾತ್ಮಕ ಕಲಿಕಾ ವೇದಿಕೆ ಬಿಡುಗಡೆ

    April 23, 2026

    ವಿಡಿಯೋ ಬೆದರಿಕೆ: ₹1.5 ಕೋಟಿ ಸುಲಿಗೆ ಆರೋಪ, ಇನ್‌ಫ್ಲೂಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ ಪ್ರಕರಣ

    April 23, 2026

    ಚುನಾವಣಾ ಹಂತದಲ್ಲಿ ಉದ್ವಿಗ್ನತೆ: ಮತದಾನ ವೇಳೆ ಕಚ್ಚಾ ಬಾಂಬ್ ದಾಳಿ, ಹಲವರಿಗೆ ಗಾಯ

    April 23, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.