Facebook Twitter Instagram
    Wednesday, November 18
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: ಸಿಸಿಟಿವಿ ಸುಳಿವಿಲ್ಲದ ದರೋಡೆ ಪ್ರಕರಣಕ್ಕೆ ಪೊಲೀಸರ ಬ್ರೇಕ್- ಮೂವರು ಅರೆಸ್ಟ್!!
    ಇತ್ತೀಚಿನ ಸುದ್ದಿ

    ಬಂಟ್ವಾಳ: ಸಿಸಿಟಿವಿ ಸುಳಿವಿಲ್ಲದ ದರೋಡೆ ಪ್ರಕರಣಕ್ಕೆ ಪೊಲೀಸರ ಬ್ರೇಕ್- ಮೂವರು ಅರೆಸ್ಟ್!!

    November 18, 2026
    Share

    ಬಂಟ್ವಾಳ: ಕಕ್ಕೇಪದವು ರಸ್ತೆಯಲ್ಲಿ ಹಾರ್ಡ್‌ವೇರ್ ಅಂಗಡಿಯಿಂದ ಹಣ ಸಂಗ್ರಹಿಸಿ ತೆರಳುತ್ತಿದ್ದ ವ್ಯಕ್ತಿಯೊಬ್ಬರನ್ನು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ ಸುಮಾರು 8 ಲಕ್ಷ ರೂ. ದರೋಡೆಗೈದ ಪ್ರಕರಣವನ್ನು ಮೂರು ತಿಂಗಳ ಬಳಿಕ ಬಂಟ್ವಾಳ ಪೊಲೀಸರು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.ಉಳ್ಳಾಲ ನಿವಾಸಿ ಉಮರ್ ಫಾರೂಕ್, ಕೊಣಾಜೆ ಕಲ್ಲುಗುಂಡಿ ನಿವಾಸಿ ಶಾಕಿರ್ ಹಾಗೂ ಶಕ್ತಿ ನಗರ ನಿವಾಸಿ ಪ್ರವೀತ್ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದಾರೆ.

    ಬಂಟ್ವಾಳ ಎಎಸ್ಪಿ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ, ದರೋಡೆಗೆ ಸಂಚು ರೂಪಿಸಿದ್ದ ಪ್ರಮುಖ ಸೂತ್ರಧಾರ ಸೇರಿದಂತೆ ಮೂವರನ್ನು ಬಂಧಿಸಿದೆ ಎಂದು ತಿಳಿದುಬಂದಿದೆ.ಆಗಸ್ಟ್ 20ರಂದು ಕಕ್ಕೇಪದವು ರಸ್ತೆಯಲ್ಲಿ ಈ ದರೋಡೆ ನಡೆದಿತ್ತು. ಹಾರ್ಡ್‌ವೇರ್ ಅಂಗಡಿಯಿಂದ ಹಣ ಸಂಗ್ರಹಿಸಿ ತೆರಳುತ್ತಿದ್ದ ವ್ಯಕ್ತಿಯನ್ನು ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು ಅಡ್ಡಗಟ್ಟಿ, ಅವರ ಬಳಿಯಿದ್ದ ಸುಮಾರು 8 ಲಕ್ಷ ರೂ. ಹಣವನ್ನು ದೋಚಿ ಪರಾರಿಯಾಗಿದ್ದರು.ಗ್ರಾಮೀಣ ಪ್ರದೇಶದಲ್ಲಿ ಘಟನೆ ನಡೆದಿದ್ದು, ಆ ಸಮಯದಲ್ಲಿ ಜನಸಂಚಾರವೂ ಕಡಿಮೆಯಿತ್ತು. ಅಲ್ಲದೆ, ಘಟನಾ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾಗಳೂ ಇರಲಿಲ್ಲ. ಹೀಗಾಗಿ ಪ್ರಕರಣದ ಆರೋಪಿಗಳನ್ನು ಪತ್ತೆಹಚ್ಚುವುದು ಪೊಲೀಸರಿಗೆ ಸವಾಲಾಗಿ ಪರಿಣಮಿಸಿತ್ತು.

    ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ವಿಶೇಷ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದರು. ಸತತ ತನಿಖೆ ಹಾಗೂ ಕಾರ್ಯಾಚರಣೆಯ ಬಳಿಕ ಇದೀಗ ಮೂರು ತಿಂಗಳ ನಂತರ ಪ್ರಕರಣವನ್ನು ಭೇದಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    Post Views: 7

    Related Posts

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ- ಮೂವರು ಆರೋಪಿಗಳ ಬಂಧನ

    November 18, 2026

    ಮಂಗಳೂರು: ಮೊಟ್ಟೆ ಸಾಗಾಟದ ವಾಹನದಲ್ಲಿ 16 ಜಾನುವಾರುಗಳ ಅಕ್ರಮ ಸಾಗಣೆ – ಇಬ್ಬರ ಬಂಧನ

    November 17, 2026

    ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ : SIT ಮುಖ್ಯಸ್ಥರಿಂದ ಮೆಡಿಕಲ್ ಬೋರ್ಡ್ ರಚನೆ

    November 17, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬಂಟ್ವಾಳ: ತಲವಾರು ತೋರಿಸಿ ಹಣ ದೋಚಿದ್ದ ಪ್ರಕರಣ- ಮೂವರು ಆರೋಪಿಗಳ ಬಂಧನ

    November 18, 2026

    ಬಂಟ್ವಾಳ: ಸಿಸಿಟಿವಿ ಸುಳಿವಿಲ್ಲದ ದರೋಡೆ ಪ್ರಕರಣಕ್ಕೆ ಪೊಲೀಸರ ಬ್ರೇಕ್- ಮೂವರು ಅರೆಸ್ಟ್!!

    November 18, 2026

    ಮಂಗಳೂರು: ಮೊಟ್ಟೆ ಸಾಗಾಟದ ವಾಹನದಲ್ಲಿ 16 ಜಾನುವಾರುಗಳ ಅಕ್ರಮ ಸಾಗಣೆ – ಇಬ್ಬರ ಬಂಧನ

    November 17, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.