ಮಣಿಪಾಲ: ವೇಶ್ಯಾವಾಟಿಕೆ ದಂಧೆ ನಡೆಸುತಿದ್ದ ಅಪಾರ್ಟ್‌ಮೆಂಟ್‌ಗೆ ದಾಳಿ ನಡೆಸಿದ ಮಣಿಪಾಲ ಠಾಣೆ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.
ಶಿವಳ್ಳಿ ಗ್ರಾಮದ ಪೆರಂಪಳ್ಳಿಯಲ್ಲಿರುವ ವಸತಿ ಸಮುಚ್ಚಯದ ಎರಡನೇ ಮಹಡಿಯಲ್ಲಿ ಮಹಿಳೆಯರನ್ನು ಬಲವಂತವಾಗಿ ಇರಿಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಬಂದ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿದರು.
ಕೃತ್ಯದ ರೂವಾರಿಗಳಾದ ರವೀಶ, ರಘುನಂದನ ಎಂ.ಡಿ., ಅಮೀನಾ ಬೇಗಂ, ಡಯನಾ ಲೂವಿಸ ಅವರನ್ನು ವಶಕ್ಕೆ ಪಡೆದಿದ್ದಾರೆ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.