Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪೊಲೀಸರೂ ವರ್ಷಾಚರಣೆ ಮಾಡಬೇಕು,ಸಾರ್ವಜನಿಕರು ಸಹಕರಿಸಿ- ಕಮಿಷನರ್‌ ಶಶಿಕುಮಾರ್
    ಇತ್ತೀಚಿನ ಸುದ್ದಿ

    ಪೊಲೀಸರೂ ವರ್ಷಾಚರಣೆ ಮಾಡಬೇಕು,ಸಾರ್ವಜನಿಕರು ಸಹಕರಿಸಿ- ಕಮಿಷನರ್‌ ಶಶಿಕುಮಾರ್

    December 31, 2022
    Share

    ಮಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ಹೊಸ ವರ್ಷಾಚರಣೆಯ ಸಂಧರ್ಭದಲ್ಲಿ ಮಂಗಳೂರು ನಗರದಾದ್ಯಂತ ಕಟ್ಟುನಿಟ್ಟಿನ ನಿಯಮ ಜಾರಿ ಮಾಡಲಾಗಿದೆ‌.

    ಈ ಬಗ್ಗೆ ಮಾಧ್ಯಮಗಳಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಹೇಳಿಕೆ ನೀಡಿದ್ದು, ಕಾನೂನು ಮೀರಿ ತಿರುಗಾಡುವವರನ್ನು ವಶಕ್ಕೆ ಪಡೆಯುವ ಎಚ್ಚರಿಕೆ ನೀಡಿದ್ದಾರೆ‌.

    ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಜಿಲ್ಲಾಧಿಕಾರಿಗಳ ಸಭೆಯಂತೆ ನಿಯಮಾವಳಿ ರೂಪಿಸಲಾಗಿದೆ. 12.30ಕ್ಕೆ ಕಾರ್ಯಕ್ರಮ ಮುಗಿಸಿ 10 ಗಂಟೆಗೆ ಧ್ವನಿ ವರ್ಧಕ ಬಂದ್ ಮಾಡಬೇಕು. ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ 32 ಚೆಕ್ ಪೋಸ್ಟ್ ಹಾಕಲಾಗಿದೆ. ಯಾವುದೇ ತೊಂದರೆ ಇಲ್ಲದೇ ಸಂಭ್ರಮಾಚರಣೆಗಳನ್ನು ಮಾಡಬೇಕು ಎಂದು ಹೇಳಿದ್ದಾರೆ.

    ಬೀಚ್ ಅಥವಾ ಯಾವುದೇ ಜಾಗದಲ್ಲಿ ಸಂಭ್ರಮಾಚರಣೆ ಮಾಡಲು ಅನುಮತಿ ಪಡೆದು ಮಾಡಬೇಕು. ಅನುಮತಿ ಇಲ್ಲದೇ ಯಾವುದೇ ಆಚರಣೆಗೆ ಅವಕಾಶ ಇಲ್ಲ. ರಾತ್ರಿ 12.30ಗೆ ಎಲ್ಲವೂ ಕ್ಲೋಸ್ ಆಗುವಾಗ ಆ ಬಳಿಕ ಯಾರೂ ರಸ್ತೆಯಲ್ಲಿ ಇರಬಾರದು. ತ್ರಿಬಲ್ ರೈಡ್ ಅಥವಾ ಕುಡಿದು ವಾಹನ ಚಾಲನೆಗೆ ಅವಕಾಶ ಇಲ್ಲ ಎಂದು ಶಶಿಕುಮಾರ್ ತಿಳಿಸಿದ್ದಾರೆ.

    ಕಮಿಷನರ್ ವ್ಯಾಪ್ತಿಯಲ್ಲಿ ಸ್ವಲ್ಪ ಸೂಕ್ಷ್ಮ ಪರಿಸ್ಥಿತಿ ಇತ್ತು. ಯಾವುದೇ ಸಂಘಟನೆಗಳಿಗೆ ಎಚ್ಚರಿಕೆ ಕೊಡುವ ಅಧಿಕಾರ ಇಲ್ಲ. ಸಾರ್ವಜನಿಕ ಜಾಗದ ಆಚರಣೆಗೆ ಯಾರೂ ಹೋಗಬಾರದು ಅಂತ ಹೇಳುವ ಹಾಗಿಲ್ಲ. ಯಾರಾದರೂ ತೊಂದರೆ ಕೊಟ್ಟರೆ 112ಗೆ ಸಂಪರ್ಕ ಮಾಡಿ. ಅಥವಾ ಸ್ಥಳೀಯ ಪೊಲೀಸ್ ಠಾಣೆ ಸಂಪರ್ಕಿಸಿ ದೂರು ಕೊಡಿ. ನಿಯಮ ಪಾಲಿಸಿ ಜವಾಬ್ದಾರಿಯುತವಾಗಿ ಆಚರಿಸಿ ಎಂದು ಸಾರ್ವಜನಿಕರಿಗೆ ಪೊಲೀಸ್‌ ಆಯಕ್ತರು ಹೇಳಿದ್ದಾರೆ.

    ಸುರತ್ಕಲ್ ಭಾಗದಲ್ಲಿ ಹೆಚ್ಚಿನ ಪೊಲೀಸ್ ಭಧ್ರತೆ ಮಾಡಲಾಗಿದೆ. ಸುರತ್ಕಲ್ ಭಾಗದ ಎಲ್ಲಾ ಹೊಟೇಲ್ ಬಾರ್ ಕ್ಲಬ್ ಮಾಲಕರನ್ನು ಕರೆದು ಮಾಹಿತಿ ನೀಡಲಾಗಿದೆ. ಮಧ್ಯರಾತ್ರಿಯ ಸಂಧರ್ಭದಲ್ಲಿ ಅನಾವಶ್ಯಕವಾಗಿ ತಿರುಗಾಡುವವರನ್ನು ವಶಕ್ಕೆ ಪಡೆಯುತ್ತೇವೆ. ಕಾನೂನಿನಡಿಯಲ್ಲಿ ಪ್ರಕರಣವನ್ನು ದಾಖಲಿಸುತ್ತೇವೆ. ಪೊಲೀಸರೂ ಹೊಸವರ್ಷಾಚರಣೆಯನ್ನು ಆಚರಿಸಬೇಕು. ಅವರ ಜೊತೆ ವಾಗ್ವಾದ, ಕೇಸ್ ಮಾಡುವ ರೀತಿ ಆಗದಂತೆ ಸಹಕರಿಸಿ ಎಂದು ಮಂಗಳೂರು ನಗರ ಪೊಲೀಸ್‌ ಕಮಿಷನರ್‌ ಹೇಳಿದ್ದಾರೆ.

    Post Views: 160

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.