Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಬೇಕು: ಎಡಿಜಿಪಿ ಅಲೋಕ್ ಕುಮಾರ್
    ಇತ್ತೀಚಿನ ಸುದ್ದಿ

    ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಬೇಕು: ಎಡಿಜಿಪಿ ಅಲೋಕ್ ಕುಮಾರ್

    June 27, 2023
    Share

    ರಾಮನಗರ: ಹೆದ್ದಾರಿಯಲ್ಲಿ ಪೊಲೀಸರು ಸಮವಸ್ತ್ರದಲ್ಲಿ ಕಾಣಿಸುತ್ತಿಲ್ಲ. ನಮ್ಮ‌ ಸಿಬ್ಬಂದಿ ಕಂಡರೆ, ವಾಹನ ಸವಾರರಿಗೆ ಒಂದು ಭಯ ಇರುತ್ತದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

    ಬೆಂಗಳೂರು- ಮೈಸೂರು ದಶಪಥ ಎಕ್ಸ್‌ಪ್ರೆಸ್‌ ಹೆದ್ದಾರಿ ಅಪಘಾತದ ಸ್ಥಳಗಳಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ, ಅಧಿಕಾರಿಗಳಿಗೆ ಈ ನಿರ್ದೇಶನ ನೀಡಿದರು.

    ಬೆಂಗಳೂರಿನಿಂದ ಬೆಳಗಾವಿವರೆಗೆ ಹೋದರೂ ಒಬ್ಬ ಸಿಬ್ಬಂದಿ ಸಹ ಸಮವಸ್ತ್ರದಲ್ಲಿ ಕಾಣುವುದಿಲ್ಲ. ಸಿಬ್ಬಂದಿ ಕೇವಲ ರಿಫ್ಲೆಕ್ಟ್ ಜಾಕೆಟ್ ಹಾಕಿಕೊಂಡು ಇದ್ದರೆ ಸಾಕು. ಜನ ಭಯದಿಂದ ವಾಹನದ ವೇಗ ತಗ್ಗಿಸುತ್ತಾರೆ ಎಂದರು.

    ದಾವಣಗೆರೆಯಲ್ಲಿ ನಾನು ಎಸ್ ಪಿ ಇದ್ದಾಗ ಹೆದ್ದಾರಿಯಲ್ಲಿ ಪಹರೆ ಮಾಡಿಯೇ, ಶೇ 40ರಷ್ಟು ಅಪಘಾತ ತಗ್ಗಿಸಿದ್ದೆವು‌. ಎಲ್ಲಾ ಹೆದ್ದಾರಿಗಳಲ್ಲಿ ಗಸ್ತು ಆರಂಭಿಸಬೇಕು ಎಂದು ಸೂಚಿಸಿದರು‌.

    ಹೆದ್ದಾರಿ ಪಹರೆಗೆ ನಿಯೋಜಿಸಿರುವ ಗಸ್ತು ವಾಹನಗಳನ್ನು ಪರಿಶೀಲಿಸಿದ ಅವರು, ಅಪಘಾತ ತಡೆಗೆ ಹೆದ್ದಾರಿ ವ್ಯಾಪ್ತಿಯ ಪೊಲೀಸ್ ಠಾಣೆಗಳ ಸಿಬ್ಬಂದಿ ಕೈಗೊಂಡಿರುವ ಕ್ರಮಗಳನ್ನು ವಿಚಾರಿಸಿದರು. ಅಪಘಾತದ ಮಾಹಿತಿ ಪುಸ್ತಕವನ್ನು ಪರಿಶೀಲಿಸಿದರು‌.

    ಐಜಿಪಿ ಡಾ. ಬಿ.ಆರ್. ರವಿಕಾಂತೇಗೌಡ, ರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ರಾಹುಲ್ ಹಾಗೂ ಸ್ಥಳೀಯ ಪೊಲೀಸರು ಇದ್ದರು.

    Post Views: 272

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.