ಚುನಾವಣಾ ಕರ್ತವ್ಯಕ್ಕೆ ಕುಡಿದು ಬಂದಿದ್ದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಅಮಾನತುಗೊಂಡವರನ್ನು ಮಾಲತೇಶ್ ಹಾಗು ರಮೇಶ್ ಎಂದು ಗುರುತಿಸಲಾಗಿದೆ. ರಮೇಶ್ ತೋಟಗಾರಿಕೆ ಇಲಾಖೆಯ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೆ, ಮಾಲತೇಶ್ ಶಿಕ್ಷಕ ಎನ್ನಲಾಗಿದೆ. ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಮಸ್ಟರಿಂಗ್ ನಲ್ಲಿ ಇಬ್ಬರೂ ಪಾನಮತ್ತರಾಗಿ ಕರ್ತವ್ಯಕ್ಕೆ ಹಾಜರಾಗಿದ್ದರು.
ಇದನ್ನು ಗಮನಿಸಿದ ಚುನಾವಣಾ ಅಧಿಕಾರಿ ಇಬ್ಬರನ್ನೂ ಮೆಗ್ಗಾನ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ತಪಾಸಣೆಗೆ ಒಳಪಡಿಸಿದ ಬಳಿಕ ಇವರಿಬ್ಬರೂ ಪಾನಮತ್ತರಾಗಿರುವುದು ಸಾಬೀತಾಗಿದೆ. ಹೀಗಾಗಿ ಇಬ್ಬರನ್ನೂ ಅಮಾನತು ಮಾಡುವಂತೆ ಆದೇಶ ಹೊರಡಿಸಿದ್ದಾರೆ.