Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಪೂಂಜಾಲ ಕಟ್ಟೆ ಬಳಿ ಕಾರು ಪಲ್ಟಿ- ಮಹಿಳೆ ಸಾವು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಪೂಂಜಾಲ ಕಟ್ಟೆ ಬಳಿ ಕಾರು ಪಲ್ಟಿ- ಮಹಿಳೆ ಸಾವು

    October 16, 2024
    Share

    ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಆಳದಲ್ಲಿರುವ ಅಡಿಕೆ ತೋಟಕ್ಕೆ ಬಿದ್ದು ಮಹಿಳೆ ಮೃತಪಟ್ಟ ಘಟನೆ ಬಿ.ಸಿ.ರೋಡು-ಬೆಳ್ತಂಗಡಿ ರಾಷ್ಟ್ರೀಯ ಹೆದ್ದಾರಿಯ ಕಾವಳಪಡೂರು ಗ್ರಾಮದ ಬಾಂಬಿಲ ಬಳಿ ನಡೆದಿದ್ದು ಘಟನೆಯಲ್ಲಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಕಾರಿನಲ್ಲಿ ಪುಟ್ಟಮಗು ಸಹಿತ ನಾಲ್ಕು ಮಂದಿ ಪ್ರಯಾಣಿಸುತ್ತಿದ್ದು, ಮೃತಪಟ್ಟ ಮಹಿಳೆಯನ್ನು ಮಂಗಳೂರು ಕೊಡಿಯಾಲ್ ಬೈಲ್ ನಿವಾಸಿ ಭಾಗೀರಥಿ (58) ಎಂದು ಗುರುತಿಸಲಾಗಿದೆ. ಚಾಲಕ ರೂಪೇಶ್ (39) ಅವರಿಗೆ ಗಂಭೀರ ಸ್ವರೂಪದ ಗಾಯವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ರೂಪೇಶ್ ಅವರ ಪತ್ನಿ ಸುಚಿತ್ರಾ (33) ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಪುಂಜಾಲಕಟ್ಟೆ ಕಡೆಯಿಂದ ಬರುತ್ತಿದ್ದ ಕಾರು ಮುಂಜಾನೆ ಸುಮಾರು 4.30ರ ಸುಮಾರಿಗೆ ಬಾಂಬಿಲ ಮಸೀದಿ ಮುಂಭಾಗದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ಉರುಳಿ ಬಿದ್ದಿದೆ. ಮಂಗಳೂರು ಕೊಡಿಯಾಲ್‌ ಬೈಲು ನಿವಾಸಿಯಾದ ಭಾಗೀರಥಿ ಅವರ ಪುತ್ರಿ ಸುಚಿತ್ರಾ ಅವರ ಪತಿ ರೂಪೇಶ್ ಅವರು ತುಮಕೂರು ಜಿಲ್ಲೆಯವರಾಗಿದ್ದು, ಭಾಗೀರಥಿ ದಸರಾ ರಜೆಯಲ್ಲಿ ಅಳಿಯ, ಮಗಳ ಜತೆ ತುಮಕೂರಿಗೆ ಹೋಗಿ ಮಂಗಳೂರಿಗೆ ಮರಳುತ್ತಿದ್ದಾಗ ದುರಂತ ಸಂಭವಿಸಿದೆ. ಬಾಂಬಿಲ ತಿರುವಿನಲ್ಲಿ ಅನೇಕ ಅಪಘಾತಗಳು ಸಂಭವಿಸಿದ್ದು, ಜೀವಹಾನಿಗಳು ನಡೆದಿವೆ. ಹೆದ್ದಾರಿ ಅವೈಜ್ಞಾನಿಕ ಕಾಮಗಾರಿಯಿಂದ ಇಲ್ಲಿ ಅಪಘಾತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

    Post Views: 178

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.