Facebook Twitter Instagram
    Tuesday, November 3
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ: ಸಂತ್ರಸ್ತೆಯ ಫೋಟೋ ಹಂಚಿದ 150 ಖಾತೆಗಳ ಪತ್ತೆ- ಕಠಿಣ ಕ್ರಮದ ಎಚ್ಚರಿಕೆ
    ಇತ್ತೀಚಿನ ಸುದ್ದಿ

    ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ: ಸಂತ್ರಸ್ತೆಯ ಫೋಟೋ ಹಂಚಿದ 150 ಖಾತೆಗಳ ಪತ್ತೆ- ಕಠಿಣ ಕ್ರಮದ ಎಚ್ಚರಿಕೆ

    November 3, 2026
    Share

    ಉಡುಪಿ: ಜಿಲ್ಲೆಯಲ್ಲಿ ಭಾರೀ ಚರ್ಚೆಗೆ ಕಾರಣವಾಗಿರುವ ಪ್ರದೀಪ್ ಪೂಜಾರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರು ಸ್ಪಷ್ಟನೆ ನೀಡಿದ್ದಾರೆ. ಸಂತ್ರಸ್ತೆಯ ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದುಎಂದು ಎಚ್ಚರಿಸಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೆ ನಡೆಸಿದ ತನಿಖೆಯಲ್ಲಿ ಲಭ್ಯವಾದ ಸಾಕ್ಷ್ಯಗಳು ಹಾಗೂ ವಾಸ್ತವಾಂಶಗಳನ್ನು ಮಾಧ್ಯಮಗಳ ಮುಂದೆ ಹಂಚಿಕೊಂಡಿರುವ ಎಸ್ಪಿ, ಪ್ರಕರಣದಲ್ಲಿ ಒಟ್ಟು ಮೂರು ಪ್ರತ್ಯೇಕ ಘಟನೆಗಳಿಗೆ ಸಂಬಂಧಿಸಿ ಪ್ರಕರಣಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ.

    2025ರ ನವೆಂಬರ್ 10ರಂದು ಸಂತ್ರಸ್ತೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಕಾರಿನಲ್ಲಿ ಬಂದ ಪ್ರದೀಪ್ ಪೂಜಾರಿ ಅಡ್ಡಗಟ್ಟಿ ಮದುವೆಯಾಗುವಂತೆ ಒತ್ತಾಯಿಸಿ, ಇಲ್ಲವಾದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ. ಈ ಸಂಬಂಧ ಪ್ರಕರಣ ದಾಖಲಾಗಿ ಪ್ರದೀಪ್ ಬಂಧನಕ್ಕೊಳಗಾಗಿದ್ದ. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾದ ನಂತರ ನವೆಂಬರ್ 29ರಂದು ಸಂತ್ರಸ್ತೆ ಕೆಲಸಕ್ಕೆ ತೆರಳುತ್ತಿದ್ದ ವೇಳೆ ದೊಡ್ಡಪಾದೆ ಪ್ರದೇಶದಲ್ಲಿ ಅರಣ್ಯಕ್ಕೆ ಎಳೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪದಡಿ ಮತ್ತೊಂದು ಪ್ರಕರಣ ದಾಖಲಾಗಿತ್ತು. ವೈದ್ಯಕೀಯ ಹಾಗೂ ವೈಜ್ಞಾನಿಕ ಸಾಕ್ಷ್ಯಗಳ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಸಲಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ.

    ಮೂರನೇ ಘಟನೆಯ ವೇಳೆ ಸಂತ್ರಸ್ತೆಯ ಮೇಲೆ ಖಾರದ ಪುಡಿ ಎರಚಿ ಹತ್ಯೆಗೆ ಯತ್ನಿಸಲಾಗಿದೆ. ತಡೆಯಲು ಬಂದ ಸಂತ್ರಸ್ತೆಯ ತಾಯಿಯ ಮೇಲೆಯೂ ಖಾರದ ಪುಡಿ ಎರಚಲಾಗಿದೆ. ಈ ಸಂದರ್ಭ ಸ್ಥಳೀಯರು ಆಗಮಿಸಿದ್ದು, ಪ್ರದೀಪ್ ಪೂಜಾರಿ ಖಾಸಗಿ ಫೋಟೋಗಳನ್ನು ತೋರಿಸಿದ್ದಾನೆ ಎನ್ನಲಾಗಿದೆ. ಘಟನೆಯ ಆಡಿಯೋ, ವಿಡಿಯೋ ಹಾಗೂ ಸ್ಥಳದಲ್ಲಿ ಪತ್ತೆಯಾದ ವಸ್ತುಗಳು ತನಿಖೆಗೆ ಮಹತ್ವದ ಸಾಕ್ಷ್ಯಗಳಾಗಿವೆ ಎಂದು ಎಸ್ಪಿ ವಿವರಿಸಿದ್ದಾರೆ.ಘಟನೆ ವೇಳೆ ಸಂತ್ರಸ್ತೆಯ ತಾಯಿ ಸಂಬಂಧಿಕರನ್ನು ಕರೆದಿದ್ದು, ಸ್ಥಳಕ್ಕೆ ಬಂದ 7ರಿಂದ 8 ಮಂದಿ ಪ್ರದೀಪ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಗೆ ಸಂಬಂಧಿಸಿ
    ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹಲವು ಆರೋಪಗಳಿಗೆ ಸದ್ಯದ ತನಿಖೆಯಲ್ಲಿ ಸಾಕ್ಷ್ಯಗಳು ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

    ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ

    ಆಸ್ಪತ್ರೆಯಲ್ಲಿದ್ದಾಗ ಪ್ರದೀಪ್ ಪೂಜಾರಿ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಿಸುವ ಬದಲು ಎನ್‌ಸಿ ಪ್ರಕರಣ ದಾಖಲಿಸಿದ್ದ ಹಿನ್ನೆಲೆಯಲ್ಲಿ ಹಿರಿಯಡ್ಕ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಅವರನ್ನು ಕರ್ತವ್ಯದಿಂದ ತೆರವುಗೊಳಿಸಿ ಪಶ್ಚಿಮ ವಲಯ ಐಜಿಪಿ ಕಚೇರಿಯಲ್ಲಿ ವರದಿ ಮಾಡುವಂತೆ ಸೂಚಿಸಲಾಗಿದೆ.

    ಈ ಬಗ್ಗೆ ಇಲಾಖಾ ತನಿಖೆ ನಡೆಯುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ.ಪ್ರದೀಪ್ ಪೂಜಾರಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ಮತ್ತೊಂದು ಪ್ರಕರಣ ದಾಖಲಿಸಲಾಗಿದ್ದು, ಮಣಿಪಾಲ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ತನಿಖೆ ನಡೆಸಲಾಗುತ್ತಿದೆ. ಎಲ್ಲಾ ಆರೋಪಿಗಳ ವಿರುದ್ಧ ಸಾಕ್ಷ್ಯಾಧಾರಗಳ ಆಧಾರದಲ್ಲಿ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.

    150 ಸಾಮಾಜಿಕ ಜಾಲತಾಣ ಖಾತೆಗಳ ಪತ್ತೆ

    ಕಳೆದ ಎರಡು ದಿನಗಳಿಂದ ಸಂತ್ರಸ್ತೆಯ ಫೋಟೋ ಹಾಗೂ ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ತೇಜೋವಧೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ.
    ಅತ್ಯಾಚಾರ ಸಂತ್ರಸ್ತೆಯ ಗುರುತು ಬಹಿರಂಗಪಡಿಸುವುದು ಕಾನೂನುಬಾಹಿರ. ಈಗಾಗಲೇ ಫೋಟೋಗಳನ್ನು ಹಂಚಿಕೊಂಡಿರುವ ಸುಮಾರು 150 ಸಾಮಾಜಿಕ ಜಾಲತಾಣ ಖಾತೆಗಳನ್ನು ಪತ್ತೆ
    ಮಾಡಲಾಗಿದೆ.

    ಸಂತ್ರಸ್ತೆಯ ಫೋಟೋಗಳನ್ನು ಹಂಚಿಕೊಂಡವರು ಹಾಗೂ ಸತ್ಯಾಸತ್ಯತೆ ಪರಿಶೀಲಿಸದೆ ಸುಳ್ಳು ಮಾಹಿತಿ ಹರಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಸ್ಪಿ ಹರಿರಾಮ್ ಶಂಕರ್ ಎಚ್ಚರಿಕೆ ನೀಡಿದ್ದಾರೆ.

    Post Views: 6

    Related Posts

    ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ.3ರಿಂದ ನ.7ರವರೆಗೆ ನಿಷೇಧಾಜ್ಞೆ ಜಾರಿ- ಧರಣಿ, ಪ್ರತಿಭಟನೆ, ಮೆರವಣಿಗೆಗೆ ತಡೆ

    November 3, 2026

    ಮಂಗಳೂರು: ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಮಹಿಳೆಯ ಬಂಧನ

    November 3, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಪ್ರಕರಣ: ಕೃಪಾ ಆಳ್ವಾ ಸೇರಿ ಮೂವರಿಗೆ ನಿರೀಕ್ಷಣಾ ಜಾಮೀನು ಮಂಜೂರು

    November 2, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಉಡುಪಿ: ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ.3ರಿಂದ ನ.7ರವರೆಗೆ ನಿಷೇಧಾಜ್ಞೆ ಜಾರಿ- ಧರಣಿ, ಪ್ರತಿಭಟನೆ, ಮೆರವಣಿಗೆಗೆ ತಡೆ

    November 3, 2026

    ಪ್ರದೀಪ್ ಪೂಜಾರಿ ಆತ್ಮ*ಹ*ತ್ಯೆ ಪ್ರಕರಣ: ಸಂತ್ರಸ್ತೆಯ ಫೋಟೋ ಹಂಚಿದ 150 ಖಾತೆಗಳ ಪತ್ತೆ- ಕಠಿಣ ಕ್ರಮದ ಎಚ್ಚರಿಕೆ

    November 3, 2026

    ಮಂಗಳೂರು: ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಮಹಿಳೆಯ ಬಂಧನ

    November 3, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.