Facebook Twitter Instagram
    Monday, September 14
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026
    Share

    ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ವಿ. ಸುನಿಲ್ ಕುಮಾರ್ ಅವರ ತಲೆಯನ್ನು ಕತ್ತರಿಸಿದ ರೀತಿಯಲ್ಲಿ ಚಿತ್ರವನ್ನು ಎಡಿಟ್ ಮಾಡಿ, ಪ್ರಚೋದನಕಾರಿ ಹಿನ್ನೆಲೆ ಧ್ವನಿಯೊಂದಿಗೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದಡಿ ಪ್ರಸಾದ್ ಶೆಟ್ಟಿ ಎಂಬಾತನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಕಾರ್ಕಳ ಮೂಲದ ವಿಘೇಶ್ ಪ್ರಸಾದ್ ರಾವ್ ಎಂಬುವರು ಸೆಪ್ಟೆಂಬರ್ 12ರಂದು ರಾತ್ರಿ ಫೇಸ್‌ಬುಕ್ ಬಳಸುತ್ತಿದ್ದಾಗ ‘Prasad Shetty’ ಎಂಬ ಖಾತೆಯಲ್ಲಿ ಶಾಸಕರ ಚಿತ್ರವನ್ನು ಎಡಿಟ್ ಮಾಡಿ ಅಪ್‌ಲೋಡ್ ಮಾಡಿರುವುದು ಗಮನಕ್ಕೆ ಬಂದಿದೆ. ಸದರಿ ವಿಡಿಯೋದಲ್ಲಿ ಅವಾಚ್ಯ ಶಬ್ದಗಳನ್ನು ಬಳಸಿರುವುದಲ್ಲದೆ, ಜನಪ್ರತಿನಿಧಿಯೊಬ್ಬರನ್ನು ಕೊಲೆ ಮಾಡಬೇಕು ಹಾಗೂ ಹಲ್ಲೆ ನಡೆಸಬೇಕು ಎಂಬ ರೀತಿಯಲ್ಲಿ ಸಾರ್ವಜನಿಕರನ್ನು ಪ್ರಚೋದಿಸುವಂತಹ ಆಡಿಯೋ ತುಣುಕನ್ನು ಎಡಿಟ್ ಮಾಡಿ ಪ್ರಕಟಿಸಲಾಗಿತ್ತು.

    ಜನರಿಂದ ಆಯ್ಕೆಯಾದ ಶಾಸಕರ ವಿರುದ್ಧ ಇಂತಹ ದ್ವೇಷಪೂರಿತ ವಿಡಿಯೋ ಹರಿಬಿಡುವುದರಿಂದ ಸಮಾಜದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆಯಿದೆ ಎಂದು ವಿಘೇಶ್ ಪ್ರಸಾದ್ ರಾವ್ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ. ದೂರನ್ನು ಗಂಭೀರವಾಗಿ ಪರಿಗಣಿಸಿದ ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ತಕ್ಷಣವೇ ಪ್ರಕರಣ ದಾಖಲಿಸಿಕೊಂಡು, ಆರೋಪಿ ಪ್ರಸಾದ್ ಶೆಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ಮುಂದಿನ ಕಾನೂನು ನಡಾವಳಿಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

    Post Views: 2

    Related Posts

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026

    ಬೆಳ್ತಂಗಡಿ: ಕೃಷಿ ಕೆಲಸ ಮಾಡುತ್ತಿದ್ದ ಮಹಿಳೆಗೆ ಜಾತಿನಿಂದನೆ, ಜೀವ ಬೆದರಿಕೆ: ಆರೋಪಿ ಬಂಧನ

    September 13, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಾರ್ಕಳ: ಶಾಸಕ ಸುನಿಲ್ ಕುಮಾರ್ ವಿರುದ್ಧ ಪ್ರಚೋದನಕಾರಿ ವಿಡಿಯೋ- ಆರೋಪಿ ಪ್ರಸಾದ್ ಶೆಟ್ಟಿ ಅರೆಸ್ಟ್

    September 14, 2026

    ಸೆ.18ಕ್ಕೆ ತೆರೆಕಾಣಲಿದೆ ‘ಟಾಸ್’: ತುಳು-ಕನ್ನಡದಲ್ಲಿ ಸಿದ್ಧವಾದ ಅರ್ಜುನ್ ದೇವ್ ನಿರ್ದೇಶನದ ಸಿನಿಮಾ

    September 14, 2026

    ಮಂಗಳೂರು: ಸಾರ್ವಜನಿಕವಾಗಿ ತಲಾವಾರು ಹಿಡಿದು ಗ್ಯಾಂಗ್ ವಾರ್ ಗೆ ಯತ್ನ..!! ಪೊಲೀಸರಿಂದ ಸ್ವಯಂಪ್ರೇರಿತ ಪ್ರಕರಣ ದಖಾಲು

    September 13, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.