Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಡುಬಿದಿರೆ: ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ತಂದೆ ಅರೆಸ್ಟ್
    ಇತ್ತೀಚಿನ ಸುದ್ದಿ

    ಮೂಡುಬಿದಿರೆ: ಅಪ್ರಾಪ್ತ ಪುತ್ರಿಯನ್ನೇ ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ತಂದೆ ಅರೆಸ್ಟ್

    August 23, 2024
    Share

    ಮೂಡುಬಿದಿರೆ: ಅಪ್ರಾಪ್ತ ಪುತ್ರಿಯನ್ನು ಅತ್ಯಾಚಾರಗೈದು ಗರ್ಭಿಣಿಯನ್ನಾಗಿಸಿದ ಆರೋಪದಲ್ಲಿ ಆಕೆಯ ತಂದೆಯನ್ನೇ ಮೂಡುಬಿದಿರೆ ಪೊಲೀಸರು ಪೊಕ್ಸೊ ಪ್ರಕರಣದಲ್ಲಿ ಬಂಧಿಸಿದ್ದಾರೆ. ವೃತ್ತಿಯಲ್ಲಿ ಕೂಲಿ ಕಾರ್ಮಿಕನಾಗಿರುವ ಆರೋಪಿ ಆರು ತಿಂಗಳ ಹಿಂದೆ ಮನೆಯಲ್ಲಿಯೇ ಪ್ರೌಢಶಾಲಾ ವ್ಯಾಸಂಗ ಮಾಡುತ್ತಿರುವ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ. ಇತ್ತೀಚೆಗೆ ಆಕೆಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆರೋಪಿ ತಂದೆಯೇ ಆಕೆಯನ್ನು ಮಂಗಳೂರಿನ ಲೇಡಿಗೋಷನ್‌ ಆಸ್ಪತ್ರೆಗೆ ಕರೆದೊಯ್ದಿದ್ದ. ಅಲ್ಲಿ ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಬಾಲಕಿ ಆರು ತಿಂಗಳ ಗರ್ಭಿಣಿಯಾಗಿರುವುದು ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಬಾಲಕಿಯ ತಂದೆಯನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರಂಭದಲ್ಲಿ ಬೇರೆಯವರ ಹೆಸರು ಹೇಳಿದ್ದನೆ ಎನ್ನಲಾಗಿದೆ. ಇನ್ನೂ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದನ್ನು ಆತ ಒಪ್ಪಿಕೊಂಡಿದ್ದಾನೆ. ಆದ್ದರಿಂದ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಆರೋಪಿ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಲಾಗಿದೆ. ಗುರುವಾರ ಕಾಮುಕ ತಂದೆಯನ್ನು ಮೂಡುಬಿದಿರೆ ಪೊಲೀಸರು ಬಂಧಿಸಿದ್ದಾರೆ.

    Post Views: 221

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.