ಪಾಣಾಜೆ ಗ್ರಾಮದ ಆರ್ಲಪದವು ನಿವಾಸಿ, ಮೇಸ್ತ್ರಿ ಕಂ ಗುತ್ತಿಗೆದಾರ ವಿಜಯ್ ಕುಮಾರ್ (38) ಸೋಮವಾರ ಸಂಜೆ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ವಿಜಯ್ ಕುಮಾರ್ ಅವರಿಗೆ ವಿವಾಹ ನಡೆಸಲು ಮನೆಯವರು ಸಿದ್ಧತೆ ನಡೆಸಿಕೊಂಡಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಮೃತರು ತಂದೆ ಶಿವಪ್ಪ ನಾಯ್ಕ, ತಾಯಿ ಲಲಿತಾ, ಅಣ್ಣ, ಅಕ್ಕಾ ಮತ್ತು ಕುಟುಂಬಸ್ಥರನ್ನು ಅಗಲಿದ್ದಾರೆ.