Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ- 7 ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಖೋಟಾ ನೋಟು ಮುದ್ರಣ ಜಾಲ ಪತ್ತೆ- 7 ಆರೋಪಿಗಳ ಬಂಧನ

    July 16, 2026
    Share

    ಉಪ್ಪಿನಂಗಡಿ: ಬೆಳ್ತಂಗಡಿ ತಾಲೂಕಿನ ಕಣಿಯೂರು ಗ್ರಾಮದ ಅಡೆಂಜದಲ್ಲಿರುವ ಕಟ್ಟಡವೊಂದರಲ್ಲಿ ಎಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸಿ ಭಾರತೀಯ ಖೋಟಾ ಕರೆನ್ಸಿ ನೋಟುಗಳನ್ನು ಮುದ್ರಿಸುತ್ತಿದ್ದ ಜಾಲವನ್ನು ಉಪ್ಪಿನಂಗಡಿ ಪೊಲೀಸರು ಭೇದಿಸಿ, 7 ಆರೋಪಿಗಳನ್ನು ಬಂಧಿಸಿದ್ದಾರೆ.

    ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಸುತೇಶ್ ಕೆ.ಪಿ. ಅವರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಸಿಬ್ಬಂದಿಗಳೊಂದಿಗೆ ದಾಳಿ ನಡೆಸಿದ ವೇಳೆ ಇಬ್ರಾಹಿಂ (60), ಶರೀಪ್(51), ಸಂದೀಪ ಪುಂಡಲಿಕ ಶೋಳಂಬಿ(30), ಮಹಮ್ಮದ್ ನಬಾಸ್(37), ಸಲ್ಮಾನ್ ಫಾರೀಸ್(25), ಸಿರಾಜುದ್ದೀನ್(34) ಹಾಗೂ ಇರ್ಷಾದ್(31) ಅವರನ್ನು ವಶಕ್ಕೆ ಪಡೆಯಲಾಗಿದೆ.

    ದಾಳಿ ವೇಳೆ ₹500 ಮುಖಬೆಲೆಯ ಒಂದು ನೋಟು, ₹500 ನೋಟಿನ ಮಾದರಿಯಂತೆ ಮುದ್ರಿಸಲಾದ A-4 ಗಾತ್ರದ 21 ಹಾಳೆಗಳು, ಕಂಪ್ಯೂಟರ್, ಜೆರಾಕ್ಸ್ ಯಂತ್ರ, ಸೀಲ್‌ಗಳು ಸೇರಿದಂತೆ ಖೋಟಾ ನೋಟು ಮುದ್ರಣಕ್ಕೆ ಬಳಸಲಾಗುತ್ತಿದ್ದ ವಿವಿಧ ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ

    ಈ ಸಂಬಂಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2026ರಡಿ ಭಾರತೀಯ ನ್ಯಾಯ ಸಂಹಿತೆ (BNS)-2023ರ ಕಲಂ 178ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

    ಪ್ರಕರಣವನ್ನು ಭೇದಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಬಿಂದು ಮಣಿ ಆರ್ ಎನ್, ಐ.ಪಿ.ಎಸ್ ರವರು ಹಾಗೂ ಕೊಡಗು ಜಿಲ್ಲಾ ಸಿಬ್ಬಂದಿಗಳಾದ ಯೊಗೀಶ್ ಬಿ, HC 193 ಮತ್ತು ನಿರಂಜನ್ ಎಂ ಎನ್, HC 190 ರವರುಗಳು, ದ.ಕ ಜಿಲ್ಲಾ ವಿಶೇ಼ಷ ಘಟಕದ ಪೊಲೀಸ್ ನಿರೀಕ್ಷಕರಾದ ನಂದಕುಮಾರ್ ರವರು ಹಾಗೂ ಸಿಬ್ಬಂದಿಗಳಾದ ಎ.ಎಸ್.ಐ ದೀಪಕ್, ಹೆಚ್.ಸಿ ಸತೀಶ್ ಹಾಗೂ ಹೆಚ್.ಸಿ ರೌಫ್ ರವರುಗಳು ಸದ್ರಿ ಜಾಲವನ್ನು ಪತ್ತೆ ಮಾಡಿ ಪ್ರಕರಣ ದಾಖಲಿಸುವಲ್ಲಿ ಉಪ್ಪಿನಂಗಡಿ ಪಿ.ಎಸ್.ಐ ರವರೊಂದಿಗೆ ಸಹಕರಿಸಿರುತ್ತಾರೆ ಎಂದು ತಿಳಿದು ಬಂದಿದೆ.

    Post Views: 151

    Related Posts

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026

    ಮಂಗಳೂರು : ಭಜನೆ ಮಾಡುತ್ತಲೇ ಕುಸಿದು ಬಿದ್ದ ಯುವಕ, ಹೃದಯಾಘಾತದಿಂದ ಸಾವು

    September 5, 2026

    ಕಾಸರಗೋಡು: ರಕ್ತದ ಮಡುವಿನಲ್ಲಿ ಕಾರ್ಮಿಕನ ಮೃತದೇಹ ಪತ್ತೆ- ಕೊಲೆ ಶಂಕಿಸಿ ತನಿಖೆ, ಇಬ್ಬರು ಪರಾರಿ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.