ಬಂಟ್ವಾಳ: ಕಾರಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬಿಸಿರೋಡಿನ ಸರ್ಕಲ್ ಬಳಿ ನಡೆದಿದೆ. ಬಂಟ್ವಾಳ ಕನ್ಯಾನದ ವಿಷ್ಣು ಗ್ಯಾರೇಜ್ ಮಾಲಕ ವಿಶ್ವನಾಥ ಶೆಟ್ಟಿ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.

ಬಿಸಿರೋಡಿನ ಕಡೆಯಿಂದ ಮೆಲ್ಕಾರ್ ಕಡೆಗೆ ಕಾಂಕ್ರೀಟ್ ರಸ್ತೆಯಲ್ಲಿ ಹೋಗುತ್ತಿದ್ದ ವಿಶ್ವನಾಥ ಅವರ ಕಾರಿಗೆ ಮೆಲ್ಕಾರ್ ಪಾಣೆಮಂಗಳೂರು ಕಡೆಯಿಂದ ಬರುತ್ತಿದ್ದ ಸೆಲಿನಾ ಬಸ್ ವಿರುದ್ಧ ದಿಕ್ಕಿನಲ್ಲಿ ಬಂದು ಡಿಕ್ಕಿ ಹೊಡೆದಿದೆ.ಬಸ್ ಚಾಲಕನ ನಿಯಮ ಮೀರಿದ ಚಾಲನೆಯೇ ಘಟನೆಗೆ ಕಾರಣವಾಗಿದೆ ಎಂದು ಹೇಳಲಾಗಿದೆ.ಬಿಸಿರೋಡಿನಿಂದ ಮೆಲ್ಕಾರ್ ಕಡೆಗೆ ಹೋಗುವ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿಸಿದ್ದಾರೆ.ಘಟನೆಯಿಂದ ಕಾರು ಸಂಪೂರ್ಣ ಜಖಂಗೊಂಡಿದ್ದು ಕಾರು ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.