Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು
    ಇತ್ತೀಚಿನ ಸುದ್ದಿ

    ಮಂಗಳೂರು : ದ್ವಿಚಕ್ರ ವಾಹನಕ್ಕೆ ಖಾಸಗಿ ಬಸ್ ಡಿಕ್ಕಿ – ಸಹಸವಾರೆ ಸಾವು

    February 5, 2026
    Share

    ಮಂಗಳೂರು : ನಗರದ ನಂತೂರು ವೃತ್ತದ ಬಳಿ ಸ್ಕೂಟರ್ ಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು ಹಿಂಬದಿ ಸವಾರೆಯಾಗಿದ್ದ ಯುವತಿಯ ಮೇಲೆ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

    ಬಳ್ಳಾಲ್ ಬಾಗ್ ನಿವಾಸಿ ದೀಪ್ತಿ (26) ಮೃತಪಟ್ಟ ಯುವತಿ. ಈಕೆ ತನ್ನ ಭಾವೀ ಪತಿಯೊಂದಿಗೆ ಶಿವಭಾಗ್ ಕಡೆಯಿಂದ ಸ್ಕೂಟರ್ ನಲ್ಲಿ ವಾಮಂಜೂರು ಕಡೆಗೆ ತೆರಳುತ್ತಿದ್ದರು.

    ಈ ವೇಳೆ, ಕದ್ರಿ ಶಿವಭಾಗ್ ಕಡೆಯಿಂದ ನಂತೂರು ಕಡೆಗೆ ಸಾಗುತ್ತಿದ್ದ ಬಸ್ ತಾಗಿದ್ದು ಹಿಂಬದಿಯಿದ್ದ ಸವಾರೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ, ಬಸ್ ಆಕೆಯ ಹೊಟ್ಟೆಯ ಮೇಲೆ ಹರಿದಿದ್ದು ಗಂಭೀರ ಗಾಯಗೊಂಡಿದ್ದಾರೆ. ಕೂಡಲೇ ಎಜೆ ಆಸ್ಪತ್ರೆಗೆ ಒಯ್ದಿದ್ದು ಅಷ್ಟರಲ್ಲಿ ಆಕೆ ಅಸುನೀಗಿದ್ದಾರೆ.

    ಸ್ಕೂಟರ್ ಸವಾರನಾಗಿದ್ದ ಯುವಕ ಅಪಾಯದಿಂದ ಪಾರಾಗಿದ್ದಾನೆ. ನಂತೂರು ಬಳಿಯ ಬಸ್ ನಿಲ್ದಾಣ ಎದುರಲ್ಲೇ ಘಟನೆ ನಡೆದಿದ್ದು ಕುಡುಪು ಭಾಗಕ್ಕೆ ತೆರಳುತ್ತಿದ್ದ 22 ನಂಬರಿನ ಖಾಸಗಿ ಬಸ್ ಡಿಕ್ಕಿಯಾಗಿದೆ. ಬಸ್ ವೇಗವಾಗಿತ್ತೇ, ಸ್ಕೂಟರ್ ಬಲ ಭಾಗದಿಂದ ಎದುರಿಗೆ ಬಂದಿತ್ತೇ ಎನ್ನುವುದು ಗೊತ್ತಾಗಿಲ್ಲ ಎಂದು ಕದ್ರಿ ಪೊಲೀಸರು ತಿಳಿಸಿದ್ದಾರೆ.

    ‌ಕದ್ರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ‌ಯುವತಿ ಮತ್ತು ಯುವಕ ವಾಮಂಜೂರಿನಲ್ಲಿ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದರೆಂದು ತಿಳಿದುಬಂದಿದೆ.

    Post Views: 142

    Related Posts

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026

    ರಾತ್ರಿ ವೇಳೆ ದೇವಾಲಯ ಪ್ರವೇಶಿಸಿದ ವ್ಯಕ್ತಿಯಿಂದ ವಿಗ್ರಹ ಧ್ವಂಸ

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.