Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮೂಲ್ಕಿ: ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕೆ ಬೇಡಿಕೆ- ಮೂವರ ಬಂಧನ
    ಇತ್ತೀಚಿನ ಸುದ್ದಿ

    ಮೂಲ್ಕಿ: ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕೆ ಬೇಡಿಕೆ- ಮೂವರ ಬಂಧನ

    January 3, 2026
    Share

    ಮೂಲ್ಕಿ ಕಂಬಳದಲ್ಲಿ ಬಹುಮಾನ ಗೆದ್ದ ಕೋಣಗಳ ಮಾಲಕರಿಗೆ ಹಣಕ್ಕಾಗಿ ಪೀಡಿಸುತ್ತಿದ್ದ ಮೂವರು ಆರೋಪಿಗಳನ್ನು ಮೂಲ್ಕಿ ಪೊಲೀಸರು ಬಂಧಿಸಿದ್ದಾರೆ.

    ಶ್ಯಾಮ ಸುಂದರ್ ಶೆಟ್ಟಿ, ಅಕ್ಷಯ್ ಪೂಜಾರಿ ಹಾಗೂ ಸುವಿನ್ ಕಾಂಚನ್ ಬಂಧಿತರು.  ಅಂಗಾರಕಟ್ಟೆ ಕೆಂಚನಕೆರೆ ನಿವಾಸಿ ಸಂಶುದ್ದೀನ್ ಅವರಿಗೆ ಈ ಮೂವರು ಆರೋಪಿಗಳು ಹಣಕ್ಕಾಗಿ ಬೇಡಿಕೆ ಇಟ್ಟಿರುವುದಾಗಿ ತಿಳಿದು ಬಂದಿದೆ.

    ಸಂಶುದ್ದೀನ್ ಅವರು ಮುಂಬೈಯಲ್ಲಿ ನೆಲೆಸಿರುವ ಉದ್ಯಮಿಯೊಬ್ಬರಿಗೆ ಸೇರಿದ ಗದ್ದೆ, ತೋಟ ಹಾಗೂ ಮನೆಯನ್ನು ನೋಡಿಕೊಳ್ಳುತ್ತಿದ್ದರು. ಮೂಲ್ಕಿ ಅರಸು ಕಂಬಳದಲ್ಲಿ ಸಂಶುದ್ದೀನ್ ತಂದಿದ್ದ ಕೋಣಗಳಿಗೆ ಬಹುಮಾನ ಲಭಿಸಿದ್ದು, ಅದರಲ್ಲಿ ದೊರೆತ ಬಂಗಾರದ ಸರ ಹಾಗೂ ಹಣವನ್ನು ನೀಡುವಂತೆ ಆರೋಪಿಗಳು ಬೆದರಿಕೆಯೊಡ್ಡಿದ್ದಾರೆ. ಅಲ್ಲದೇ ನೀನು ದನಗಳನ್ನು ಕಡಿಯಲು ಕಸಾಯಿಖಾನೆಗೆ ಕೊಡುತ್ತೀಯಲ್ಲ ಎಂದು ಬೆದರಿಕೆಯೊಡ್ಡಿದ್ದಾರೆ ಎಂದು ಆರೋಪಿಸಲಾಗಿದೆ.

    ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

    Post Views: 157

    Related Posts

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026

    ಆಂಬ್ಯುಲೆನ್ಸ್ ಸಿಗದೆ ಹೃದಯಾಘಾತ ರೋಗಿ ಸಾವು; ಕೊಕ್ಕಡ ಆರೋಗ್ಯ ವ್ಯವಸ್ಥೆ ವಿರುದ್ಧ ಆಕ್ರೋಶ

    June 8, 2026

    ಹಠಾತ್ ಹವಾಮಾನ ವೈಪರೀತ್ಯದ ಹೊಡೆತ: ದೆಹಲಿ ಏರ್‌ಪೋರ್ಟ್‌ನಲ್ಲಿ 3 ವಿಮಾನಗಳು ಜಖಂ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.