Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ
    ಇತ್ತೀಚಿನ ಸುದ್ದಿ

    ಪಿಎಫ್ಐ ಪರ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ: ಮುಸ್ಲಿಂ ಧರ್ಮಗುರು ಬಂಧನ

    October 11, 2025
    Share

    ನಿಷೇಧಿತ ಸಂಘಟನೆ ಪಿಎಫ್‌ಐ ಪರವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಲ್ಲದೆ, ಸಂಘಟನೆಯನ್ನು ಬಲಪಡಿಸುವ ಉದ್ದೇಶದಿಂದ ಪ್ರಚಾರ ಮಾಡುತ್ತಿದ್ದ ಉಪ್ಪಿನಂಗಡಿ ಮೂಲದ ಮುಸ್ಲಿಂ ಧರ್ಮಗುರು ಸೈಯದ್ ಇಬ್ರಾಹಿಂ ತಂಙಳ್ ಎಂಬಾತನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

    ಪಿಎಫ್‌ಐ ಕಾನೂನು ಬಾಹಿರ ಸಂಘಟನೆಯೆಂದು 28-09-2022 ರಂದು ಭಾರತ ಸರ್ಕಾರ ಘೋಷಣೆ ಮಾಡಿತ್ತು. ಇದರ ಅರಿವಿದ್ದರೂ, ಹಳೆಯ ಪಿಎಫ್‌ಐ ಪ್ರಮುಖರ ಜೊತೆಗೆ ಸಂಪರ್ಕದಲ್ಲಿದ್ದುಕೊಂಡು ಅ.9ರಂದು ಆರೋಪಿ ಸೈಯ್ಯದ್ ಇಬ್ರಾಹಿಂ ತಂಙಳ್ (55) ಸಾಮಾಜಿಕ ಜಾಲತಾಣ ವಾಟ್ಸ್ ಆಪ್ ಗ್ರೂಪ್ ನಲ್ಲಿ ಕೇಂದ್ರ ಸರಕಾರದಿಂದ ನಿಷೇಧಕ್ಕೊಳಗಾದ ಪಿಎಫ್ಐ ಸಂಘಟನೆಯ ಪರವಾಗಿ ಪೋಸ್ಟ್ ಪ್ರಕಟಿಸಿದ್ದ. ಅಲ್ಲದೇ ಈ  ಬಗ್ಗೆ ಸ್ವಯಂ ಪ್ರೇರಿತನಾಗಿ ಪ್ರಚಾರ ಮಾಡಿದ್ದ. ಸೈಯದ್ ಇಬ್ರಾಹಿಂ ನಿಷೇಧಿತ ಸಂಘಟನೆ ಪರವಾಗಿ ಕೃತ್ಯವೆಸಗಿದ್ದರಿಂದ, ಸ್ವಯಂ ದೂರನ್ನು ಪಡೆದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ 113/2025 U/s 10 (a), (i), 13, 18 UAPA Act ರಂತೆ ದಾಖಲಾಗಿದೆ. ಆರೋಪಿಯನ್ನು ಮಂಗಳೂರು ನಗರದ ಉರ್ವ ಸ್ಟೋರ್ ಬಳಿಯಿಂದ ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದು, ಆತನ ವಶದಲ್ಲಿದ್ದ ಮೊಬೈಲ್ ಫೋನ್ ವಶಕ್ಕೆ ಪಡೆದು ತನಿಖೆಗೆ ಒಳಪಡಿಸಲಾಗಿದೆ. ಸದ್ಯ ಆರೋಪಿಯನ್ನು 49ನೇ ಹೆಚ್ಚುವರಿ ಸಿವಿಲ್ ಮತ್ತು ಸತ್ರ ನ್ಯಾಯಲಯ ಮತ್ತು ಎನ್‌.ಐ.ಎ. ಪ್ರಕರಣಗಳ ವಿಶೇಷ ನ್ಯಾಯಾಲಯ ಬೆಂಗಳೂರು ಇಲ್ಲಿಗೆ ಹಾಜರುಪಡಿಸಿದ್ದು, ಆರೋಪಿಗೆ ಅ.24ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

    Post Views: 231

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.