Facebook Twitter Instagram
    Monday, September 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ರಾಜ್ಯಾದ್ಯಂತ ಮೀನು, ಚಿಕನ್‌ ಕಬಾಬ್ ಗೆ ಕೃತಕ ಬಣ್ಣ ಬಳಕೆ ನಿಷೇಧ…
    ಇತ್ತೀಚಿನ ಸುದ್ದಿ

    ರಾಜ್ಯಾದ್ಯಂತ ಮೀನು, ಚಿಕನ್‌ ಕಬಾಬ್ ಗೆ ಕೃತಕ ಬಣ್ಣ ಬಳಕೆ ನಿಷೇಧ…

    June 25, 2024
    Share

    ರಾಜ್ಯಾದ್ಯಂತ ಕಬಾಬ್‌, ಫಿಶ್‌, ಚಿಕನ್‌ಗೆ ಕೃತಕ ಬಣ್ಣ ಬಳಕೆಗೆ ನಿರ್ಬಂಧಿಸಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕೃತಕ ಬಣ್ಣದ ಬೆರೆಸುವಿಕೆಯಿಂದಾಗಿ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಕಬಾಬ್‌, ಫಿಶ್‌, ಚಿಕನ್‌ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬೆರೆಸುವುದನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಿರ್ಬಂಧಿಸಿದೆ. ಬಾಯಿ ಚಪ್ಪರಿಸಿಕೊಂಡು ತಿನ್ನುವ ಗೋಬಿ ಮಂಚೂರಿ, ಬಾಂಬೆ ಮಿಠಾಯಿಗೆ ಕಲರ್‌ ಹಾಕುವುದನ್ನು ಬ್ಯಾನ್ ಮಾಡಿದ ಬೆನ್ನಲ್ಲೇ ಇದೀಗ ಕಬಾಬ್‌ ಸರದಿಯಾಗಿದೆ. ಕೃತಕ ಬಣ್ಣದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತಿದೆ. ಹೀಗಾಗಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಮಾರಾಟ ಮಾಡಲಾಗುತ್ತಿರುವ ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಿತ್ತು. ರಾಜ್ಯಾದ್ಯಂತ 39 ಕಬಾಬ್‌ಗಳ ಮಾದರಿಗಳನ್ನು ಸಂಗ್ರಹಿಸಿ ಲ್ಯಾಬ್‌ಗೆ ಕಳಿಸಿದಾಗ, ಅದರಲ್ಲಿ 8 ಕಬಾಬ್‌ನ ಮಾದರಿಗಳು ಕೃತಕ ಬಣ್ಣದಿಂದ (ಸನ್‌ಸೆಟ್ ಯೆಲ್ಲೋ – 7 ಮಾದರಿಗಳು ಹಾಗೂ ಸನ್‌ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ ಹೊಂದಿರುವ ಮಾದರಿಗಳು 1) ಕೂಡಿರುವುದರಿಂದ ಅಸುರಕ್ಷಿತ ಎಂದು ವರದಿಗಳಲ್ಲಿ ಕಂಡುಬಂದಿದೆ. ಹೀಗಾಗಿ ಯಾವುದೇ ಕೃತಕ ಬಣ್ಣಗಳನ್ನು ಉಪಯೋಗಿಸುವಂತಿರುವುದಿಲ್ಲ ಎಂದು ಸೂಚಿಸಿದೆ. ಕೃತಕ ಬಣ್ಣಗಳು ಬಳಕೆದಾರರ ಆರೋಗ್ಯದ ಮೇಲೆ ತೀವ್ರ ಪರಿಣಾಮ ಉಂಟುಮಾಡುತ್ತವೆ. ಈ ಹಿನ್ನೆಲೆಯಲ್ಲಿ ಕಬಾಬ್‌ನ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದಕ್ಕೆ ಅವಕಾಶವಿಲ್ಲ. ವೆಜ್/ಚಿಕನ್/ಫಿಶ್ ಇತರೆ ಕಬಾಬ್‌ಗಳ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣಗಳನ್ನು ಬಳಸುವುದನ್ನು ನಿರ್ಬಂಧಿಸಿ ಆದೇಶಿಸಿದೆ. ಒಂದು ವೇಳೆ ಕೃತಕ ಬಣ್ಣಗಳನ್ನು ಬಳಸಿರುವುದು ಕಂಡುಬಂದಲ್ಲಿ ತಯಾರಿಸುವವರ ಮೇಲೆ 7 ವರ್ಷಗಳಿಂದ ಜೀವಾವಧಿ ಅವಧಿಯವರೆಗೆ ಜೈಲು ಶಿಕ್ಷೆಯನ್ನು ಮತ್ತು 10 ಲಕ್ಷಗಳವರೆಗೆ ದಂಡವನ್ನು ವಿಧಿಸಲು ನ್ಯಾಯಾಲಯದಲ್ಲಿ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

    Post Views: 259

    Related Posts

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮದುವೆಯಾಗುವುದಾಗಿ ನಂಬಿಸಿ ವಂಚನೆ, ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ- ಬೆಳ್ತಂಗಡಿಯ ಯುವ ವಕೀಲನ ವಿರುದ್ಧ FIR

    September 7, 2026

    ಉಡುಪಿ: ರಸ್ತೆ ಬದಿಯಲ್ಲಿ ನವಜಾತ ಹೆಣ್ಣು ಮಗು ಪತ್ತೆ..!!

    September 7, 2026

    ನಾಗರಿಕರ ವೈಯಕ್ತಿಕ ಮಾಹಿತಿ ಅಕ್ರಮ ಸಂಗ್ರಹ ಆರೋಪ: ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ

    September 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.