Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ – ಕಿಂಗ್ ಪಿನ್ ಮಹಿಳೆಯ ಬಂಧನ
    ಇತ್ತೀಚಿನ ಸುದ್ದಿ

    ಉಳ್ಳಾಲ: ವೇಶ್ಯಾವಾಟಿಕೆ ಅಡ್ಡೆಗೆ ದಾಳಿ – ಕಿಂಗ್ ಪಿನ್ ಮಹಿಳೆಯ ಬಂಧನ

    March 8, 2023
    Share

    ಉಳ್ಳಾಲ: ಉಳ್ಳಾಲ ತಾಲೂಕಿನ ಪಂಡಿತ್ ಹೌಸ್ ಸಮೀಪದ ವಿಜೇತ ನಗರದಲ್ಲಿರುವ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಎಸಿಪಿ ಧನ್ಯಾ ನಾಯಕ್ ನೇತೃತ್ವದ ಪೊಲೀಸರ ತಂಡ ಮಾ. 07 ರ ರಾತ್ರಿ ದಾಳಿ ನಡೆಸಿ ಕಿಂಗ್ ಪಿನ್ ಮಹಿಳೆಯನ್ನ ಬಂಧಿಸಿದ್ದು ,ಮತ್ತೋರ್ವ ಪಿಂಪ್ ತಲೆ ಮರೆಸಿಕೊಂಡಿದ್ದಾನೆ.ಬಂಟ್ವಾಳ ತಾಲೂಕಿನ ಬೊಳಂತೂರು ಗ್ರಾಮದ ,ವಿಟ್ಲಕೋಡಿ ನಿವಾಸಿ, ಪಿಂಪ್ ರುಕಿಯಾ (50)ಬಂಧಿತ ಆರೋಪಿ. ಮತ್ತೋರ್ವ ಪ್ರಮುಖ ಆರೋಪಿ ಪಿಂಪ್ ಲತೀಫ್ ಎಂಬಾತ ಪರಾರಿಯಾಗಿದ್ದಾನೆ.

    ರುಕಿಯಾ ವಿಜೇತ ನಗರದ ಬಾಡಿಗೆ ಮನೆಯೊಂದರಲ್ಲಿ ಯುವತಿಯರನ್ನಿಟ್ಟು ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್. ನಾಯ್ಕ್ ಅವರು ಉಳ್ಳಾಲ ಪೊಲೀಸ್ ಠಾಣಾ ನಿರೀಕ್ಷಕರಾದ ಸಂದೀಪ್ ಜಿ.ಎಸ್. ಉಪ‌ನಿರೀಕ್ಷಕರಾದ ಮಂಜುಳಾ.ಎಲ್ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಅಡ್ಡೆಗೆ ದಾಳಿ ನಡೆಸಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಮೂವರು ಗಿರಾಕಿಗಳನ್ನ ವಶಕ್ಕೆ ಪಡೆದ ಪೊಲೀಸರು ನಾಲ್ವರು ನೊಂದ ಯುವತಿಯರನ್ನ ರಕ್ಷಿಸಿದ್ದಾರೆ.ಬಂಧಿತ ಆರೋಪಿಯಿಂದ 3 ದ್ವಿಚಕ್ರ ವಾಹನಗಳು, 9 ಮೊಬೈಲ್ ಫೋನ್ ಗಳು, 5,000 ನಗದು ಸೇರಿದಂತೆ ಒಟ್ಟು 1,76,580 ರೂಪಾಯಿ ಮೌಲ್ಯದ ಸೊತ್ತನ್ನ ವಶ ಪಡಿಸಲಾಗಿದೆ.ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ್ ಎನ್, ದಾಕ್ಷಾಯಿಣಿ,ಲಕ್ಷ್ಮಿ, ಎಸಿಪಿ ರೌಡಿ ನಿಗ್ರಹದಳ ಸಿಬ್ಬಂದಿ ರೆಜಿ ಪಾಲ್ಗೊಂಡಿದ್ದರು.

    Post Views: 428

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.