Facebook Twitter Instagram
    Wednesday, October 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

    October 28, 2026
    Share

    ರೋಪಿಸಿ, ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಮುಂದೆ ಇಟ್ಟು ಸ್ಥಳೀಯರು ಮಂಗಳವಾರ ಸಂಜೆ ಪ್ರತಿಭಟನೆ ನಡೆಸಿದರು. ಶಾಸಕ ಭರತ್ ಶೆಟ್ಟಿ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಯುವ ಜೋಡಿಯ ವಿರುದ್ಧವೂ ದೂರು ದಾಖಲಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

    ಮೃತ ಯುವಕನನ್ನು ಹೊಸಬೆಟ್ಟು ನಿವಾಸಿ ಸೋಮನಾಥ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ಕಾಸರಗೋಡು ಮೂಲದ ಯುವಕ ಮತ್ತು ದೆಹಲಿ ಮೂಲದ ಯುವತಿಯೊಬ್ಬರು ಹೊಸಬೆಟ್ಟು ಬಳಿಯ ಮೀನುಗಾರಿಕಾ ಜೆಟ್ಟಿಯಲ್ಲಿದ್ದಾಗ ಸ್ಥಳೀಯರು ಆಕ್ಷೇಪ ವ್ಯಕ್ತಪಡಿಸಿದ್ದರು. ಈ ವೇಳೆ ಎರಡೂ ಕಡೆಯವರ ನಡುವೆ ವಾಗ್ವಾದ ನಡೆದಿತ್ತು ಎನ್ನಲಾಗಿದೆ. ಈ ಸಂಬಂಧ ಯುವತಿ ನೀಡಿದ ದೂರಿನ ಮೇರೆಗೆ ಸೋಮನಾಥ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದರು ಎಂದು ತಿಳಿದುಬಂದಿದೆ.

    ಇದರಿಂದ ಮನನೊಂದ ಸೋಮನಾಥ ಸೋಮವಾರ ಬೆಳಗ್ಗೆ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ತಾವು ಸಾವಿಗೆ ಕಾರಣ ಎಂದು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟಿದ್ದರು ಎಂಬ ಮಾಹಿತಿಯೂ ಲಭ್ಯವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದುಬರಬೇಕಿದೆ.

    ವಿಚಾರಣೆಗೆ ಕರೆಸಿದ ಸಂದರ್ಭದಲ್ಲಿ ಪೊಲೀಸರು ದೌರ್ಜನ್ಯ ಎಸಗಿದ್ದಾರೆ ಎಂಬ ಆರೋಪವನ್ನು ಮುಂದಿಟ್ಟುಕೊಂಡು ಸ್ಥಳೀಯರು ಪ್ರತಿಭಟನೆ ನಡೆಸಿದರು. ಮಂಗಳವಾರ ಸಂಜೆ ಮೃತದೇಹವನ್ನು ಸುರತ್ಕಲ್ ಪೊಲೀಸ್ ಠಾಣೆಯ ಮುಂದೆ ಇರಿಸಿ ಆಕ್ರೋಶ ವ್ಯಕ್ತಪಡಿಸಿದರು. ನೂರಾರು ಮೊಗವೀರ ಯುವಕರು ಸ್ಥಳದಲ್ಲಿ ಜಮಾಯಿಸಿದ್ದರು. ಶಾಸಕ ಭರತ್ ಶೆಟ್ಟಿ ಕೂಡ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ ಪೊಲೀಸರನ್ನು ಪ್ರಶ್ನಿಸಿದರು.

    ಪೊಲೀಸ್ ಠಾಣೆ ಹೆದ್ದಾರಿಯ ಪಕ್ಕದಲ್ಲಿರುವುದರಿಂದ ಪ್ರತಿಭಟನೆಯ ವೇಳೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿ ಸಂಚಾರ ದಟ್ಟಣೆ ಕಾಣಿಸಿಕೊಂಡಿತು. ರಾತ್ರಿ ವೇಳೆ ಬೀಚ್ ಪ್ರದೇಶದಲ್ಲಿ ಯುವ ಜೋಡಿಗಳು ಅನುಮಾನಾಸ್ಪದವಾಗಿ ತಿರುಗಾಡುವುದು, ಮಾದಕ ವಸ್ತುಗಳ ಸೇವನೆ ಮತ್ತು ಅತಿರೇಕದ ವರ್ತನೆಗಳು ನಡೆಯುತ್ತಿವೆ ಎಂದು ಸ್ಥಳೀಯರು ಆರೋಪಿಸಿ, ಬೀಚ್ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಕಲ್ಪಿಸುವಂತೆ ಒತ್ತಾಯಿಸಿದರು.

    ಸೋಮನಾಥ ಅವರಿಗೆ ಮದ್ಯಪಾನದ ಚಟವಿದ್ದು, ಅಕ್ಟೋಬರ್ 25ರಂದು ಬೀಚ್ ಬಳಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಯುವ ಜೋಡಿಯನ್ನು ಪ್ರಶ್ನಿಸಿದ್ದರು. ಈ ಘಟನೆಯ ಬಳಿಕ ದೂರು ದಾಖಲಾಗಿದ್ದರಿಂದ ಅವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಯುವ ಜೋಡಿಯ ದೂರಿನ ಆಧಾರದಲ್ಲಿ ಸುಳ್ಳು ಪ್ರಕರಣ ದಾಖಲಿಸಲಾಗಿದೆ ಎಂಬ ಆರೋಪವನ್ನೂ ಪ್ರತಿಭಟನಾಕಾರರು ಮಾಡಿದ್ದಾರೆ.

    ಶಾಸಕ ಭರತ್ ಶೆಟ್ಟಿ ಸಾರ್ವಜನಿಕರು ಮತ್ತು ಪೊಲೀಸರೊಂದಿಗೆ ಮಾತುಕತೆ ನಡೆಸಿ, ಎರಡೂ ಕಡೆಯವರಿಂದ ದೂರು ಪಡೆದು ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಯುವ ಜೋಡಿಯ ವಿರುದ್ಧವೂ ದೂರು ನೀಡುವಂತೆ ತಿಳಿಸಲಾಗಿದ್ದು, ದೂರು ಸ್ವೀಕರಿಸಿದ ಬಳಿಕ ಪ್ರಕರಣ ದಾಖಲಿಸುವುದಾಗಿ ಪೊಲೀಸರು ಭರವಸೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

    ಪೋಸ್ಟ್‌ಮಾರ್ಟಂ ಪ್ರಕ್ರಿಯೆ ಮುಗಿದ ಬಳಿಕ ಮೃತದೇಹವನ್ನು ಆಸ್ಪತ್ರೆಯಿಂದ ಕೊಂಡೊಯ್ಯುವ ಸಂದರ್ಭದಲ್ಲಿ ಠಾಣೆಯ ಮುಂದೆ ಪ್ರತಿಭಟನೆ ನಡೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವ ಜೋಡಿಯ ವಿರುದ್ಧವೂ ಪ್ರಕರಣ ದಾಖಲಿಸಬೇಕೆಂಬ ಬೇಡಿಕೆ ಹಿನ್ನೆಲೆಯಲ್ಲಿ ದೂರು ನೀಡುವಂತೆ ಸೂಚಿಸಲಾಗಿದ್ದು, ಬಳಿಕ ಮೃತದೇಹವನ್ನು ಕೊಂಡೊಯ್ಯಲಾಗಿದೆ. ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಸಂಚಾರವನ್ನು ಸಹಜ ಸ್ಥಿತಿಗೆ ತರಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

    Post Views: 1

    Related Posts

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಯುವಕ ಆತ್ಮಹತ್ಯೆ, ಠಾಣೆ ಮುಂದೆ ಶವವಿಟ್ಟು ಪ್ರತಿಭಟನೆ

    October 28, 2026

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.