Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೆಪಿ ವಿಜಯೋತ್ಸವ ಬಳಿಕ ಚೂರಿ ಇರಿತ ಪ್ರಕರಣ: ಪ್ರಚೋದನಾಕಾರಿ ಘೋಷಣೆ ಮುಖ್ಯ ಕಾರಣ- ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್
    ಇತ್ತೀಚಿನ ಸುದ್ದಿ

    ಬಿಜೆಪಿ ವಿಜಯೋತ್ಸವ ಬಳಿಕ ಚೂರಿ ಇರಿತ ಪ್ರಕರಣ: ಪ್ರಚೋದನಾಕಾರಿ ಘೋಷಣೆ ಮುಖ್ಯ ಕಾರಣ- ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್

    June 11, 2024
    Share

    ಮಂಗಳೂರು: ಕಳೆದ ರವಿವಾರ ರಾತ್ರಿ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಬೋಳಿಯಾರಿನಲ್ಲಿ ವಿಜಯೋತ್ಸವ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರಿಗೆ ಚೂರಿ ಇರಿದ ಘಟನೆಗೆ ಪ್ರಚೋದನಾಕಾರಿ ಘೋಷಣೆ ಮುಖ್ಯ ಕಾರಣವಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್‌ವಾಲ್ ತಿಳಿಸಿದ್ದಾರೆ.

    ಮೆರವಣಿಗೆ ಮುಗಿಸಿ ಭಾರತ್ ಮಾತಾ ಕಿ ಜೈ ಘೋಷಣೆ ಮಾಡಿರುವುದು ಹೌದು. ಆದರೆ ಇದರಿಂದ ಪ್ರಚೋದನೆಗೊಂಡಿಲ್ಲ. ಬದಲಾಗಿ ಇದಕ್ಕೂ ಮೊದಲು ಮೆರವಣಿಗೆಯಲ್ಲಿ ಆಟೋ ನಿಲ್ದಾಣದ ಸಮೀಪ ಪಾಕಿಸ್ತಾನಕ್ಕೆ ಸಂಬಂಧ ಕಲ್ಪಿಸಿ ಆಕ್ಷೇಪಾರ್ಹ ಘೋಷಣೆಯನ್ನು ಕೂಗಿದ್ದಾರೆ. ಇದು ಸೋಶಿಯಲ್ ಮೀಡಿಯಾದ ಮೂಲಕ ಸಮುದಾಯದವರಿಗೆ ಗೊತ್ತಾಗಿದೆ. ಇದರಿಂದ ಕೆಲವರು ಪ್ರಚೋದನೆಗೊಂಡು ಕೃತ್ಯ ನಡೆಸಿದ್ದಾರೆ ಎಂದು ಪೊಲೀಸ್ ಆಯುಕ್ತರು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

    ಚೂರಿ ಇರಿದ ಪ್ರಕರಣದಲ್ಲಿಒಟ್ಟು 20 ಮಂದಿ ಆರೋಪಿಗಳ ಪೈಕಿ 6 ಮಂದಿಯನ್ನು ಬಂಧಿಸಲಾಗಿದೆ. ಚೂರಿ ಇರಿದವರಲ್ಲಿ ಓರ್ವ ರೌಡಿಶೀಟರ್ ಕೂಡ ಸೇರಿದ್ದಾನೆ. ಪ್ರಚೋದನಾಕಾರಿ ಘೋಷಣೆ ಕೂಗಿದವರ ವಿರುದ್ದವೂ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.

    ಶಾಂತಿ ಸುವ್ಯವಸ್ಥೆಗೆ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ನಾಳೆಯಿಂದ ಠಾಣೆಗಳಲ್ಲಿಯೂ ಶಾಂತಿ ಸಭೆ ನಡೆಸಲಾಗುವುದು ಎಂದವರು ತಿಳಿಸಿದರು.

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.