Facebook Twitter Instagram
    Sunday, June 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ
    ಇತ್ತೀಚಿನ ಸುದ್ದಿ

    ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ

    April 22, 2026
    Share

    ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಹಾಗೂ ಪೇದೆ ರೆಡ್‌ಹ್ಯಾಂಡ್‌ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್ ಎಂದು ಗುರುತಿಸಲಾಗಿದೆ. ಇಸ್ಪೀಟ್ ಆಡುವಾಗ ಸಿಕ್ಕಿಬಿದ್ದಿದ್ದ ಆರೋಪಿಯನ್ನು ಪ್ರಕರಣದಿಂದ ಕೈಬಿಡಲು ಹಾಗೂ ಆತನ ಬೈಕ್‌ ಬಿಡಲು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ 1.70 ಲಕ್ಷ ರೂ. ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

    ಲಂಚದ ಬೇಡಿಕೆ ಬಗ್ಗೆ ಮುತ್ತಪ್ಪ ನಾಯ್ಕರ್ ಎಂಬವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಫೋನ್‌ ಕರೆ ರೆಕಾರ್ಡಿಂಗ್ ಆಧಾರದ ಮೇಲೆ ದಾಳಿ ಮಾಡಿ ಇಬ್ಬರನ್ನು ಲೋಕಾಯುಕ್ತ ಬಂಧಿಸಿದ್ದು, ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಯುತ್ತಿದೆ.

    ಲೋಕಾಯುಕ್ತ ಎಸ್.ಪಿ ಮಹಾಲಿಂಗ್ ನಂದಗಾಂವಿ ಮಾರ್ಗದರ್ಶನದಲ್ಲಿ, ಲೋಕಾ ಡಿವೈಎಎಸ್‌ಪಿ ಸುರೇಶ್ ರೆಡ್ಡಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.

    Post Views: 93

    Related Posts

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026

    ತಲೆಮರೆಸಿಕೊಂಡಿದ್ದ ದರೋಡೆಕೋರನಿಗೆ ಪೊಲೀಸರ ಬಲೆ: ಉಳ್ಳಾಲ ಠಾಣೆ ತಂಡದ ಯಶಸ್ಸು

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.