Facebook Twitter Instagram
    Monday, June 8
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಲಂಚ ತೆಗೆದುಕೊಳ್ಳುವಂತೆ PSI ಒತ್ತಡ : ಸಾಮೂಹಿಕ ದಯಾಮರಣ ಕೋರಿ ಸಿಎಂ ಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ
    ಇತ್ತೀಚಿನ ಸುದ್ದಿ

    ಲಂಚ ತೆಗೆದುಕೊಳ್ಳುವಂತೆ PSI ಒತ್ತಡ : ಸಾಮೂಹಿಕ ದಯಾಮರಣ ಕೋರಿ ಸಿಎಂ ಗೆ ಪತ್ರ ಬರೆದ ಪೊಲೀಸ್ ಸಿಬ್ಬಂದಿ

    April 13, 2026
    Share

    ವಿಜಯಪುರ ನಗರದ ಆದರ್ಶನಗರ ಪೊಲೀಸ್ ಠಾಣೆಯ ಪಿಎಸ್‌ಐ ಸೀತಾರಾಮ್ ಲಮಾಣಿ ಭ್ರಷ್ಟಾಚಾರ ಕಿರುಕುಳಕ್ಕೆ ಬೇಸತ್ತು ಸಿಎಂ, ಗೃಹಸಚಿವ ಸೇರಿದಂತೆ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಠಾಣಾ ಸಿಬ್ಬಂದಿ ಹಾಗೂ ಅಧಿಕಾರಿಗಳು ಸಾಮೂಹಿಕ ದಯಾಮರಣ ಕೋರಿ ಪತ್ರ ಬರೆದಿದ್ದಾರೆ.

    ಪಿಎಸ್‌ಐ ಲಮಾಣಿ ಆದರ್ಶನಗರ ಪೊಲೀಸ್ ಠಾಣೆಯಿಂದ ತಿಕೋಟ ಪೊಲೀಸ್ ಠಾಣೆಗೆ ವರ್ಗಾವಣೆಗಾಗಿ ಹಣ ಹೊಂದಿಸುತ್ತಿದ್ದಾರೆ. ಹೀಗಾಗಿ ಹಣಕ್ಕಾಗಿ ವಿಪರೀತ ಭ್ರಷ್ಟಾಚಾರ, ಕಾನೂನು ಬಾಹಿರ ಚಟುವಟಿಕೆಗಳಿಂದ ಸಾರ್ವಜನಿಕರಲ್ಲಿ ಹಾಗೂ ಸಿಬ್ಬಂದಿ ವರ್ಗದಲ್ಲಿ ಪಿಎಸ್‌ಐ ತೊಂದರೆಯುಂಟು ಮಾಡುತ್ತಿದ್ದಾರೆ.

    ಠಾಣೆಯಲ್ಲಿ ದಾಖಲಾಗುವ ಎಫ್‌ಐಆರ್, ದೂರುದಾರರಿಂದ 10,000 ರೂ.ಯಿಂದ 1 ಲಕ್ಷ ರೂ.ವರೆಗೆ ಸಿಬ್ಬಂದಿ ಹಣ ವಸೂಲಿ ಮಾಡಬೇಕು ಎಂದು ಒತ್ತಡ ಹೇರಿದ್ದಾರೆ. ಇನ್ನು ಹಣ ವಸೂಲಿಗೆ 5.0 ಕೋಡ್ ಅಂದ್ರೆ 50,000 ರೂ. ಹೀಗೆ ಕೋಡ್ ಬಳಸಿ ಹಣ ವಸೂಲಿ ಮಾಡಲು ಒತ್ತಡ ಹೇರುತ್ತಿದ್ದಾರೆ. ಇದರ ಜೊತೆಗೆ ಬಾರ್, ಸ್ಪಾ, ಸಿಗರೇಟ್ ಹಾಗೂ ಮಾವಾ (ತಂಬಾಕು), ವೇಶ್ಯಾವಾಟಿಕೆ ಸೇರಿದಂತೆ ಅನೇಕ ವ್ಯವಹಾರಗಳಿಂದ ವಸೂಲಿಗೆ ಒತ್ತಡ ಹೇರುತ್ತಿದ್ದಾರೆ ಎಂದು ತಿಳಿಸಿದ್ದಾರೆ.

    ​ಪತ್ರದಲ್ಲಿ ತಮ್ಮ ನೋವನ್ನು ತೋಡಿಕೊಂಡಿರುವ ಅಧಿಕಾರಿ, ಪಿಎಸ್‌ಐ ಅವರು ಪ್ರತಿ ವಿಷಯದಲ್ಲೂ ಹಣದ ಬೇಡಿಕೆ ಇಡುತ್ತಾರೆ ಮತ್ತು ಹಣ ನೀಡದಿದ್ದರೆ ಕರ್ತವ್ಯದಲ್ಲಿ ಇಲ್ಲದ ಸಬೂಬುಗಳನ್ನು ಹೇಳಿ ಕಿರುಕುಳ ನೀಡುತ್ತಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಮೇಲಾಧಿಕಾರಿಗಳ ಈ ವರ್ತನೆಯಿಂದಾಗಿ ನೆಮ್ಮದಿಯಿಂದ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ, ಇದರಿಂದಾಗಿ ಕುಟುಂಬದ ಮೇಲೆಯೂ ಪರಿಣಾಮ ಬೀರುತ್ತಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ.

    Post Views: 157

    Related Posts

    ಹುಲಿಕಲ್ ಘಾಟ್‌ನಲ್ಲಿ ಖಾಸಗಿ ಬಸ್‌ಗೆ ಬೆಂಕಿ; 17 ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು

    June 7, 2026

    ಆನ್‌ಲೈನ್ ಗೇಮ್ ವ್ಯಸನದ ಭೀಕರ ಅಂತ್ಯ: ತಂದೆ-ಅಕ್ಕನನ್ನೇ ಚಾಕುವಿನಿಂದ ಕೊಂದ ಪುತ್ರ

    June 7, 2026

    ಸಾಕು ಪ್ರಾಣಿಯೇ ಜೀವದಾತ! ಬೆಕ್ಕಿನ ಕಾರಣದಿಂದ ಭೀಕರ ದುರಂತದಿಂದ ಪಾರಾದ ಕುಟುಂಬ

    June 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.