ಬೆಂಗಳೂರು : 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಗ್ರೀನ್ ಸಿಗ್ನಲ್ ನೀಡಿದೆ.
5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದ್ದು, ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿತ್ತು.
ಇಂದು ವಿಚಾರಣೆ ನಡೆಸಿದ ಹೈಕೋರ್ಟ್ 5 ಮತ್ತು 8 ನೇ ತರಗತಿ ಪಬ್ಲಿಕ್ ಪರೀಕ್ಷೆ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ ಹೈಕೋರ್ಟ್ ಸುತ್ತೋಲೆ ರದ್ದುಪಡಿಸಿದ ಆದೇಶಕ್ಕೆ ತಡೆ ನೀಡಲು ನಿರಾಕರಿಸಿ ವಿಚಾರಣೆ ಇಂದಿಗೆ ಮುಂದೂಡಿತ್ತು. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ ನೀಡಿ, ಹೈಕೋರ್ಟ್ ವಿಭಾಗೀಯ ಪೀಠ ವಿಚಾರಣೆ ಇಂದಿಗೆ ಮುಂದೂಡಿತ್ತು. ಅಂತೆಯೇ ಇಂದು ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟವನ್ನು ಹೆಚ್ಚಿಸಲು ಶಿಕ್ಷಣ ಇಲಾಖೆ ಮೌಲ್ಯಾಂಕನ ಪರೀಕ್ಷೆ ನಡೆಸಲು ಮುಂದಾಗಿದ್ದು, ಇಂದು ಹೈಕೋರ್ಟ್ ನಲ್ಲಿ ಮೇಲ್ಮನವಿ ವಿಚಾರಣೆ ನಡೆದಿದೆ. ಹೈಕೋರ್ಟ್ ನ ವಿಭಾಗೀಯ ಪೀಠವು ಪರೀಕ್ಷೆ ನಡೆಸಲು ಅನುಮತಿ ನೀಡಿದರೆ ರಾಜ್ಯ ಪಠ್ಯಕ್ರಮ ಬೋಧಿಸುತ್ತಿರುವ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಮೌಲ್ಯಾಂಕನ ಪರೀಕ್ಷೆ ನಡೆಸಬೇಕಾಗುತ್ತದೆ. ಒಂದು ವೇಳೆ ಅನುಮತಿ ನೀಡದಿದ್ದರೆ, ಮಂಡಳಿ ಪರೀಕ್ಷೆ ಬದಲಾಗಿ ಆಯಾ ಶಾಲ ಹಂತದಲ್ಲಿಯೇ ಪರೀಕ್ಷೆ ನಡೆಸಲಾಗುತ್ತದೆ.