Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಂಟ್ವಾಳ: PUC ವಿದ್ಯಾರ್ಥಿ ನಾಪತ್ತೆ ಪ್ರಕರಣ-ಪೊಲೀಸರಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ
    ಇತ್ತೀಚಿನ ಸುದ್ದಿ

    ಬಂಟ್ವಾಳ: PUC ವಿದ್ಯಾರ್ಥಿ ನಾಪತ್ತೆ ಪ್ರಕರಣ-ಪೊಲೀಸರಿಗೆ ಹೈಕೋರ್ಟ್ ಕಟ್ಟುನಿಟ್ಟಿನ ಆದೇಶ

    March 7, 2025
    Share

    ಮಂಗಳೂರು: ನಗರದ ಹೊರವಲಯದ ಫರಂಗಿಪೇಟೆ ನಿವಾಸಿ ಪಿಯುಸಿ ವಿದ್ಯಾರ್ಥಿ ದಿಗಂತ್‌ ನಾಪತ್ತೆಯಾಗಿ 10 ದಿನಗಳಾದರೂ ಆತನ ಇರುವಿಕೆಯ ಬಗ್ಗೆ ಯಾವ ಸುಳಿವೂ ಸಿಕ್ಕಿಲ್ಲ.
    ಆದ್ದರಿಂದ ದಿಗಂತ್‌ ಪೋಷಕರು ಸದ್ಯ ಹೈಕೋರ್ಟ್‌ ಮೊರೆ ಹೋಗಿದ್ದಾರೆ. ಪುತ್ರನನ್ನು ಶೀಘ್ರವಾಗಿ ಪತ್ತೆಹಚ್ಚಲು ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ. ದಿಗಂತ್‌ ತಂದೆ ಪದ್ಮನಾಭ್‌ ಅವರು ಹೈಕೋರ್ಟ್‌ಗೆ ಹೇಬಿಯಸ್‌ ಕಾರ್ಪಸ್‌ ಅರ್ಜಿ ಸಲ್ಲಿಸಿದ್ದರು. ಜಸ್ಟೀಸ್‌ ವಿ.ಕಾಮೇಶ್ವರ್‌ ರಾವ್‌, ಜಸ್ಟೀಸ್‌ ಟಿ.ಎಂ.ನಡಾಫ್‌ರಿಂದ ಹೈಕೋರ್ಟ್‌ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಅರ್ಜಿಯ ವಿಚಾರಣೆ ನಡೆದಿದೆ. ಮಾರ್ಚ್‌ 12ರೊಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕೆಂದು ದ್ವಿಸದಸ್ಯ ವಿಭಾಗೀಯ ಪೀಠ ಪೊಲೀಸರಿಗೆ ಆದೇಶಿಸಿ ಮಾರ್ಚ್‌ 13ಕ್ಕೆ ವಿಚಾರಣೆ ಮುಂದೂಡಿದೆ.
    ಬಂಟ್ವಾಳದ ಫರಂಗಿಪೇಟೆ ಕಿದೆಬಿಟ್ಟು ನಿವಾಸಿ ದಿಗಂತ್‌, ಫೆ.25ರ ಸಂಜೆ ಫರಂಗಿಪೇಟೆ ಅಂಜನೇಯ ವ್ಯಾಯಾಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದವನು, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ. ಆತ ಕಾಣದಿದ್ದಾಗ ಹುಡುಕಾಟ ನಡೆಸಿದಾಗ ಫರಂಗಿಪೇಟೆಯ ರೈಲ್ವೆ ಹಳಿಯಲ್ಲಿ ದಿಗಂತ್‌ ಚಪ್ಪಲಿ ಹಾಗೂ ಮೊಬೈಲ್‌ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡುಬಂದಿತ್ತು. ಐದು ದಿನವಾದರೂ ಆತನ ಸುಳಿವು ಸಿಕ್ಕಿಲ್ಲ ಮಾರ್ಚ್‌ 1ರಂದು ಫರಂಗಿಪೇಟೆ ಬಂದ್‌ ಮಾಡಿ ಪ್ರತಿಭಟನೆ ನಡೆಸಲಾಗಿತ್ತು. ಬಳಿಕ ಪೊಲೀಸರು ಏಳು ತನಿಖಾ ತಂಡಗಳನ್ನು ರಚಿಸಿ ತನಿಖೆಯನ್ನು ಆರಂಭಿಸಿದ್ದರು.

    Post Views: 182

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.