Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು : ಭಾರೀ ಮಳೆಗೆ ಪಂಪ್‌ವೆಲ್ ಜಲಾವೃತ
    ಇತ್ತೀಚಿನ ಸುದ್ದಿ

    ಮಂಗಳೂರು : ಭಾರೀ ಮಳೆಗೆ ಪಂಪ್‌ವೆಲ್ ಜಲಾವೃತ

    July 3, 2023
    Share

    ಸೋಮವಾರ ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಯಿಂದ ಮಂಗಳೂರು ನಗರ ಪ್ರದೇಶದ ಹಲವೆಡೆ ತಗ್ಗು ಪ್ರದೇಶಗಳು ಜಲಾವೃತವಾಗಿದೆ.

    ಭಾರೀ ಮಳೆಗೆ ಪಂಪ್ ವೆಲ್, ಕೊಟ್ಟಾರ ಚೌಕಿ, ಮಾಲೆಮಾರ್ ಪ್ರದೇಶ ಜಲಾವೃತವಾಗಿದ್ದು ವಾಹನ ಸವಾರರು ಪರದಾಡುವಂತಾಗಿದೆ. ಪಂಪ್‌ವೆಲ್ ಮೇಲ್ಸೇತುವೆ ಕೆಳಗೆ ಮೊಣಕಾಲು ಎತ್ತರಕ್ಕೆ ನೀರು ನಿಂತಿದ್ದು ನಗರದ ಕಡೆ ಸಂಚರಿಸುವ ವಾಹನಗಳು ಜಂಕ್ಷನ್‌ನಲ್ಲಿ ಸಿಲುಕಿಕೊಂಡಿವೆ.ನಗರದ ಬಿಜೈನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ದುರಸ್ತಿಗಾಗಿ ಮ್ಯಾನ್ ಹೋಲ್ ಅಗೆದಿಟ್ಟುರುವುದ್ದರಿಂದ ಭಾರೀ ಮಳೆಯಿಂದಾಗಿ ಗಲೀಜು ನೀರಿನ ಜತೆ ಮಳೆ ನೀರು ಸುತ್ತಮುತ್ತಲಿನ ಬ್ಯಾಂಕ್, ಮೆಡಿಕಲ್‌ನೊಳಗೆ ನುಗ್ಗಿ ಅವಾಂತರ ಸೃಷ್ಟಿಯಾಗಿದೆ.ಇಂಡಿಯನ್ ಬ್ಯಾಂಕ್‌ನೊಳಗೆ ನೀರು ನುಗ್ಗಿ ಬ್ಯಾಂಕ್ ಸಿಬ್ಬಂದಿಗಳು ಕಡತಗಳು ಹಾಗೂ ಇನ್ನು ಪಕ್ಕದಲ್ಲಿದ್ದ ಎಟಿಎಂ ಮಷಿನ್‌ನಲ್ಲಿದ್ದ ಹಣವನ್ನು ಕೂಡ ಸ್ಥಳಾಂತರಿಸಿದ್ದಾರೆ.ಪಕ್ಕದಲ್ಲಿದ್ದ ಹೋಟೇಲ್ ಹಾಗೂ ಮೆಡಿಕಲ್‌ಗಳಿಗೂ ಗಲೀಜು ನೀರು ನುಗ್ಗಿ ಸಮಸ್ಯೆಯಾಗಿದೆ.
    ಕಳೆದ ಹಲವಾರು ದಿನಗಳಿಂದ ಮ್ಯಾನ್ ಹೋಲ್ ದುರಸ್ತಿಯಾಗುತ್ತಿದ್ದು ಇನ್ನು ಕೂಡ ಪೂರ್ಣವಾಗಿಲ್ಲ ಜತೆಗೆ ದಿನನಿತ್ಯ ಈ ಭಾಗದಲ್ಲಿ ಸಂಚರಿಸುವ ಮತ್ತು ವ್ಯಾಪಾರ ವ್ಯವಹಾರ ನಡೆಸುವ ಜನರಿಗೆ ಗಲೀಜು ನೀರಿನ ದುರ್ನಾತದಿಂದ ಸಮಸ್ಯೆಯಾಗುತ್ತಿದೆ.

    Post Views: 241

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.