Facebook Twitter Instagram
    Sunday, September 6
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಇನ್‌ಸ್ಟಾಗ್ರಾಂ ಸ್ನೇಹದಿಂದ ದುರಂತ ಅಂತ್ಯ: ಪಂಜಾಬಿ ಗಾಯಕಿ ಕೊಲೆ ಪ್ರಕರಣ
    ಇತ್ತೀಚಿನ ಸುದ್ದಿ

    ಇನ್‌ಸ್ಟಾಗ್ರಾಂ ಸ್ನೇಹದಿಂದ ದುರಂತ ಅಂತ್ಯ: ಪಂಜಾಬಿ ಗಾಯಕಿ ಕೊಲೆ ಪ್ರಕರಣ

    May 20, 2026
    Share

    ಪಂಜಾಬ್: ಕಳೆದ 6 ದಿನಗಳ ಹಿಂದೆ ನಾಪತ್ತೆಯಾಗಿದ್ದ ಪಂಜಾಬಿ ಗಾಯಕಿ ಇಂದರ್ ಕೌರ್ (29) ಅವರು ಪಂಜಾಬ್‌ನ ಲೂಧಿಯಾನದ ಕಾಲುವೆಯೊಂದರಲ್ಲಿ ಅವರ ಮೃತದೇಹ ಪತ್ತೆಯಾಗಿದೆ.

    ಇಂದರ್ ಕೌರ್ ಅವರನ್ನು ಗನ್ ತೋರಿಸಿ ಅಪಹರಣ ಮಾಡಲಾಗಿತ್ತು. ಮಂಗಳವಾರ ಮುಂಜಾನೆ ಸ್ಥಳೀಯ ಪೊಲೀಸರು ನೀಲೋ ಕಾಲುವೆಯಿಂದ ಗಾಯಕಿಯ ಶವವನ್ನು ಹೊರತೆಗೆದಿದ್ದಾರೆ. ಸುಖ್ವಿಂದರ್ ಸಿಂಗ್ ಎಂಬಾತ ಇಂದರ್ ಕೌರ್ ಅವರನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ. ಇದೀಗ ಆತನ ಮೇಲೆಯೇ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ.ಮೇ 13ರಂದು ರಾತ್ರಿ ಸುಮಾರು ೮.೩೦ಕ್ಕೆ ಇಂದರ್ ಕೌರ್ ಅವರು ತಮ್ಮ ಫೋರ್ಡ್ ಫಿಗೊ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ಖರೀದಿಸಲು ಮನೆಯಿಂದ ಹೊರಟಿದ್ದರು. ಆದರೆ ಅವರು ಮತ್ತೆ ಮನೆಗೆ ಮರಳಲೇ ಇಲ್ಲ. ಗಾಯಕಿ ನಾಪತ್ತೆಯಾದ ಬಳಿಕ ಆಕೆಯ ಸಹೋದರ ಜೋತಿಂದರ್ ಸಿಂಗ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.ಇಂದರ್ ಕೌರ್ ಮತ್ತು ಆರೋಪಿ ಸುಖ್ವಿಂದರ್ ಸಿಂಗ್ ಮೂರು ವರ್ಷಗಳ ಹಿಂದೆ ಇನ್‌ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಸ್ನೇಹಿತರಾಗಿದ್ದರು. ಆದರೆ, ಸುಖ್ವಿಂದರ್‌ನಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ ಎಂಬ ಸತ್ಯ ತಿಳಿದ ತಕ್ಷಣ ಇಂದರ್ ಆತನೊಂದಿಗಿನ ಸಂಬಂಧವನ್ನು ಕಡಿದುಕೊಂಡಿದ್ದರು. ಅಲ್ಲದೆ ಆತನ ಮದುವೆ ಪ್ರಸ್ತಾಪವನ್ನು ತಿರಸ್ಕರಿಸಿದ್ದರು. ಇದರಿಂದ ಕೋಪಗೊಂಡ ಆರೋಪಿ ಸುಖ್ವಿಂದರ್, ಗಾಯಕಿಯ ಮೇಲೆ ತೀವ್ರ ದ್ವೇಷ ಸಾಧಿಸುತ್ತಿದ್ದ ಎಂದು ಪೊಲೀಸ್ ತನಿಖೆ ವೇಳೆ ತಿಳಿದುಬಂದಿದೆ.ಈ ಕೊಲೆ ಪ್ರಕರಣದ ಹಿಂದೆ ದೊಡ್ಡ ಸಂಚು ಅಡಗಿರುವುದಾಗಿ ಶಂಕೆ ವ್ಯಕ್ತಪಡಿಸಿದ ಪೊಲೀಸರು, ಆರೋಪಿ ಸುಖ್ವಿಂದರ್ ಸಿಂಗ್ ಗಾಯಕಿಯನ್ನು ಕೊಲ್ಲಲೆಂದೇ ಕೆನಡಾದಿಂದ ನೇಪಾಳ ಮಾರ್ಗವಾಗಿ ಪಂಜಾಬ್‌ಗೆ ಬಂದಿದ್ದ. ಮೇ 13ರಂದು ಆತ ತನ್ನ ಸಹಚರರೊಂದಿಗೆ ಸೇರಿ ಗಾಯಕಿಯ ಕಾರನ್ನು ಅಡ್ಡಗಟ್ಟಿ, ಗನ್ ಪಾಯಿಂಟ್‌ನಲ್ಲಿ ಅಪಹರಿಸಿದ್ದನು. ನಂತರ ಅವರನ್ನು ಭೀಕರವಾಗಿ ಕೊಲೆ ಮಾಡಿ, ಶವವನ್ನು ನೀಲೋ ಕಾಲುವೆಗೆ ಎಸೆದಿದ್ದನು. ಕೃತ್ಯ ಎಸಗಿದ ತಕ್ಷಣವೇ ಆರೋಪಿ ಮತ್ತೆ ಅದೇ ನೇಪಾಳ ಮಾರ್ಗವಾಗಿ ಕೆನಡಾಕ್ಕೆ ಪರಾರಿಯಾಗಿದ್ದಾನೆ ಎನ್ನಲಾಗಿದೆ.

    Post Views: 147

    CrimeNews PoliceInvestigation

    Related Posts

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು

    September 6, 2026

    ಪುತ್ತೂರು: ಪೊಲೀಸ್ ಸಿಬ್ಬಂದಿಗೆ ಹಲ್ಲೆ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪ: ಮೂವರ ವಿರುದ್ಧ ಪ್ರಕರಣ

    September 6, 2026

    ಕಂಬಳ ಅಭಿವೃದ್ಧಿಗೆ ₹5 ಕೋಟಿ ವಿಶೇಷ ಅನುದಾನ: ಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    September 5, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.