Facebook Twitter Instagram
    Thursday, August 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ
    ಇತ್ತೀಚಿನ ಸುದ್ದಿ

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ

    August 27, 2026
    Share

    ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮಾಡ್ನೂರು ಕಾವು ಎಂಬಲ್ಲಿ ಜೂನ್ 19ರಿಂದ 20ರ ನಡುವಿನ ಅವಧಿಯಲ್ಲಿ ನಡೆದ ಓಮ್ನಿ ಕಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ರಾಜ್ಯ ಕಳ್ಳತನ ಪ್ರಕರಣದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
    ಪ್ರಕರಣಕ್ಕೆ ಸಂಬಂಧಿಸಿದಂತೆ ಅ.ಕ್ರ. 94/2026ರಂತೆ ಬಿಎನ್‌ಎಸ್ ಕಲಂ 303(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಪುತ್ತೂರು ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಪ್ರಮೋದ್ ಕುಮಾರ್ ಹಾಗೂ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪ್ರಭಾರ ಪೊಲೀಸ್ ನಿರೀಕ್ಷಕ ತಿಮ್ಮಪ್ಪ ನಾಯ್ಕ್ ಅವರ ಮಾರ್ಗದರ್ಶನದಲ್ಲಿ, ಪಿಎಸ್‌ಐಗಳಾದ ಗುಣಪಾಲ ಜೆ. ಹಾಗೂ ಸುಷ್ಮಾ ಜಿ. ಭಂಡಾರಿ ನೇತೃತ್ವದ ತನಿಖಾ ತಂಡವು ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದೆ.
    ಬಂಧಿತರನ್ನು ಕೇರಳ ಕಾಸರಗೋಡು ನಿವಾಸಿಗಳಾದ ಅಬ್ದುಲ್ ಸಾಯಿಲ್ ಜೆ. (25), ಮೊಹಮ್ಮದ್ ಆಸೀಕ್ (25), ಮೊಹಮ್ಮದ್ ಸಿರಾಜ್ (28) ಹಾಗೂ ತಮಿಳುನಾಡಿನ ಕರೂರು ನಿವಾಸಿ ಶಕ್ತಿವೇಲು ಜಿ. (24) ಎಂದು ಗುರುತಿಸಲಾಗಿದೆ.
    ಆರೋಪಿಗಳಿಂದ ಕಳ್ಳತನವಾಗಿದ್ದ ಸುಮಾರು ₹2.5 ಲಕ್ಷ ಮೌಲ್ಯದ ಓಮ್ನಿ ಕಾರು ಹಾಗೂ ಕೃತ್ಯಕ್ಕೆ ಬಳಸಿದ್ದ ಸುಮಾರು ₹1 ಲಕ್ಷ ಮೌಲ್ಯದ ಕೆಟಿಎಂ ಬೈಕ್‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
    ವಿಚಾರಣೆ ವೇಳೆ ಆರೋಪಿಗಳು ಓಮ್ನಿ ಕಾರನ್ನು ಕಳವು ಮಾಡಿ ಕೇರಳಕ್ಕೆ ಸಾಗಿಸಿ, ಬಳಿಕ ತಮಿಳುನಾಡಿಗೆ ಮಾರಾಟ ಮಾಡಿರುವುದು ಬೆಳಕಿಗೆ ಬಂದಿದೆ. ತಮಿಳುನಾಡಿನಲ್ಲಿ ವಾಹನವನ್ನು ಆಂಬುಲೆನ್ಸ್ ಆಗಿ ಪರಿವರ್ತಿಸಿರುವುದೂ ತನಿಖೆಯಲ್ಲಿ ಪತ್ತೆಯಾಗಿದೆ.
    ಬಂಧಿತ ಆರೋಪಿಗಳ ವಿರುದ್ಧ ಕೇರಳದ ಬದಿಯಡ್ಕ ಹಾಗೂ ವಿದ್ಯಾನಗರ ಪೊಲೀಸ್ ಠಾಣೆಗಳಲ್ಲಿಯೂ ಕಳ್ಳತನ ಪ್ರಕರಣಗಳು ಈಗಾಗಲೇ ದಾಖಲಾಗಿರುವುದು ತನಿಖೆಯಿಂದ ತಿಳಿದುಬಂದಿದೆ.
    ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 2

    Related Posts

    ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ

    August 27, 2026

    ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ

    August 27, 2026

    ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ- ಸಚಿವ ಯುಟಿ ಖಾದರ್

    August 26, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು: ಅಂತರ್ ರಾಜ್ಯ ಕಳ್ಳತನ ಪ್ರಕರಣ-ನಾಲ್ವರು ಆರೋಪಿಗಳ ಬಂಧನ

    August 27, 2026

    ಉಳ್ಳಾಲ: ಮಾದಕ ವಸ್ತು ಸೇವನೆ : ಆರೋಪಿಯ ಬಂಧನ

    August 27, 2026

    ಮಂಗಳೂರು: ಮೊಬೈಲ್‌ಗಾಗಿ ತಂಗಿಯನ್ನೇ ಸುತ್ತಿಗೆಯಿಂದ ಕೊಲೆ; ಆರೋಪಿಗೆ 4 ವರ್ಷ ಜೈಲು ಶಿಕ್ಷೆ

    August 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.