Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು: ಮಗು ಕರುಣಿಸಿದ ಪ್ರಕರಣ- ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬದವರು
    ಇತ್ತೀಚಿನ ಸುದ್ದಿ

    ಪುತ್ತೂರು: ಮಗು ಕರುಣಿಸಿದ ಪ್ರಕರಣ- ಕಾನೂನು ಹೋರಾಟಕ್ಕೆ ಮುಂದಾದ ಕುಟುಂಬದವರು

    December 30, 2025
    Share

     ಪುತ್ತೂರಿನಲ್ಲಿ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಪುತ್ರ ಕೃಷ್ಣ ಜೆ.ರಾವ್ ಯುವತಿಯೊಬ್ಬಳನ್ನು ಪ್ರೀತಿಸಿ, ಮದುವೆಯಾಗುವುದಾಗಿ ನಂಬಿಸಿ ಗರ್ಭವತಿಯನ್ನಾಗಿ ಮಾಡಿದ್ದ ಪ್ರಕರಣ ಈಗ ಮತ್ತಷ್ಟು ಜಟಿಲಗೊಂಡಿದ್ದು, ಈಗ ಕಾನೂನು ಹೋರಾಟದತ್ತ ಹೊರಳಿದೆ. ಈ ಕುರಿತು ಸೋಮವಾರ ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಶ್ವಕರ್ಮ ಸಮುದಾಯದ ಮುಖಂಡ ಹಾಗೂ ಮಾಜಿ ಎಂಎಲ್‌ಸಿ ಕೆ.ಪಿ.ನಂಜುಂಡಿ ಎಲ್ಲ ಸಂಧಾನಗಳು ವಿಫಲವಾಗಿರುವುದರಿಂದ ಈಗ ಕಾನೂನು ಹೋರಾಟವೊಂದೇ ಉಳಿದಿರುವ ದಾರಿ ಎಂದಿದ್ದಾರೆ.

    ಸಂತ್ರಸ್ತೆಯು ಮಗುವಿಗೆ ಜನ್ಮ ನೀಡಿ ತಿಂಗಳುಗಳೇ ಕಳೆದರೂ ಸಮಸ್ಯೆ ಬಗೆಹರಿಯುವ ಲಕ್ಷಣ ಕಾಣಿಸುತ್ತಿಲ್ಲ. ನ್ಯಾಯಾಲಯದ ನಿರ್ದೇಶನದಂತೆ ಡಿಎನ್​​ಎ ಟೆಸ್ಟ್ ಮಾಡಿ, ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ಸಾಬೀತಾದರೂ ಆತ ಯುವತಿಯನ್ನು ಮದುವೆಯಾಗಲು ನಿರಾಕರಿಸಿದ್ದಾನೆ. ಬಿಜೆಪಿಯ ಪ್ರಮುಖ ನಾಯಕರು, ಆರ್​​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್​ ಸೇರಿ ಅನೇಕರು ಸಂಧಾನಕ್ಕೆ ಯತ್ನಿಸಿದ್ದರೂ ವಿಫಲವಾಗಿದೆ. ಪರಿಣಾಮವಾಗಿ ಕಾನೂನು ಹೋರಾಟವೊಂದೇ ನಮಗೆ ಉಳಿದಿರುವ ದಾರಿ ಎಂದು ಸಂತ್ರಸ್ತೆಯ ಕುಟುಂಬ ಹೇಳಿಕೊಂಡಿದೆ.

    ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ್ ರಾವ್ ಅವರ ಪುತ್ರ ಕೃಷ್ಣ ಜೆ.ರಾವ್ ಶಾಲಾ ದಿನಗಳಿಂದ ಪರಿಚಿತವಾಗಿದ್ದ ವಿಶ್ವಕರ್ಮ ಸುದಾಯದ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ ನಂತರ ವಂಚಿಸಿದ್ದಾನೆ. ಗರ್ಭವತಿಯಾಗಿದ್ದ ಯುವತಿಯನ್ನು ಮದುವೆಯಾಗುವಂತೆ ಸಂಧಾನ ಮಾಡಿಸಲಾಗಿತ್ತು. ಆರಂಭದಲ್ಲಿ ಮದುವೆಯಾಗಲು ನಿರಾಕರಿಸಿದ್ದ ಆತ ಕೊನೆಗೆ ಒತ್ತಾಯದ ಮೇರೆಗೆ ಒಪ್ಪಿದ್ದ. ಆದರೆ ಆತನಿಗೆ 21 ವರ್ಷ ವಯಸ್ಸು ಪೂರ್ಣವಾದ ನಂತರ ಮದುವೆ ಮಾಡುವುದಾಗಿ ಆತನ ತಂದೆ ಜಗನ್ನಿವಾಸ ರಾವ್ ಭರವಸೆ ನೀಡಿದ್ದರು. ಆದರೆ ಮಗು ಜನಿಸುತ್ತಿದ್ದಂತೆಯೇ ಕೃಷ್ಣ ರಾವ್ ಮದುವೆಗೆ ನಿರಾಕರಿಸಿದ್ದ. ನಂತರ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿತ್ತು. ಬಳಿಕ ಬಂಧನಕ್ಕೊಳಗಾಗಿದ್ದ ಕೃಷ್ಣ ರಾವ್ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಯುವತಿಗೆ ಹೆರಿಗೆಯಾದ ನಂತರ ‘ಮಗು ನನ್ನದಲ್ಲ’ ಎಂದು ಕೃಷ್ಣ ರಾವ್ ಹೇಳಿದ್ದರಿಂದ ನ್ಯಾಯಾಲಯದ ಆದೇಶದಂತೆ ಡಿಎನ್‌ಎ ಪರೀಕ್ಷೆ ನಡೆಸಲಾಗಿತ್ತು. ಆರೋಪಿ, ಸಂತ್ರಸ್ತೆ ಹಾಗೂ ಮಗುವಿನ ರಕ್ತ ಮಾದರಿಗಳನ್ನು ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಪರೀಕ್ಷೆಯಲ್ಲಿ ಕೃಷ್ಣ ಜೆ.ರಾವ್ ಮಗುವಿನ ತಂದೆ ಎಂಬುದು ದೃಢಪಟ್ಟಿತ್ತು.

    ಡಿಎನ್‌ಎ ವರದಿ ಪಾಸಿಟಿವ್ ಬಂದ ಬಳಿಕವೂ ಆರೋಪಿ ಹಾಗೂ ಆತನ ಕುಟುಂಬ ಮದುವೆಗೆ ನಿರಾಕರಿಸಿದ್ದಾರೆ ಎಂಬ ಆರೋಪ ಸಂತ್ರಸ್ತೆಯ ಕುಟುಂಬದಿಂದ ಕೇಳಿಬಂದಿದೆ. ಕಳೆದ ಮೂರು ತಿಂಗಳಿನಿಂದ ಆರ್​ಎಸ್​ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ವಿಶ್ವಕರ್ಮ ಮಹಾಸಭಾ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ ಅವರ ನೇತೃತ್ವದಲ್ಲಿ ಹಲವು ಬಾರಿ ಸಂಧಾನ ಮಾತುಕತೆ ನಡೆದರೂ ಯಾವುದೇ ಫಲಿತಾಂಶ ಕಂಡುಬಂದಿಲ್ಲ.

    ಹಿಂದುತ್ವದ ಶಕ್ತಿಯಾದ ಪುತ್ತೂರಿನಲ್ಲಿ ಬಡ ಹಿಂದೂ ಹೆಣ್ಣುಮಗುವಿಗೆ ನ್ಯಾಯಕೊಡಿಸಲು ಆಗಿಲ್ಲ ಎಂಬುದು ಆಶ್ಚರ್ಯವನ್ನುಂಟು ಮಾಡಿದೆ. ಬೇರೆ ಧರ್ಮದವರು ಹೀಗೆ ವಂಚನೆ ಮಾಡಿದ್ದರೆ ಮಂಗಳೂರು ಹೊತ್ತಿ ಉರಿದು ಹೋಗುತ್ತಿತ್ತು. ಜನಿಸಿ 6 ತಿಂಗಳಾದರೂ ಮಗುವಿಗೆ ಇನ್ನೂ ನಾಮಕರಣ ಆಗಿಲ್ಲ. ಸಂಧಾನದಲ್ಲಿ ನಾವು ಸೋತು ಹೋಗಿದ್ದೇವೆ. ಕಲ್ಲಡ್ಕ ಪ್ರಭಾಕರ್ ಭಟ್, ನಳಿನ್ ಕುಮಾರ್ ಕಟೀಲ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸೇರಿ ಎಲ್ಲರೂ ಸಂಧಾನ ನಡೆಸಿದ್ದರು. ಆದರೂ ಪ್ರಯೋಜವಾಗಿಲ್ಲ ಎಂದು ಕೆಪಿ ನಂಜುಂಡಿ ಹೇಳಿದ್ದಾರೆ.

    ಜಗನ್ನಿವಾಸ ರಾವ್ ಉಚ್ಚಾಟನೆ

    ಆರೋಪಿ ಕೃಷ್ಣ ಜೆ. ರಾವ್ ತಂದೆ ಹಾಗೂ ಪುತ್ತೂರಿನ ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರನ್ನು ಭಾರತೀಯ ಜನತಾ ಪಾರ್ಟಿ(ಬಿಜೆಪಿ) ಪಕ್ಷದಿಂದ ಉಚ್ಛಾಟಿಸಿದೆ.ಈ ಕುರಿತು ಮಾಹಿತಿ ನೀಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು, ಜಗನ್ನಿವಾಸ ರಾವ್ ಅವರು ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸದ ಕಾರಣ ಅವರನ್ನು ಪಕ್ಷದಿಂದ ಹೊರಹಾಕಲಾಗಿದೆ. ಪ್ರಕರಣ ಬೆಳಕಿಗೆ ಬಂದ ತಕ್ಷಣ ಜಗನ್ನಿವಾಸ ರಾವ್ ಅವರಿಗೆ ನೋಟಿಸ್ ನೀಡಲಾಗಿತ್ತು. ಪಕ್ಷದ ಚಟುವಟಿಕೆಗಳಿಂದ ದೂರ ಇಡಲಾಗಿತ್ತು ಎಂದು ಸ್ಪಷ್ಟನೆ ನೀಡಿದ್ದಾರೆ.

    ಒಂದು ವೇಳೆ ಡಿಎನ್‌ಎ ಪರೀಕ್ಷೆಯಲ್ಲಿ ಕೃಷ್ಣ ಜೆ. ರಾವ್ ಮಗುವಿನ ತಂದೆ ಎಂದು ಸಾಬೀತಾದರೆ, ಆ ಯುವತಿಯನ್ನು ತನ್ನ ಮಗ ಮದುವೆಯಾಗುವಂತೆ ಮಾಡುವುದಾಗಿ ಜಗನ್ನಿವಾಸ ರಾವ್ ಪಕ್ಷಕ್ಕೆ ಭರವಸೆ ನೀಡಿದ್ದರು. ಇದೇ ರೀತಿಯ ಭರವಸೆಯನ್ನು ಅವರು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೂ ನೀಡಿದ್ದರು ಎನ್ನಲಾಗಿದೆ. ಆದರೆ ಅವರು ಕೊಟ್ಟ ಮಾತಿನಂತೆ ನಡೆದುಕೊಂಡಿಲ್ಲ. ಹೀಗಾಗಿ ಪಕ್ಷವು ಅವರನ್ನು ಉಚ್ಛಾಟಿಸುವ ನಿರ್ಧಾರ ಕೈಗೊಂಡಿದೆ.

    Post Views: 133

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.