Facebook Twitter Instagram
    Wednesday, September 2
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

    September 2, 2026
    Share

    ಪುತ್ತೂರು: ಪುತ್ತೂರು ಕಸಬ ಗ್ರಾಮದ ಪುತ್ತೂರು ಪ್ರೆಸ್ ಕ್ಲಬ್ ಎದುರು ಸಾರ್ವಜನಿಕ ಸ್ಥಳದಲ್ಲಿ ಗುಂಪು ಸೇರಿ ಗಲಾಟೆ ನಡೆಸಿದ ಆರೋಪದಡಿ ಮೂವರು ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸೆ.1ರಂದು ಮಧ್ಯಾಹ್ನ ಸಾರ್ವಜನಿಕ ಸ್ಥಳದಲ್ಲಿ ಕೆಲವರು ಗುಂಪು ಸೇರಿ ಗಲಾಟೆ ನಡೆಸುತ್ತಿರುವ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಜಾನ್ಸನ್ ಡಿಸೋಜ ಅವರಿಗೆ ಮಾಹಿತಿ ಲಭಿಸಿತ್ತು. ಮಾಹಿತಿ ಮೇರೆಗೆ ಪೊಲೀಸರು ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿದಾಗ, ಕೆಲವರು ಪರಸ್ಪರ ಕೈಕೈ ಮಿಲಾಯಿಸಿಕೊಂಡು ಗಲಾಟೆ ನಡೆಸುತ್ತಾ ಸಾರ್ವಜನಿಕ ಶಾಂತಿಗೆ ಭಂಗ ಉಂಟು ಮಾಡುತ್ತಿರುವುದು ಕಂಡುಬಂದಿದೆ.

    ಪೊಲೀಸ್ ನಿರೀಕ್ಷಕರು ಗಲಾಟೆ ನಡೆಸುತ್ತಿದ್ದವರಿಗೆ ತಿಳುವಳಿಕೆ ನೀಡಿ ಶಾಂತಿ ಕಾಪಾಡುವಂತೆ ಸೂಚಿಸಿದರೂ, ಅವರು ಕಲಹ ಮುಂದುವರಿಸಿದ್ದಾರೆ ಎನ್ನಲಾಗಿದೆ.

    ಈ ಹಿನ್ನೆಲೆಯಲ್ಲಿ ಮುಂಡೂರು ಗ್ರಾಮದ ಪ್ರವೀಣ್ ಆಚಾರ್ಯ, ಕೂರ್ನಡ್ಕದ ರವೂಫ್ ಹಾಗೂ ಬೋಳ್ವಾರದ ಹಕೀಂ ಸೇರಿದಂತೆ ಇತರರ ವಿರುದ್ಧ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅ.ಕ್ರ. 104/2026, ಕಲಂ 194(2) ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

    Post Views: 1

    Related Posts

    ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಎಸ್‌.ಪೈ, ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು

    September 1, 2026

    ಮಂಗಳೂರು: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

    September 1, 2026

    ಬೆಳ್ತಂಗಡಿ: SIT ಸಬ್ ಇನ್ಸ್‌ಪೆಕ್ಟರ್ ವಿನೋದ್ ರೆಡ್ಡಿ ಅಮಾನತು

    September 1, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪುತ್ತೂರು ಪ್ರೆಸ್ ಕ್ಲಬ್ ಎದುರು ಗಲಾಟೆ: ಪ್ರವೀಣ್ ಆಚಾರ್ಯ, ರವೂಫ್, ಹಕೀಂ ಈ ಮೂವರ ವಿರುದ್ಧ ಪ್ರಕರಣ ದಾಖಲು

    September 2, 2026

    ದರ್ಬೆ ಗಲಾಟೆ ಪ್ರಕರಣ: ಅಂಗಡಿ ಮಾಲಕಿ ಅಂಜನಾ ಎಸ್‌.ಪೈ, ಸುದರ್ಶನ್ ಪೈಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರು

    September 1, 2026

    ಮಂಗಳೂರು: 17ಕ್ಕೂ ಹೆಚ್ಚು ಪ್ರಕರಣಗಳ ವಂಚನೆ ಆರೋಪಿ ಸ್ಯಾಮ್ ಪೀಟರ್ ಬಂಧನ

    September 1, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.