Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪುತ್ತೂರು ಗ್ರಾಮಾಂತರ ಪೊಲೀಸ್‌ರಿಂದ ಭರ್ಜರಿ ಕಾರ್ಯಾಚರಣೆ : 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!
    ಇತ್ತೀಚಿನ ಸುದ್ದಿ

    ಪುತ್ತೂರು ಗ್ರಾಮಾಂತರ ಪೊಲೀಸ್‌ರಿಂದ ಭರ್ಜರಿ ಕಾರ್ಯಾಚರಣೆ : 106 ಕಿಲೋ ಗ್ರಾಂ ಗಾಂಜಾ ವಶ – ಇಬ್ಬರು ಆರೋಪಿಗಳ ಬಂಧನ..!!

    January 20, 2026
    Share

    ಪುತ್ತೂರು: ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಭರ್ಜರಿ ಕಾರ್ಯಾಚರಣೆಯಲ್ಲಿ ಪೊಲೀಸರು 106 ಕಿಲೋಗ್ರಾಂ ಗಾಂಜಾವನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    ದಿನಾಂಕ 19-01-2026ರಂದು ಸಂಜೆ, ಕಾರು ಹಾಗೂ ಅಶೋಕ್ ಲೈಲ್ಯಾಂಡ್ ಗೂಡ್ಸ್ ವಾಹನದಲ್ಲಿ ಗಾಂಜಾ ಸಾಗಾಟ ನಡೆಯುತ್ತಿರುವ ಕುರಿತು ಖಚಿತ ಮಾಹಿತಿ ಲಭಿಸಿದ ಹಿನ್ನೆಲೆ, ಪುತ್ತೂರು ಗ್ರಾಮಾಂತರ ಪೊಲೀಸ್‌ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುಣಪಾಲ ಜೆ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪುತ್ತೂರು ತಾಲೂಕು ಪಡುವನ್ನೂರು ಗ್ರಾಮದ ಸಜಂಕಾಡಿ ಪ್ರದೇಶದಲ್ಲಿ ವಾಹನ ತಪಾಸಣೆ ನಡೆಸಿದರು.

    ತಪಾಸಣೆ ವೇಳೆ ಕಾರಿನ ಚಾಲಕ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ನಿವಾಸಿ ರಫೀಕ್ ಪಿ (37) ಎಂಬಾತನಾಗಿದ್ದು, ಆತನ ವರ್ತನೆ ಅನುಮಾನಾಸ್ಪದವಾಗಿದ್ದರಿಂದ ಕಾರನ್ನು ಪರಿಶೀಲಿಸಿದಾಗ, ಪ್ಲಾಸ್ಟಿಕ್ ಕವರ್‌ಗಳಲ್ಲಿ ಸುಮಾರು 100 ಗ್ರಾಂ ತೂಕದ ಗಾಂಜಾ ಗಿಡದ ಎಲೆ, ಹೂ ಹಾಗೂ ಕಾಯಿ ತುಂಬಿದ ಕಟ್ಟು ಪತ್ತೆಯಾಯಿತು.

    ಅದೇ ವೇಳೆ ಗೂಡ್ಸ್ ವಾಹನದ ಚಾಲಕನನ್ನು ವಿಚಾರಿಸಿದಾಗ ಆತ ಬೆಳ್ತಂಗಡಿ ಚಾರ್ಮಾಡಿ ಗ್ರಾಮದ ನಿವಾಸಿ ಅಬ್ದುಲ್ ಸಾದಿಕ್ (37) ಎಂಬುದಾಗಿ ತಿಳಿಸಿದ್ದು, ವಾಹನ ಪರಿಶೀಲನೆಯಲ್ಲಿ ಒಟ್ಟು 73 ಕಟ್ಟ 106 ಕಿಲೋ 60 ಗ್ರಾಂ ತೂಕದ ಗಾಂಜಾ ಪತ್ತೆಯಾಯಿತು.

    ವಶಪಡಿಸಿಕೊಂಡ ಗಾಂಜಾದ ಅಂದಾಜು ಮೌಲ್ಯ .53,03,000/- ໙໖.

    ಆರೋಪಿಗಳ ವಿಚಾರಣೆಯಲ್ಲಿ, ಈ ಗಾಂಜಾವನ್ನು ಕೇರಳ, ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಾರಾಟ ಮಾಡಲು ಸಾಗಾಟ ಮಾಡಲಾಗುತ್ತಿತ್ತು ಎಂಬ ಮಾಹಿತಿ ಲಭಿಸಿದೆ.

    ಪೊಲೀಸರು ಗಾಂಜಾ ಸಾಗಾಟಕ್ಕೆ ಬಳಸಿದ ಕಾರು ಮತ್ತು ಗೂಡ್ಸ್ ವಾಹನ, ಆರೋಪಿಗಳ ಬಳಿಯಿದ್ದ ಎರಡು ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

    Post Views: 110

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.