ಪುತ್ತೂರು: ಅಡಿಕೆ ಕೊಯ್ಯುವ ವೇಳೆ ಮರದಿಂದ ಬಿದ್ದು ಕಾರ್ಮಿಕರೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಬೆಟ್ಟಂಪಾಡಿಯಲ್ಲಿ ನಡೆದಿದೆ.
![](https://policepatrikekarnataka.com/wp-content/uploads/2024/06/WhatsApp-Image-2024-06-03-at-2.00.46-PM.jpeg)
![](https://policepatrikekarnataka.com/wp-content/uploads/2024/04/rohan-corp1.jpeg)
![](https://policepatrikekarnataka.com/wp-content/uploads/2024/04/rohan-corp2.jpeg)
![](https://policepatrikekarnataka.com/wp-content/uploads/2024/04/rohan-corp3.jpeg)
![](https://policepatrikekarnataka.com/wp-content/uploads/2024/04/rohan-corp4.jpeg)
ಮೃತಪಟ್ಟ ವ್ಯಕ್ತಿಯನ್ನು ನಿಡ್ನಳ್ಳಿ ಗ್ರಾಮದ ತಂಬುತ್ತಡ್ಕ ನಿವಾಸಿ ಸಯ್ಯದ್ (45) ಎಂದು ಗುರುತಿಸಲಾಗಿದೆ.
ಬೆಟ್ಟಂಪಾಡಿ ಸಮೀಪದ ಕೃಷಿಕರೋರ್ವರ ಮನೆಗೆ ಸಯ್ಯದ್ ಅಡಿಕೆ ಕೊಯ್ಯಲು ತೆರಳಿದ್ದರು. ಈ ವೇಳೆ ಅಡಿಕೆ ಕೊಯ್ಯುವಾಗ ಕಾಲು ಜಾರಿ ಮರದಿಂದ ಕೆಳಗೆ ಬಿದ್ದ ಇವರನ್ನು, ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ಬಳಿಕ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.