Facebook Twitter Instagram
    Wednesday, October 28
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026
    Share

    ಮಂಗಳೂರು: ದೇರಳಕಟ್ಟೆಯ ಖಾಸಗಿ ಪದವಿ ಕಾಲೇಜೊಂದರಲ್ಲಿ ಏಳು ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರ್ಯಾಗಿಂಗ್ ಮಾಡಿ, ಬೆದರಿಕೆ ಹಾಕಿರುವ ಆರೋಪ ಕೇಳಿಬಂದಿದೆ. ಈ ಸಂಬಂಧ ಸಂತ್ರಸ್ತ ವಿದ್ಯಾರ್ಥಿಯೊಬ್ಬರು ನೀಡಿದ ದೂರಿನ ಮೇರೆಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ದೂರಿನಲ್ಲಿ ಏನಿದೆ?

    ಅ. 2ರಂದು ದೂರುದಾರ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ಪ್ರಾರ್ಥನೆಗೆಂದು ಕಾಲೇಜು ಆವರಣದ ಹೊರಗೆ ತೆರಳಿದ್ದ ವೇಳೆ ಹಿರಿಯ ವಿದ್ಯಾರ್ಥಿಗಳಾದ ಅಶಬ್ ಹಾಗೂ ಅಶ್ನಾಕ್ ಬಂದು ಬೆದರಿಕೆ ಹಾಕಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

    ಅ. 15ರಂದು ದೂರುದಾರ ವಿದ್ಯಾರ್ಥಿ ಹಾಗೂ ಇತರ ಆರು ಮಂದಿ ಸ್ನೇಹಿತರು ಊಟಕ್ಕೆಂದು ಕಾಲೇಜು ಕ್ಯಾಂಪಸ್ ಮುಂಭಾಗದ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಆರೋಪಿ ಅಶಬ್ ಅವರನ್ನು ಖಾಸಗಿ ಹೋಟೆಲ್‌ನ ಕೊಠಡಿಗೆ ಕರೆದೊಯ್ದು ಅಕ್ರಮವಾಗಿ ಕೂಡಿ ಹಾಕಿದ್ದಾನೆ. ಬಳಿಕ ಹಾಡು ಹಾಡುವಂತೆ ಒತ್ತಾಯಿಸಿ, ಹಾಡದಿದ್ದರೆ ಕೊಠಡಿಯಿಂದ ಹೊರಗೆ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾನೆ. ವಿದ್ಯಾರ್ಥಿಗಳು ಹಾಡಿದ್ದನ್ನು ಮೊಬೈಲ್‌ನಲ್ಲಿ ರೆಕಾರ್ಡ್ ಮಾಡಿ ಇತರರಿಗೆ ಹಂಚಿಕೊಂಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಅ. 22ರಂದು ಆರೋಪಿ ಅಶಬ್ ಹಾಗೂ ಮತ್ತೊಬ್ಬ ವಿದ್ಯಾರ್ಥಿ ಬೈಕ್‌ನಲ್ಲಿ ಬಂದು ದೂರುದಾರನ ಸ್ನೇಹಿತನನ್ನು ಜಾಹಿದ್ ಎಂಬಾತನ ಕೊಠಡಿಗೆ ಕರೆದೊಯ್ದು ರ್ಯಾಗಿಂಗ್ ಮಾಡಿದ್ದಾರೆ ಎನ್ನಲಾಗಿದೆ.

    ದಿನಕ್ಕೊಬ್ಬರಂತೆ ವಿದ್ಯಾರ್ಥಿಗಳನ್ನು ಕರೆದೊಯ್ದು ರ್ಯಾಗಿಂಗ್ ಮಾಡುವುದಾಗಿ ಬೆದರಿಕೆ ಹಾಕಿದ್ದಲ್ಲದೆ, ಈ ಬಗ್ಗೆ ಯಾರಿಗಾದರೂ ತಿಳಿಸಿದರೆ ಕೈಕಾಲು ಮುರಿಯುವುದಾಗಿ ಹಾಗೂ ಕಬರಸ್ಥಾನಕ್ಕೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಸಂತ್ರಸ್ತ ವಿದ್ಯಾರ್ಥಿ ದೂರಿನಲ್ಲಿ ಆರೋಪಿಸಿದ್ದಾನೆ.

    ಈ ಸಂಬಂಧ ಅಶಬ್, ಅಶ್ನಾಕ್ ಹಾಗೂ ಇತರರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Post Views: 1

    Related Posts

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026

    ಮಂಗಳೂರು: ಜಪ್ಪಿನಮೊಗರು ಬಳಿ ಬಸ್ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಅಪರಿಚಿತ ಯುವಕ ಸಾವು

    October 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಮಂಗಳೂರು: ಖಾಸಗಿ ಕಾಲೇಜಿನಲ್ಲಿ ರ್ಯಾಗಿಂಗ್ -ಪ್ರಕರಣ ದಾಖಲು!!

    October 28, 2026

    ಪರಿಸರ ಸಂರಕ್ಷಣಾ ಪ್ರತಿಜ್ಞಾ ಅಭಿಯಾನಕ್ಕೆ 1.36 ಲಕ್ಷಕ್ಕೂ ಅಧಿಕ ಮಂದಿ ಸಾಥ್

    October 27, 2026

    ಗೋಹತ್ಯೆ ಅಪರಾಧ, ಆದರೆ ಕಾನೂನುಬದ್ಧ ಮಾಂಸ ಸಾಗಣೆ ಉಲ್ಲಂಘನೆಯಲ್ಲ- ಮಂಗಳೂರು ನಗರ ಪೊಲೀಸ್ ಕಮೀಷನರ್

    October 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.