Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ 8 ಲಕ್ಷ ರೂ.ಪರಿಹಾರ ಘೋಷಣೆ
    ಇತ್ತೀಚಿನ ಸುದ್ದಿ

    ಸಾವಿನಲ್ಲೂ ಸಾರ್ಥಕತೆ ಮೆರೆದ ರಕ್ಷಿತಾ ಕುಟುಂಬಕ್ಕೆ ಸರ್ಕಾರದಿಂದ 8 ಲಕ್ಷ ರೂ.ಪರಿಹಾರ ಘೋಷಣೆ

    September 23, 2022
    Share

    ಚಿಕ್ಕಮಗಳೂರು: ಸಾವಿನಲ್ಲೂ ಸಾರ್ಥಕತೆ ಮೆರೆದ ಚಿಕ್ಕಮಗಳೂರಿನ ಕಡೂರು ಸೋಮನಹಳ್ಳಿ ತಾಂಡಾದ ರಕ್ಷಿತಾ ಕುಟುಂಬಕ್ಕೆ ರಾಜ್ಯ ಸರ್ಕಾರ 8 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ.

    ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ರೂ. ತಾಂಡಾ ಅಭಿವೃದ್ಧಿ ನಿಗಮದಿಂದ 1 ಲಕ್ಷ ರೂ., ಉದ್ಯಮಶೀಲತೆ ಯೋಜನೆಯಡಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಶೇಖರ್ ನಾಯ್ಕ ಮತ್ತು ಲಕ್ಷ್ಮೀಬಾಯಿ ದಂಪತಿಯ ಪುತ್ರಿ ವಿದ್ಯಾರ್ಥಿನಿಯಾಗಿದ್ದ ರಕ್ಷಿತಾ ಬಸ್ ಅಪಘಾತದಲ್ಲಿ ತಲೆಗೆ ಪೆಟ್ಟಾಗಿ ಮಿದುಳು ನಿಷ್ಕ್ರಿಯಗೊಂಡಿತ್ತು. ಈ ಹಿನ್ನೆಲೆ ಕುಟುಂಬಸ್ಥರು ನೋವಿನಲ್ಲೂ ಮಗಳ ಬಹುಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದಿದ್ದರು. ಪಿಯು ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ರಕ್ಷಿತಾ, ಸೆ.18ರಂದು ಚಿಕ್ಕಮಗಳೂರಿನ ಸಂಬಂಧಿಕರ ಮನೆಗೆ ಬಸ್​ನಲ್ಲಿ ಹೋಗುವಾಗ ಮಾರ್ಗ ಮಧ್ಯೆ ಚಿಕ್ಕಮಗಳೂರಿನ ಹೌಸಿಂಗ್ ಬೋರ್ಡ್ ಬಳಿ ಆಯತಪ್ಪಿ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು. ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಮಿದುಳು ನಿಷ್ಕ್ರಿಯಗೊಂಡಿದೆ, ಇನ್ನು ಮಗಳು ಬದುವುದಿಲ್ಲ ಎಂಬ ಸುದ್ದಿ ಕೇಳಿ ಕಂಗಾಲದ ಪಾಲಕರು ಶುಕ್ರವಾರ ಮಗಳ ಕಣ್ಣು, ಹೃದಯ, ಕಿಡ್ನಿ, ಶ್ವಾಸಕೋಶ, ಲಿವರ್​ ದಾನ ಮಾಡುವ ಮೂಲಕ 9 ಜನರ ಬಾಳಿಗೆ ಬೆಳಕಾಗಿದ್ದರು.

    Post Views: 185

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.