Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರ ವಿರುದ್ದ ಪ್ರಕರಣ ದಾಖಲು
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ – ನಾಲ್ವರ ವಿರುದ್ದ ಪ್ರಕರಣ ದಾಖಲು

    January 5, 2023
    Share

    ಬೆಳ್ತಂಗಡಿ: ಬಾಲಕಿ ಮೇಲೆ ನೆರೆಮನೆಯ ಯುವಕನೊಬ್ಬ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೆ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ಕಡಿರುದ್ಯಾವರ ಗ್ರಾಮದ ನಾಲ್ವರ ವಿರುದ್ಧ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಜ.2ರಂದು ಪ್ರಕರಣ ದಾಖಲಿಸಲಾಗಿದೆ.

    ಕಡಿರುದ್ಯಾವರ ಗ್ರಾಮದ ಕೊಪ್ಪದಗುಂಡಿ ನಿವಾಸಿಗಳಾದ ಸುಧೀರ್‌, ಪಾರ್ವತಿ, ಮನೋಹರ್‌, ಮಾದು ಎಂಬವರು ಈ ಆರೋಪಕ್ಕೆ ಒಳಗಾಗಿದ್ದು, ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇಲೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.ನೊಂದ ಬಾಲಕಿ ಭಾನುವಾರ ಹಾಗೂ ಶಾಲಾ ರಜಾ ದಿನಗಳಲ್ಲಿ ಸುಧೀರ್‌ ಎಂಬಾತನ ಮನೆಗೆ ಆಗಾಗ ಟಿ.ವಿ ನೋಡಲು ಹೋಗುತ್ತಿದ್ದು, ಕಳೆದ ಡಿ.26ರಂದು ಆತ ಆಕೆಯನ್ನು ತನ್ನ ಅಜ್ಜಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿ, ಈ ವಿಚಾರವನ್ನು ಮನೆಯವರಲ್ಲಿ ಹೇಳಿದರೆ ಪೊಲೀಸರಿಗೆ ದೂರು ಕೊಡುವುದಾಗಿ ಹೆದರಿಸಿದನೆಂದು ಆರೋಪಿಸಲಾಗಿದೆ. ಬಾಲಕಿ ಗರ್ಭವತಿ ಆಗುತ್ತಿದ್ದಂತೆ ಈ ವಿಚಾರವನ್ನು ತಿಳಿದ ಆರೋಪಿ ಮತ್ತು ಇತರರು ಆಕೆಯನ್ನು ಕಾರಿಯಲ್ಲಿ ಕರೆದುಕೊಂಡು ಆಸ್ಪತ್ರೆಯಲ್ಲಿ ಗರ್ಭಪಾತ ಮಾಡಿಸಿರುವುದಾಗಿ ದೂರಿನಲ್ಲಿ ಅರೋಪಿಸಲಾಗಿದೆ.ಬಾಲಕಿಯ ಮೇಲೆ ನಡೆದ ಈ ಕೃತ್ಯದ ಬಗ್ಗೆ ಬಂದ ದೂರಿನನ್ವಯ ಬೆಳ್ತಂಗಡಿ ಸಿಡಿಪಿಒ ಮತ್ತು ಅಧಿಕಾರಿಗಳು ಸ್ಥಳಕ್ಕೆ ತೆರಳಿ ಮಾಹಿತಿ ಪಡೆಯಲು ಪ್ರಯತ್ನಿಸಿದರೂ, ಮಾಹಿತಿ ನೀಡಲಿಲ್ಲ. ನಂತರ ಮಕ್ಕಳ ಕಲ್ಯಾಣ ಸಮಿತಿಯ ಸೂಚನೆಯಂತೆ ಮೂಡುಬಿದ್ರೆಯ ಪ್ರಜ್ಞಾ ನಿರ್ಗತಿಕ ಮಕ್ಕಳ ಕುಟೀರದಲ್ಲಿ ಆಪ್ತ ಸಮಲೋಚನೆ ನಡೆಸಿ, ಬಳಿಕ ನೀಡಿದ ದೂರಿನಂತೆ ಜ.2ರಂದು ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಆರೋಪಿಗಳ ಮೇಲೆ ಪೋಕ್ಸೋ ಸಹಿತ ಇತರ ಪ್ರಕರಣ ದಾಖಲಾಗಿದೆ.

    Post Views: 171

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.