Facebook Twitter Instagram
    Saturday, September 12
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಅಪ್ರಾಪ್ತೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ
    ಇತ್ತೀಚಿನ ಸುದ್ದಿ

    ಮಂಗಳೂರು: ಅಪ್ರಾಪ್ತೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷಗಳ ಕಠಿಣ ಶಿಕ್ಷೆ, ದಂಡ

    August 4, 2024
    Share

    ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿರುವ ಆರೋಪ ಸಾಬೀತಾಗಿರುವ ಹಿನ್ನೆಲೆಯಲ್ಲಿ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ 20 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಬೆಳ್ತಂಗಡಿ ತಾಲೂಕು ಕೊಕ್ರಾಡಿಯ ಯೋಗೀಶ (26) ಶಿಕ್ಷೆಗೊಳಗಾದವನು. 2020ರಲ್ಲಿ ಆರೋಪಿ ಬಾಲಕಿಯನ್ನು ಪುಸಲಾಯಿಸಿ ಕಾಡು ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದನು. ಪರಿಣಾಮ ಬಾಲಕಿ ಗರ್ಭಿಣಿಯಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸ್ ವೃತ್ತ ನಿರೀಕ್ಷಕ ಶಿವಕುಮಾ‌ರ್ ಬಿ. ತನಿಖೆ ನಡೆಸಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣವನ್ನು ಕೈಗೆತ್ತಿಕೊಂಡ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್‌ಟಿಎಸ್‌ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತ್ತು. 13 ಸಾಕ್ಷಿದಾರರನ್ನು ವಿಚಾರಿಸಿ 29 ದಾಖಲೆಗಳನ್ನು ಗುರುತಿಸಲಾಗಿತ್ತು. ಡಿಎನ್ಎ ವರದಿಗಳು, ಸಾಕ್ಷ್ಯ, ಪೂರಕ ಸಾಕ್ಷ್ಯಪರಿಗಣಿಸಿ ಹಾಗೂ ವಾದ ವಿವಾದ ಆಲಿಸಿದ ನ್ಯಾಯಾಲಯವು ಆರೋಪಿ ವಿರುದ್ಧ ಅಪರಾಧ ಸಾಬೀತಾಗಿದೆ ಎಂದು ತೀರ್ಮಾನಿಸಿದೆ. ಆ.2ರಂದು ನ್ಯಾಯಾಧೀಶರಾದ ಮಾನು ಕೆ.ಎಸ್‌.ಅವರು ಆರೋಪಿಗೆ ಭಾ.ದಂ.ಸಂ. ಕಲಂ 376(2)(ಎನ್) ಮತ್ತು ಕಲಂ 6 ಪೊಕ್ಸೊ ಕಾಯ್ದೆಯಂತೆ 20 ವರ್ಷಗಳ ಕಠಿಣ ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದ್ದಾರೆ. ದಂಡದ ಹಣವನ್ನು ನೊಂದ ಬಾಲಕಿಗೆ ಪಾವತಿಸುವಂತೆ ಆದೇಶಿಸಿದ್ದಾರೆ. ಅಲ್ಲದೆ ದಂಡ ಪ್ರಕ್ರಿಯೆ ಸಂಹಿತೆಯ ಕಲಂ 357 (ಎ) ಪ್ರಕಾರ ಮತ್ತು ಸಂತ್ರಸ್ತರ ಪರಿಹಾರ ಯೋಜನೆಯಡಿಯಲ್ಲಿ ನೊಂದ ನೊಂದ ಬಾಲಕಿಗೆ ಹೆಚ್ಚುವರಿಯಾಗಿ 1,50,000 ರೂ. ಹಾಗೂ ನೊಂದ ಬಾಲಕಿಯ ಮಗುವಿಗೆ 3 ಲಕ್ಷ ರೂ. ಪರಿಹಾರ ನೀಡುವಂತೆ ಕಾನೂನು ಸೇವಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಿದ್ದಾರೆ. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ಕೆ.ಬದರಿನಾಥ ನಾಯರಿ ವಾದಿಸಿದ್ದರು.

    Post Views: 200

    Related Posts

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಬೆಳ್ತಂಗಡಿ: ಬಾವಿಗೆ ಹಾರಿ ಯುವತಿ ಆತ್ಮಹತ್ಯೆ..!!

    September 11, 2026

    ಉಪ್ಪಿನಂಗಡಿ: ತಲೆಮರೆಸಿಕೊಂಡಿದ್ದ ಪೋಕ್ಸೋ ಪ್ರಕರಣದ ವಾರಂಟ್‌ ಆರೋಪಿ ಅರೆಸ್ಟ್

    September 11, 2026

    ಮುಲ್ಕಿ: ಕೊರ್ದಬ್ಬು ದೈವಸ್ಥಾನ ಕಳವು ಪ್ರಕರಣ,₹17.20 ಲಕ್ಷ ಮೌಲ್ಯದ ವಸ್ತು ಜಪ್ತಿ

    September 11, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.