Facebook Twitter Instagram
    Monday, July 27
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಮಂಗಳೂರು: ಪಿಎಸ್ಐ ಎಂದು ನಂಬಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಆರೋಪಿ ಬಂಧನ
    ಇತ್ತೀಚಿನ ಸುದ್ದಿ

    ಮಂಗಳೂರು: ಪಿಎಸ್ಐ ಎಂದು ನಂಬಿಸಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ – ಆರೋಪಿ ಬಂಧನ

    August 10, 2023
    Share

    ಮಂಗಳೂರು: ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯನ್ನು ಲಾಡ್ಜ್ ಗಳಿಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಖಾಸಗಿ ಫೋಟೋವನ್ನು ವೈರಲ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ರಾಯಚೂರು ಮೂಲದ ಯಮನೂರ ಬಂಧಿತ ಆರೋಪಿ. ಸಂತ್ರಸ್ತ ಯುವತಿಗೆ ಯಮನೂರ ಇನ್ ಸ್ಟಾಗ್ರಾಂ ಮುಖಾಂತರ ಪರಿಚಯವಾಗಿದ್ದಾನೆ. ಆತ ತಾನು ವಾಮಂಜೂರು ಸ್ಟೇಷನ್ ನಲ್ಲಿ ಪಿಎಸ್‌ಐ ಎಂದು ಆಕೆಯನ್ನು ನಂಬಿಸಿದ್ದಾನೆ. ಬಳಿಕ ಯುವತಿಯ ಮನೆಯವರಿಗೆ ಕೆಲಸ ಕೊಡಿಸುವುದಾಗಿ ಅವರ ದಾಖಲಾತಿಗಳನ್ನು ಪಡೆದುಕೊಂಡಿದ್ದಾನೆ. 2023 ಮೇಯಲ್ಲಿ ಆಕೆಯನ್ನು ಕದ್ರಿ ದೇವಸ್ಥಾನದಲ್ಲಿ ಭೇಟಿ ಮಾಡಿದ್ದಾನೆ. ಬಳಿಕ ಅದೇ ವಾರ ತಣ್ಣೀರುಬಾವಿ ಬೀಚ್ ಗೆ ಕರೆದೊಯ್ದು ಅಲ್ಲಿ ಆಕೆಯೊಂದಿಗೆ ಫೋಟೋ ತೆಗೆದಿದ್ದಾನೆ. ಬಳಿಕ ಆ ಫೋಟೋವನ್ನು ವೈರಲ್ ಮಾಡುವುದಾಗಿ ಹೆದರಿಸಿ ಸಂತ್ರಸ್ತ ಯುವತಿಯನ್ನು ಬೆಂಗಳೂರಿಗೆ ಕರೆಯಿಸಿದ್ದಾನೆ. ಅಲ್ಲಿ ರಾತ್ರಿ ನೆಲಮಂಗಲದ ಲಾಡ್ಜ್ ಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಅತ್ಯಾಚಾರ ಮಾಡಿದ್ದಾನೆ. ಬಳಿಕ ಮುಲ್ಕಿಯ ಕಿನ್ನಿಗೋಳಿಯ ಲಾಡ್ಜ್ ಗೆ ಕರೆದುಕೊಂಡು ಹೋಗಿ ಅಲ್ಲಿ ಅತ್ಯಾಚಾರ ಮಾಡಿದ್ದಾನೆ. ಅಲ್ಲದೇ ಸಂತ್ರಸ್ತೆಯ ನಗ್ನ ಫೋಟೋಗಳನ್ನು ಆಕೆಯ ಮನೆಯವರು, ಸ್ನೇಹಿತರ ಮೊಬೈಲ್ ಗೆ ಹಾಗೂ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಿದ್ದಾನೆ. ಬಳಿಕ ಈ ಫೋಟೋಗಳನ್ನು ಡಿಲೀಟ್ ಮಾಡಬೇಕಾದರೆ 1,50,000 ರೂ. ನೀಡಬೇಕೆಂದು ಡಿಮ್ಯಾಂಡ್ ಮಾಡಿದ್ದಾನೆ. ಈ ಬಗ್ಗೆ ಸಂತ್ರಸ್ತ ಯುವತಿ ನೀಡಿದ ದೂರಿನಂತೆ ಮಂಗಳೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದೀಗ ಆರೋಪಿ ಯಮನೂರನನ್ನು ಪೊಲೀಸರು ಮಂಗಳೂರಿನಲ್ಲಿ ದಸ್ತಗಿರಿ ಮಾಡಲಾಗಿದೆ. ಇದೀಗ ಆತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 241

    Related Posts

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ನಮ್ಮ ಬಗ್ಗೆ
    ನಮ್ಮ ಬಗ್ಗೆ

    ನಮ್ಮ ' ಪೊಲೀಸ್ ಪತ್ರಿಕೆ ಕರ್ನಾಟಕ ' ಸುದ್ದಿವಾಹಿನಿಯು ಸರಕಾರದ ಎಲ್ಲಾ ಇಲಾಖೆಗಳ ನೆಚ್ಚಿನ ಸಂಬಂಧ ಹಾಗೂ ಸಹಕಾರಗಳೊಂದಿಗೆ, ಅಪರಾಧ ಸುದ್ದಿಗಳಿಗೆ ಹೆಚ್ಚಿನ ಶ್ರದ್ದೆಯನ್ನು ಕೊಡುತ್ತಾ, ಅದರೊಂದಿಗೆ ಕರಾವಳಿ ಸುದ್ದಿ, ರಾಜ್ಯ ಸುದ್ದಿ, ರಾಷ್ಟೀಯ ಸುದ್ದಿ, ಅಂತಾರಾಷ್ಟ್ರೀಯ ಸುದ್ದಿ, ರಾಜಕೀಯ, ಸಿನಿಮಾ, ಕ್ರೀಡೆ ಮತ್ತು ಅರೋಗ್ಯ ಸುದ್ದಿಗಳನ್ನು ನಿಮ್ಮ ಮುಂದಿಡುತಿದ್ದೇನೆ.

    Facebook WhatsApp
    ಇತ್ತೀಚಿನ ಸುದ್ದಿ

    ಪಾದಚಾರಿಗೆ ಢಿಕ್ಕಿ ತಪ್ಪಿಸಲು ಹೋಗಿ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮನೆ ಅಂಗಳಕ್ಕೆ ನುಗ್ಗಿದ ಲಾರಿ

    July 27, 2026

    ಮಂಗಳೂರು ಏರ್‌ಪೋರ್ಟ್‌ನಲ್ಲಿ ಭದ್ರತಾ ಸಿಬ್ಬಂದಿಯ ಸಮಯಪ್ರಜ್ಞೆ; ಕಳೆದುಹೋದ ₹9 ಲಕ್ಷ ಮೌಲ್ಯದ ವಸ್ತುಗಳು ಸುರಕ್ಷಿತ

    July 27, 2026

    ಫೇಸ್‌ಬುಕ್ ಲಿಂಕ್ ನಂಬಿದ ಹಿರಿಯ ನಾಗರಿಕ; ₹3.73 ಲಕ್ಷ ಸೈಬರ್ ವಂಚಕರ ಪಾಲು

    July 27, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.