Facebook Twitter Instagram
    Saturday, April 25
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಡುಪಿ: ಬೀಚ್‌ ಬಳಿ ಮೃತಪಟ್ಟ ಅಪರೂಪದ ಮೀನು ‘ಸ್ಪಾಟೆಡ್ ಮೊರೈ ಈಲ್ಸ್’..!
    ಇತ್ತೀಚಿನ ಸುದ್ದಿ

    ಉಡುಪಿ: ಬೀಚ್‌ ಬಳಿ ಮೃತಪಟ್ಟ ಅಪರೂಪದ ಮೀನು ‘ಸ್ಪಾಟೆಡ್ ಮೊರೈ ಈಲ್ಸ್’..!

    July 18, 2023
    Share

    ಉಡುಪಿ: ಅಪರೂಪ ಹಾಗೂ ಆಕರ್ಷಣೀಯವಾದ ‘ಸ್ಪಾಟೆಡ್ ಮೊರೈ ಈಲ್ಸ್’ ಮೀನು ಸುರತ್ಕಲ್ ಬೀಚ್ ಬಳಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

    ಇದರ ವೈಜ್ಞಾನಿಕ ಹೆಸರು ಜಿಮ್ನೋಥೊರಾಕ್ಸ್ ಮೊರಿಂಗಾ. ಸ್ಥಳೀಯವಾಗಿ ಆರೋಳಿ ಮೀನು ಎಂಬುದಾಗಿ ಕರೆಯುತ್ತಾರೆ.

    ನೋಡಲು ಕನ್ನಡಿ ಹಾವಿನಂತೆ ಕಂಡು ಬರುವ ಈ ಮೀನು ಕಪ್ಪು ಚುಕ್ಕೆಗಳಿಂದ ಬಹಳಷ್ಟು ಆಕರ್ಷಣೀಯವಾಗಿದೆ.ಈ ಜಾತಿಯ ಮೀನು ಹೆಚ್ಚಾಗಿ ಕೆಂಪು ಬಣ್ಣದಿಂದ ಕೂಡಿರುತ್ತದೆ.

    ಆದರೆ ಈ ರೀತಿ ಚುಕ್ಕೆಗಳೊಂದಿಗೆ ಕಂಡುಬಂದಿರುವ ಈ ಮೀನು ಸ್ಥಳೀಯರಿಗೆ ಅಪರೂಪವಾಗಿದೆ.ದ್ವೀಪದ ಬಳಿ ಇರುವ ಹವಳ ದಿಬ್ಬದಂತಹ ಸ್ಥಳಗಳಲ್ಲಿ ವಾಸ ಮಾಡುತ್ತದೆ.

    ಪ್ರಕ್ಷುಬ್ಧವಾದ ಕಡಲಿನ ಅಲೆಗಳ ಅಬ್ಬರದಿಂದ ತೀರಕ್ಕೆ ಬಂದಿರಬಹುದು ಎಂದು ಮಂಗಳೂರು ಸಮುದ್ರ ಮೀನುಗಾರಿಕೆ ಸಂಶೋಧನಾ ಸಂಸ್ಥೆಯ ಮಂಗಳೂರು ಪ್ರಾದೇಶಿಕ ಕೇಂದ್ರ ವಿಜ್ಞಾನಿ ರಾಜೇಶ್ ಕೆ ಎಂ ತಿಳಿಸಿದ್ದಾರೆ.

    ಇದು ಸಾಮಾನ್ಯವಾಗಿ 60 ಸೆಂಟೀ ಮೀಟರ್ ಉದ್ದ ಬೆಳೆಯುತ್ತದೆ.ಗರಿಷ್ಠ 2.51 ಕೇಜಿ ತೂಗುತ್ತದೆ. ಒಂಟಿಯಾಗಿ ವಾಸ ಮಾಡುತ್ತದೆ.

    ಉಷ್ಣ ವಲಯದ ನೀರಿನಲ್ಲಿ ವಾಸಿಸುವ ಈ ಮೀನುಗಳು ಮೊಟ್ಟೆ ಇಡಲು ವಲಸೆ ಹೋಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ. ತುಳುವಿನಲ್ಲಿ ಈ ಮೀನುನನ್ನು ಮರಂಚಾ ಮೀನು ಎಂದು ಕರೆಯುತ್ತಾರೆ.ಕಲ್ಲು ಇರುವ ಪ್ರದೇಶದಲ್ಲಿ ಈ ಮೀನು ಗಾಳಕ್ಕೆ ಅಪರೂಪಕ್ಕೆ ಸಿಗುತ್ತದೆ.

    ಇದರ ಹಲ್ಲು ಹರಿತವಾಗಿರುತ್ತದೆ. ಇದನ್ನು ಸ್ಥಳೀಯರು ತಿನ್ನುವುದಿಲ್ಲ ಎಂದು ಸ್ಥಳೀಯ ಮೀನುಗಾರರು ತಿಳಿಸಿದ್ದಾರೆ.

    Post Views: 200

    Related Posts

    ಭಾರತದ ನಕ್ಷೆಯಲ್ಲಿ ಮಹತ್ವದ ಬದಲಾವಣೆ: ರಾಜ್ಯ ರಾಜಧಾನಿಗೆ ಸಂಸತ್ತಿನ ಕಾನೂನು ಮಾನ್ಯತೆ

    April 24, 2026

    ಪಾತ್ರೆಯಲ್ಲಿ ಸಿಲುಕಿದ ಪುಟ್ಟ ಮಗು: ಪೊಲೀಸರ ಸಮಯೋಚಿತ ರಕ್ಷಣಾ ಕಾರ್ಯಕ್ಕೆ ಶ್ಲಾಘನೆ

    April 24, 2026

    ವಿದ್ಯುತ್ ಅವಘಡದಲ್ಲಿ ನವವಿವಾಹಿತ ಸೇರಿದಂತೆ ಇಬ್ಬರ ಸಾವು

    April 24, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.