Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಖುಲಾಸೆ
    ಇತ್ತೀಚಿನ ಸುದ್ದಿ

    ಬಿಜೈ ರಾಜಾ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ರವಿ ಪೂಜಾರಿ ಖುಲಾಸೆ

    November 9, 2023
    Share

    ಮಂಗಳೂರಿನಲ್ಲಿಭೂಗತ ಪಾತಕಿ ರವಿ ಪೂಜಾರಿಯ ವಿರುದ್ದ ಧಾಖಲಾಗಿದ್ದ ಬಿಜೈ ರಾಜನ ಕೊಲೆ ಪ್ರಕರಣ ದಲ್ಲಿ ರವಿ ಪೂಜಾರಿಯನ್ನು ಖುಲಾಸೆಗೊಳಿಸಿ ಮಂಗಳೂರಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
    2012 ನೇ ಇಸವಿಯಲ್ಲಿ ನಗರದ ಫಳ್ನೀರ್ ವೆಸ್ಟ್ಗೇಟ್ ಟವರ್ಸ್ ಕಟ್ಟಡದಲ್ಲಿರುವ ನ್ಯಾಷನಲ್ ಮೆಡಿಕಲ್ ಬಳಿಯಲ್ಲಿರುವ ಕಾಯಿನ್ ಬೂತ್ ನ ಬಳಿ ರವಿಪೂಜಾರಿಯು ಒಳಸಂಚು ನಡೆಸಿ ಶೈಲೇಶ್ ರಾಜ ಅಲಿಯಾಸ್ ಬಿಜೈ ರಾಜನನ್ನು ತಲವಾರಿನಿಂದ ಕಡಿದು ಗಂಭೀರವಾಗಿ ಗಾಯಗೊಳಿಸಿ ಕೊಲೆ ಮಾಡಿಸಿದ ರವಿ ಪೂಜಾರಿ ಮತ್ತು ಅತನ ಸಹಚರರ ವಿರುದ್ದ ಮಂಗಳೂರಿನ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
    ಈ ಪ್ರಕರಣದಲ್ಲಿಪೊಲೀಸರು ತನಿಖೆ ನಡೆಸಿ ರವಿ ಪೂಜಾರಿ ಮತ್ತು ಅತನ ಸಹಚರರ ಮೇಲೆ ದೋಷರೋಪಣಾ ಪಟ್ಟಿ ಸಲ್ಲಿಸಿದ್ದರು. ಸದ್ರಿಘಟನೆಗಳ ಸಮಯ ರವಿಪೂಜಾರಿ ವಿದೇಶದಲ್ಲಿ ತಲೆಮರೆಸಿ ಕೊಂಡಿದ್ದು, 2021 ನೇ ಇಸವಿಯಲ್ಲಿ ರವಿ ಪೂಜಾರಿಯನ್ನು ಸೆನೆಗಲ್‌ನಲ್ಲಿ ಬಂಧಿಸಿದ್ದು, ತದನಂತರ ಭಾರತಕ್ಕೆ ಹಸ್ತಾಂತರಿಸಲಾಗಿತ್ತು. ಭಾರತಕ್ಕೆ ಹಸ್ತಾಂತರಿಸಿದ ನಂತರ ಆತನ ವಿರುದ್ಧ ದಾಖಲಾದ ಎಲ್ಲ ಪ್ರಕರಣಗಳಲ್ಲಿ ಪೊಲೀಸರು ಹೆಚ್ಚುವರಿ ತನಿಖೆ ನಡೆಸಿ ಹೆಚ್ಚುವರಿ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

    ರವಿಪೂಜಾರಿ ವಿರುದ್ದ ಧಾಖಲಾದ ಎರಡು ಪ್ರಕರಣಗಳಲ್ಲಿ ಮಾನ್ಯ ಪ್ರಿನ್ಸಿಪಾಲ್  ಸೀನಿಯರ್ ಸಿವಿಲ್ ಜಡ್ಜ್ ಹಾಗೂ ಒಂದು ಪ್ರಕರಣದಲ್ಲಿ ನ್ಯಾಯಾಲಯ ಮಂಗಳೂರು, ಸೇರಿ ಒಟ್ಟು 4 ಪ್ರಕರಣಗಳಲ್ಲಿ ರವಿಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಲಾಗಿದೆ.
    ಬಿಜೈ ರಾಜಾ ಕೊಲೆ ಪ್ರಕರಣಗಳಲ್ಲಿ ವಿಚಾರಣೆ ನಡೆಸಿದ ಗೌರವಾನ್ವಿತ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ ಮಲ್ಲಿಕಾರ್ಜುನ ಸ್ವಾಮಿ ಯವರು ರವಿ ಪೂಜಾರಿಯನ್ನು ಖುಲಾಸೆ ಗೊಳಿಸಿ ತೀರ್ಪು ನೀಡಿರುತ್ತಾರೆ. ಇನ್ನು ರವಿ ಪೂಜಾರಿಯ ವಿರುದ್ದ ಹಲವು ಪ್ರಕರಣಗಳು ಮಂಗಳೂರು ಹಾಗೂ ಬೆಂಗಳೂರಿನಲ್ಲಿ ತನಿಖೆಗೆ ಬಾಕಿ ಇರುತ್ತದೆ. ರವಿ ಪೂಜಾರಿ ಪರವಾಗಿ ಮಂಗಳೂರಿನ ಖ್ಯಾತ
    ವಕೀಲರಾದ ಬಿ. ಅರುಣ್ ಬಂಗೇರ ಮತ್ತು ರಿಹಾನಾ ಪರ್ವೀನ್ ವಾದಿಸಿದ್ದರು.

    Post Views: 228

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.