Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಉಪ್ಪಿನಂಗಡಿ: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯ ಬಂಧನ
    ಇತ್ತೀಚಿನ ಸುದ್ದಿ

    ಉಪ್ಪಿನಂಗಡಿ: ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯ ಬಂಧನ

    October 2, 2025
    Share

    ಉಪ್ಪಿನಂಗಡಿ: ಕಾರಿನಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿರುವ ಘಟನೆ ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಬೆದ್ರೋಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ಗ್ರಾಮದ ಮಠ ನಿವಾಸಿ ರಜಾಕ್ (43) ಬಂಧಿತ ಆರೋಪಿ.ದಿನಾಂಕ ಅಕ್ಟೋಬರ್ 1 ರಂದು ಉಪ್ಪಿನಂಗಡಿ ಪೊಲೀಸ್ ಠಾಣೆಯ ಪೊಲೀಸ್‌ ಉಪನಿರೀಕ್ಷಕರಾದ ಅವಿನಾಶ್ ಹೆಚ್ ರವರು ಮತ್ತು ಸಿಬ್ಬಂದಿ ಠಾಣಾ ವ್ಯಾಪ್ತಿಯಲ್ಲಿ ರೌಂಡ್ಸ್ ಕರ್ತವ್ಯದಲ್ಲಿ ವಾಹನ ತಪಾಸಣೆ ಮಾಡುವ ಸಮಯ ಸುಮಾರು 4 ಗಂಟೆಗೆ ನೆಲ್ಯಾಡಿ ಕಡೆಯಿಂದ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕಪ್ಪು ಕಾರೊಂದನ್ನು ನಿಲ್ಲಿಸುವಂತೆ ಸೂಚಿಸಿದಾಗ ಅದರ ಚಾಲಕ ನಿಲ್ಲಿಸದೇ ದೂರದಲ್ಲಿ ನಿಲ್ಲಿಸಿ ಚಾಲಕ ಇಳಿದು ಅಲ್ಲಿಂದ ಓಡಿ ಹೋಗಲು ಪ್ರಯತ್ನಿಸಿದ್ದಾನೆ. ಕೂಡಲೇ ಪೊಲೀಸ್ ಉಪನಿರೀಕ್ಷಕರಾದ ಅವಿನಾಶ್ ಮತ್ತು ಸಿಬ್ಬಂದಿ ಓಡಿಹೋಗಿ ಚಾಲಕನನ್ನು ಹಿಡಿದುಕೊಂಡು ವಿಚಾರಿಸಿದಾಗ ಸರಿಯಾಗಿ ಉತ್ತರವನ್ನು ಹೇಳದೆ ಅಸ್ಪಷ್ಟವಾಗಿ, ತೊದಲುತ್ತಾ ಅಮಲು ಪದಾರ್ಥ ಅಥವಾ ಮಾದಕ ವಸ್ತುವನ್ನು ಸೇವನೆ ಮಾಡಿರುವಂತೆ ಮಾತನಾಡುತ್ತಿರುವುದು ಕಂಡು ಆತನ ಬಗ್ಗೆ ಅನುಮಾನಗೊಂಡು ಅವನ ಹೆಸರು ವಿಳಾಸವನ್ನು ಕೇಳಿದ್ದಾರೆ. ಆಗ ಆತ ತಾನು ರಜಾಕ್ ಉಪ್ಪಿನಂಗಡಿಯ ಮಠನಿವಾಸಿ ಎಂದಿದ್ದಾನೆ. ಇವನು ಸರಿಯಾಗಿ ಉತ್ತರವನ್ನು ನೀಡದೇ ಇದ್ದುದರಿಂದ ಅನುಮಾನಗೊಂಡು ಆತನಲ್ಲಿ ಈ ವಾಹನದ ಮೂಲ ದಾಖಲಾತಿಯನ್ನು ಕೇಳಿದಾಗ ಹಾಗೂ ಹೆಚ್ಚಿನ ವಿಚಾರಣೆ ಮಾಡಿದಾಗ ರಜಾಕನು ಎಂ ಡಿ ಎಂ ಎ ಮಾದಕ ದ್ರವ್ಯವನ್ನು ಸೇವನೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಪದೇ ಪದೇ ಕೇಳಿ ವಿಚಾರಿಸಿದಾಗ ಇತನು ಸೇವನೆ ಮತ್ತು ಮಾರಾಟ ಮಾಡುವ ಸಲುವಾಗಿ ಎಂ.ಡಿ.ಎಂ.ಎ ಮಾಧಕ ದ್ರವ್ಯವನ್ನು ಕಾರಿನಲ್ಲಿ ಇಟ್ಟುಕೊಂಡಿರುವುದಾಗಿ ಒಪ್ಪಿಕೊಂಡಿದ್ದು.

    ಈ ಮಾದಕ ವಸ್ತು ಎಂ.ಡಿ.ಎಂ.ಎ ನು ಬೆಂಗಳೂರಿನ ಮೆಜೆಸ್ಟಿಕ್ ಬಳಿ ಯಾರೋ ಅಪರಿಚಿತ ವ್ಯಕ್ತಿಯಿಂದ ಎಂ.ಡಿ.ಎಂ.ಎ ನ್ನು ಪಡೆದುಕೊಂಡು ಉಪ್ಪಿನಂಗಡಿ, ಮಠ, ಹಿರೇಬಂಡಾಡಿ ಕಡೆಗಳಲ್ಲಿ ಗಿರಾಕಿಗಳನ್ನು ಹುಡುಕಿ ಅಕ್ರಮವಾಗಿ ಹೆಚ್ಚಿನ ಹಣ ಸಂಪಾದನೆ ಮಾಡುವ ಉದ್ದೇಶದಿಂದ ಮಾರಾಟ ಮಾಡಲೆಂದು ಕೊಂಡು ಹೋಗುತ್ತಿರುವುದಾಗಿ ತಿಳಿಸಿರುತ್ತಾನೆ.ಕೊನೆಗೆ ಪರಿಶೀಲಿಸಿದಾಗ ಒಂದು ಪ್ಲಾಸ್ಟಿಕ್ ಕವರಿನಲ್ಲಿದ್ದ 12.35 ಗ್ರಾಂ ತೂಕದ 20.000 ರೂ ಮೌಲ್ಯ ಎಂಡಿಎಂಎ ಮಾದಕ ವಸ್ತು ಪತ್ತೆಯಾಗಿದೆ. ಅದನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೇ 10 ಸಾವಿರ ರೂಪಾಯಿ ಮೌಲ್ಯದ ಒಂದು ಮೊಬೈಲ್, 3 ಲಕ್ಷ ಮೌಲ್ಯದ ಟೊಯೊಟಾ ಕಂಪೆನಿಯ ಕ್ಯಾಂಬ್ರಿ ಕಾರನ್ನು ವಶಪಡಿಸಿಕೊಂಡಿದ್ದಾರೆ.

    Post Views: 127

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.