Facebook Twitter Instagram
    Tuesday, June 9
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಕಾರ್ಕಳ: ಜಾನುವಾರು ಕಳವು ಪ್ರಕರಣ; ಜಾಮೀನಿನಲ್ಲಿ ಹೊರಬಂದಿದ್ದ ನಾಲ್ವರು ಆರೋಪಿಗಳಿಗೆ ಮರು ಬಂಧನ
    ಇತ್ತೀಚಿನ ಸುದ್ದಿ

    ಕಾರ್ಕಳ: ಜಾನುವಾರು ಕಳವು ಪ್ರಕರಣ; ಜಾಮೀನಿನಲ್ಲಿ ಹೊರಬಂದಿದ್ದ ನಾಲ್ವರು ಆರೋಪಿಗಳಿಗೆ ಮರು ಬಂಧನ

    March 30, 2026
    Share

    ಕಾರ್ಕಳ: ಜಾನುವಾರು ಕಳವು ಪ್ರಕರಣದಲ್ಲಿ ಸಂಘಟಿತ ಕೃತ್ಯ ಎಸಗಿರುವ ನಾಲ್ವರು ಆರೋಪಿಗಳ ವಿರುದ್ಧ ಕೋಕಾ ಕಾಯಿದೆ ಹಾಕಿ ಅವರನ್ನು ಮರು ಬಂಧನಕ್ಕೆ ಒಳ ಪಡಿಸಲಾಗಿದೆ.

    ಕಾರ್ಕಳದ ನಲ್ಲೂರು ಗ್ರಾಮದ ಯೂನಿಸ್ (31), ಮೂಡಬಿದಿರೆ ಪುತ್ತಿಗೆ ಗ್ರಾಮದ ಮಿಜಾರು ನಿವಾಸಿ ಇಕ್ಬಾಲ್ (29), ಕಲ್ಲಬೆಟ್ಟು ಗ್ರಾಮದ ನಾಸೀರ್ (28) ಮತ್ತು ಶೌಕತ್ ಅಲಿ (34) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು 2025ರ ಸಪ್ಟೆಂಬರ್ 29ರಂದು ತಡ ರಾತ್ರಿ ಕಾರ್ಕಳ ತಾಲೂಕಿನ ಶಿರ್ಲಾಲು ಗ್ರಾಮದ ಹಾಡಿಯಂಗಡಿಯ ಜಯಶ್ರೀ ಪೂಜಾರಿ ಎಂಬವರ ಮನೆಯ ಹಟ್ಟಿಗೆ ನುಗ್ಗಿ ಜಾನುವಾರುಗಳನ್ನು ಕಳ್ಳತನ ಮಾಡಲು ಹೋಗಿದ್ದು, ಆಗ ಎಚ್ಚರಗೊಂಡು ಬಂದ ಜಯಶ್ರೀ ಪೂಜಾರಿ ಅವರಿಗೆ ಆರೋಪಿಗಳು ತಲವಾರು ತೋರಿಸಿ ಬೆದರಿಸಿ ಹಟ್ಟಿಯಲ್ಲಿದ್ದ 35,000 ರೂಪಾಯಿ ಮೌಲ್ಯದ ಮೂರು ಜಾನುವಾರುಗಳನ್ನು ವಾಹನದಲ್ಲಿ ತುಂಬಿಸಿಕೊಂಡು ಹೋಗಿ ವಧೆ ಮಾಡಿರುವುದಾಗಿ ದೂರಲಾಗಿತ್ತು. ಈ ಬಗ್ಗೆ ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರು, ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ನಂತರದಲ್ಲಿ ಆರೋಪಿಗಳು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದರು. ಮುಂದಿನ ತನಿಖೆಯಲ್ಲಿ ಆರೋಪಿಗಳು ಸಂಘಟಿತರಾಗಿ ಈ ಕೃತ್ಯವನ್ನು ನಡೆಸಿರುವುದು ತಿಳಿದು ಬಂದಿರುವುದರಿಂದ ಆರೋಪಿಗಳ ವಿರುದ್ಧ ಕೋಕಾ ಕಾಯಿದೆಯನ್ನು ಜಾರಿ ಮಾಡಲಾಗಿದೆ. ಈಗಾಗಲೇ ನ್ಯಾಯಾಲಯದ ಜಾಮೀನು ಮೂಲಕ ಹೊರ ಬಂದಿರುವ ಎಲ್ಲಾ ಆರೋಪಿಗಳ ಜಾಮೀನುಗಳನ್ನು ರದ್ದು ಪಡಿಸಿ ಮತ್ತೆ ಬಂಧಿಸಿ, ನ್ಯಾಯಾಯಲಕ್ಕೆ ಹಾಜರುಪಡಿಸಲಾಗಿದ್ದು, ಅವರಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

    Post Views: 85

    Related Posts

    ಮಂಗಳೂರು: ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಬಂಧನ

    June 9, 2026

    ವೆನ್‌ಲಾಕ್ ಆಸ್ಪತ್ರೆಯಲ್ಲಿ ಕನ್ನಡ ಕಡ್ಡಾಯ: ವೈದ್ಯರಿಗೆ ಅಧೀಕ್ಷಕರ ಕಟ್ಟುನಿಟ್ಟಿನ ಸೂಚನೆ

    June 9, 2026

    ಮಹಿಳಾ ಐಪಿಎಸ್ ಅಧಿಕಾರಿಯ ರಹಸ್ಯ ಎಂಟ್ರಿ; ಪಬ್‌ನ ಕರಾಳ ಮುಖ ಅನಾವರಣ

    June 8, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.