Facebook Twitter Instagram
    Friday, April 24
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»Uncategorized»ಇನ್ಮುಂದೆ ಪೊಲೀಸರು ರೀಲ್ಸ್‌ ಮಾಡುವಂತಿಲ್ಲ: ಇಲಾಖೆಯಿಂದ ಬಂತು ಖಡಕ್‌ ಎಚ್ಚರಿಕೆ
    Uncategorized

    ಇನ್ಮುಂದೆ ಪೊಲೀಸರು ರೀಲ್ಸ್‌ ಮಾಡುವಂತಿಲ್ಲ: ಇಲಾಖೆಯಿಂದ ಬಂತು ಖಡಕ್‌ ಎಚ್ಚರಿಕೆ

    July 23, 2024
    Share

    ಬೆಂಗಳೂರು: ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ನೀವು ಏನನ್ನು ನೋಡಬಹುದು ಎಂದು ಹೇಳಲು ಸಾಧ್ಯವಿಲ್ಲ. ಬೆಳಗ್ಗಿನಿಂದ ಸಂಜೆಯವರೆಗೂ ವಿವಿಧ ರೀತಿಯ ವೀಡಿಯೋಗಳು ವೈರಲ್ ಆಗಿದ್ದು, ಇದರಲ್ಲಿ ಫೈಟಿಂಗ್, ಡ್ಯಾನ್ಸ್ ಮತ್ತು ವಿಚಿತ್ರ ಕೃತ್ಯಗಳನ್ನು ಮಾಡುವ ವೀಡಿಯೊಗಳು ಸೇರಿವೆ.

    ರೀಲ್ಸ್​​ ಮಾಡಬೇಕು ಹೆಚ್ಚಿನ ಜನರು ವೀಕ್ಷಣೆ ಮಾಡಬೇಕು ಬೇಗನೆ ಜನಪ್ರಿಯತೆ ಪಡೆಯಬೇಕು ಎಂದು ಹಕವರು ಹಂಬಲಿಸುತ್ತಿರುತ್ತಾರೆ. ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ ಅವರು ಬಿಸಿ ಮುಟ್ಟಿಸಿದ್ದಾರೆ.

    ಸಮವಸ್ತ್ರದಲ್ಲಿ ರೀಲ್ಸ್ ಮಾಡುವ ಪೊಲೀಸರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿರುವ ಅವರು, ಇಲಾಖೆಗೆ ಸಂಬಂಧಪಡದೇ ಇರುವ ವಿಷಯಗಳು ಇಲಾಖೆಯ ಘನತೆ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತವೆ. ಪೊಲೀಸ್ ಸಮವಸ್ತ್ರವು ಪೊಲೀಸರ ಬದ್ಧತೆ, ಸಮರ್ಪಣೆ ಮತ್ತು ಹೊಣೆಗಾರಿಕೆಯ ಸಂಕೇತವಾಗಿದೆ. ಡಿಜಿಟಲ್ ಫೋರಮ್​​ನಲ್ಲಿ ಇದರ ಬಳಕೆಯು ಈ ಮೌಲ್ಯಗಳನ್ನು ಪ್ರತಿಬಿಂಬಿಸುವಂತಿರಬೇಕಾಗುತ್ತದೆ. ಹಾಗಾಗಿ ಸಮವಸ್ತ್ರದಲ್ಲಿ ರೀಲ್ಸ್ ಮಾಡುವವರಿಗೆ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿದೆ.

    ಈ ಬಗ್ಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು, ಇತ್ತೀಚಿನ ದಿನಗಳಲ್ಲಿ ಪೊಲೀಸ್ ಸಿಬ್ಬಂದಿ ರೀಲ್ಸ್‌ಗಳನ್ನು ಮಾಡುತ್ತಿದ್ದಾರೆ. ಇದು ಹವ್ಯಾಸ, ಚಟವೋ ಗೊತ್ತಿಲ್ಲ, ಇಂತಹವುಗಳು ಇಲಾಖೆಗೆ ಶೋಭೆ ತರುವಂತದಲ್ಲ. ಸಮವಸ್ತ್ರಕ್ಕೆ ಸಮಾಜದಲ್ಲಿ ಅದರದ್ದೇ ಆದಂತಹ ಗೌರವ ಇದೆ. ಕೆಲವರು ತಮ್ಮ ಅಪಾರವಾದ ಪ್ರತಿಭೆಯನ್ನು ತೋರಿಸುತ್ತಿದ್ದಾರೆ. ಹೀಗಾಗಿ ಸಮವಸ್ತ್ರಗಳನ್ನ ಧರಿಸಿ ಆ ರೀಲ್ಸ್ ಗಳನ್ನ ಮಾಡೋದು ಇಲಾಖೆಗೆ ಸರಿಯಾಗೋದಿಲ್ಲ. ಹೀಗಾಗಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೊ, ರೀಲ್ಸ್‌ಗಳನ್ನ ಹಾಕುವಂತಿಲ್ಲ ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

    ಸಾಮಾಜಿಕ ಜಾಲತಾಣಗಳಲ್ಲಿ ಇಲಾಖೆ ಹಾಗೂ ಪೊಲೀಸ್ ಕರ್ತವ್ಯಗಳಿಗೆ ಸಂಬಂಧಿಸದ ಯಾವುದೇ ವಿಷಯಗಳ ಕುರಿತು ಸಮವಸ್ತ್ರದಲ್ಲಿರುವ ಫೋಟೋ, ವಿಡಿಯೊ, ರೀಲ್ಸ್‌ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವಂತಿಲ್ಲ. ಕರ್ನಾಟಕ ರಾಜ್ಯ ನಾಗರಿಕ ಸೇವಾ ನಿಯಮ (ನಡತೆ) ಪ್ರಕಾರ ಯಾವುದೇ ಸರ್ಕಾರಿ ನೌಕರನು ಅಧಿಕೃತವಾದ ಯಾವುದೇ ದಾಖಲೆ ಅಥವಾ ಮಾಹಿತಿಯನ್ನು ಮಾದ್ಯಮಗಳು ಅಥವಾ ಸಾಮಾಜಿಕ‌ ಜಾಲತಾಣಗಳಲ್ಲಿ ಹಂಚಿಕೊಳ್ಳುವಂತಿಲ್ಲ. ಪೊಲೀಸ್ ವೃತ್ತಿಗೆ ಸಂಬಂಧ ಪಡದ ವಿಷಯಗಳ ಕುರಿತು ಪೊಲೀಸ್ ಸಮವಸ್ತ್ರದಲ್ಲಿ ಫೋಟೊಗಳು, ವಿಡಿಯೊ, ರೀಲ್ಸ್ ಇತ್ಯಾದಿಗಳನ್ನು ಹರಿಬಿಡದಂತೆ ಜಾಗೃತಗೊಳಿಸುವಂತೆ ಹಾಗೂ ಯಾವುದೆ ಲೋಪ ಕಂಡುಬಂದಲ್ಲಿ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಎಲ್ಲಾ ವಿಭಾಗಗಳ ಡಿಸಿಪಿಗಳಿಗೆ ಸೂಚಿಸಿದ್ದಾರೆ.

    Post Views: 274

    Related Posts

    ಕಾಪು: ಸ್ಕೂಟಿಗೆ ಬಸ್ ಡಿಕ್ಕಿ- ಬಾಲಕಿ ಸಾವು

    April 22, 2026

    ಸುಳ್ಯ : ಕಂಬಕ್ಕೆ ಬೈಕ್ ಡಿಕ್ಕಿ- ಮೆಸ್ಕಾಂ ಸಿಬ್ಬಂದಿ ಮೃತ್ಯು

    March 25, 2026

    ಏಪ್ರಿಲ್ 1, 2026 ರಿಂದ ಟೋಲ್ ದರ ಏರಿಕೆ: ₹3,000 ದಿಂದ ₹3,075 ಗೆ ವಾರ್ಷಿಕ ಪಾಸ್?

    March 14, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.