Facebook Twitter Instagram
    Saturday, March 7
    • About Us
    • Contact Us
    Facebook Twitter Instagram
    Police Pathrike Karnataka
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    Police Pathrike Karnataka
    Home»ಇತ್ತೀಚಿನ ಸುದ್ದಿ»ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆ- ಅಹಿತಕರ ಘಟನೆ ತಪ್ಪಿಸಿದ ಶಾಸಕ ವೇದವ್ಯಾಸ್ ಕಾಮತ್
    ಇತ್ತೀಚಿನ ಸುದ್ದಿ

    ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆ- ಅಹಿತಕರ ಘಟನೆ ತಪ್ಪಿಸಿದ ಶಾಸಕ ವೇದವ್ಯಾಸ್ ಕಾಮತ್

    October 12, 2023
    Share

    ಮಂಗಳೂರು : ಮಂಗಳೂರು ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಯಪ್ರಜ್ಞೆ ಮೆರೆದ ಘಟನೆ ಬೆಳಕಿಗೆ ಬಂದಿದೆ.

    ಸೋಮವಾರ ಮಂಗಳೂರಿನಲ್ಲಿ ನಡೆದ ಹಿಂದೂ ಸಂಘಟನೆಗಳ ನೇತೃತ್ವದಲ್ಲಿ ಶೌರ್ಯ ಜಾಗರಣಾ ರಥಯಾತ್ರೆ ಮತ್ತು ಸಮಾವೇಶ ಆಯೋಜನೆಗೊಂಡಿತ್ತು.

    ಸಂಜೆ ವೇಳೆ ಸುಮಾರಿಗೆ ಪಾಂಡೇಶ್ವರದ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಕಂಪೌಂಡ್‌ಗೆ ಯಾರೋ ಕೋಳಿ ಮೊಟ್ಟೆ ಹಾಗೂ ತೆಂಗಿನಕಾಯಿ ಎಸೆದಿದ್ದಾರೆ. ಈ ಸೂಕ್ಷ್ಮಾ ವಿಚಾರನ್ನು ಸ್ಥಳೀಯರು ಕೂಡಲೇ ಶಾಸಕ ವೇದವ್ಯಾಸ್ ಕಾಮತ್ ಗಮನಕ್ಕೆ ತಂದಿದ್ದಾರೆ. ಕೂಡಲೇ ಶಾಸಕರು ಪೊಲೀಸ್ ಕಮಿಷನರ್ ಗೆ ಫೋನ್ ಮಾಡಿ ಯಾವುದೇ ಕಾರಣಕ್ಕೂ ಪರಿಸ್ಥಿತಿ ಕದಡದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

    ಕೂಡಲೇ ಘಟನೆಯ ಸ್ಥಳಕ್ಕೆ ಧಾವಿಸಿದ ಡಿಸಿಪಿ ಸಿದ್ಧಾರ್ಥ ಗೋಯಲ್ ತಂಡ ಪರಿಶೀಲನೆ ನಡೆಸಿದಾಗ, ಅದು ದೇವಸ್ಥಾನದ ಎದುರಿನ ಪ್ಲ್ಯಾಟ್ ನಿಂದ ಅನ್ಯ ಸಮುದಾಯದ ಇಬ್ಬರು ಪುಟಾಣಿಗಳು ಮಾಡಿದ ಮಕ್ಕಳಾಟ ಎಂಬುದು ಗೊತ್ತಾಗಿತ್ತು.

    10 ವರ್ಷದೊಳಗಿನ ಈ ಮಕ್ಕಳು ಪ್ಲ್ಯಾಟ್ ನ ಮಹಡಿಯ ಕಿಟಕಿಯಿಂದ ದೇವಸ್ಥಾನದ ಅಂಗಣಕ್ಕೆ ತಮ್ಮ ಕೈಯಲ್ಲಿದ್ದ ಮೊಟ್ಟೆ ಹಾಗೂ ತೆಂಗಿನಕಾಯಿ ಎಸೆದಿದ್ದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಕೂಡಲೇ ಮಕ್ಕಳ ಪೋಷಕರನ್ನು ಠಾಣೆಗೆ ಕರೆಸಿ ಎಚ್ಚರಿಕೆ ನೀಡಿದ್ದಲ್ಲದೇ ಇದು ಪುನರಾವರ್ತನೆಯಾಗದಂತೆ ನೋಡಿಕೊಳ್ಳಬೇಕೆಂದು ಎಚ್ಚರಿಕೆಯನ್ನೂ ನೀಡಿದರು, ಜೊತೆಗೆ ದೇವಸ್ಥಾನದ ಹೊರಾಂಗಣಕ್ಕೂ ಪ್ರತ್ಯೇಕ ಸಿಸಿ ಕ್ಯಾಮರಾ ಅಳವಡಿಸುವಂತೆ ದೇವಸ್ಥಾನ ಆಡಳಿತ ಮಂಡಳಿಗೆ ತಿಳಿಸಿ ಪ್ರಕರಣಕ್ಕೆ ಸುಖಾಂತ್ಯ ಹಾಡಿದ್ದಾರೆ. ಸಕಾಲಿಕ ಕ್ರಮದಿಂದ  ಸಾಮರಸ್ಯ – ಸೌಹಾರ್ದತೆಗೆ ಒತ್ತು ನೀಡಿದ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತರ ಸಮಯ ಪ್ರಜ್ಞೆ ಪ್ರಶಂಸೆಗೆ ಪಾತ್ರವಾಗಿದೆ.

    Post Views: 208

    Related Posts

    ವಿಟ್ಲ: ಸೈಕಲ್ ನಿಂದ ಬಿದ್ದು ಬಾಲಕ ಮೃತ್ಯು!

    March 7, 2026

    ಬಂಟ್ವಾಳ: ನದಿ ದಡದಲ್ಲಿ ಆಧಾರ್ ಕಾರ್ಡ್ ಪತ್ತೆ ಪ್ರಕರಣ – ಅಂಚೆ ಇಲಾಖೆ ವಿರುದ್ಧ ಕೇಸ್‌

    March 7, 2026

    ಕಾರ್ಕಳ: ಹಲವು ವರ್ಷಗಳಿಂದ ತಲೆಮಾರಿಸಿಕೊಂಡಿದ್ದ ಆರೋಪಿ ಅರೆಸ್ಟ್

    March 7, 2026
    ಲಿಂಕ್ಸ್
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    Facebook WhatsApp
    • ಮುಖಪುಟ
    • ರಾಜ್ಯ ಸುದ್ದಿ
    • ರಾಷ್ಟ್ರೀಯ ಸುದ್ದಿ
    • ಅಂತಾರಾಷ್ಟ್ರೀಯ
    • ರಾಜಕೀಯ
    • ಕ್ರೈಂ ಸ್ಟೋರಿ
    • ಸಿನಿಮಾ
    • ಕ್ರೀಡೆ
    • ಆರೋಗ್ಯ
    • ಕರಾವಳಿ ಸುದ್ದಿ
    • About Us
    • Contact Us
    © 2026 policepatrikekarnataka.com | All Rights Reserved | Powered By Blueline Computers

    Type above and press Enter to search. Press Esc to cancel.