ಮದುವೆ ನಿರಾಕರಿಸಿದ ಯುವತಿಯ ಬಲಾತ್ಕಾರಕ್ಕೆ ಪ್ರಯತ್ನ ಮಾಡಿ ಕೊಲೆಗೈಯಲು ಯತ್ನಿಸಿದ ಆರೋಪದಲ್ಲಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೊಬ್ಬನನ್ನು ಬಂಧಿಸಲಾಗಿದೆ.
ಪೆರ್ಡೂರಿನ ಪ್ರದೀಪ್ ಪೂಜಾರಿ (26) ಬಂಧಿತ ಆರೋಪಿ. ಮದುವೆಯಾಗುವುದಾಗಿ ಒತ್ತಾಯಿಸಿದ ಆರೋಪಿ ಯುವತಿ ನಿರಾಕರಿಸಿದಾಗ ಅತ್ಯಾಚಾರಕ್ಕೆ ಯತ್ನಿಸಿದ್ದ. ಅಲ್ಲದೇ ಕತ್ತು ಹಿಸುಕಿ ಕೊಲೆಗೆ ಯತ್ನಿಸಿದ್ದ ಎಂದು ಉಡುಪಿ ಮಹಿಳಾ ಠಾಣೆಗೆ ದೂರು ನೀಡಲಾಗಿತ್ತು.
ಅದರಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.




